ಪಾಕಿಸ್ಥಾನದ ಮಸೀದಿಯಲ್ಲಿ ಸ್ಫೋಟ: 30 ಸಾವು, 50 ಕ್ಕೂ ಹೆಚ್ಚು ಜನ ಗಂಭೀರ
Team Udayavani, Mar 4, 2022, 4:06 PM IST
ಇಸ್ಲಾಮಾಬಾದ್ : ವಾಯವ್ಯ ಪಾಕಿಸ್ಥಾನದಲ್ಲಿ ಶುಕ್ರವಾರ ಪ್ರಾರ್ಥನೆಯ ವೇಳೆ ಶಿಯಾ ಮಸೀದಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಪೇಶಾವರದ ಕ್ವಿಸ್ಸಾ ಖ್ವಾನಿ ಬಜಾರ್ ಪ್ರದೇಶದ ಜಾಮಿಯಾ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವಾಗಲೇ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದುವರೆಗೆ 30 ಮೃತದೇಹಗಳನ್ನು ಆಸ್ಪತ್ರೆಗೆ ತರಲಾಗಿದೆ ಎಂದು ಡಾನ್ ವರದಿ ಮಾಡಿದೆ. ಗಾಯಗೊಂಡಿರುವ 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಬ್ಬರು ದಾಳಿಕೋರರು ಮಸೀದಿಗೆ ಪ್ರವೇಶಿಸಲು ಪ್ರಯತ್ನಿಸಿ ಕಾವಲು ನಿಂತ ಪೊಲೀಸರ ಮೇಲೆ ಗುಂಡು ಹಾರಿಸಿದರು ಎಂದು ರಾಜಧಾನಿ ನಗರ ಪೊಲೀಸ್ ಅಧಿಕಾರಿ ಪೇಶಾವರ್ ಇಜಾಜ್ ಅಹ್ಸಾನ್ ಹೇಳಿದ್ದಾರೆ. ಈ ವೇಳೆ ಓರ್ವ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗುಂಡಿನ ದಾಳಿಯ ನಂತರ ಸ್ಫೋಟ ಸಂಭವಿಸಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ