ಜೋಡೋಗೆ ಈ ಜೋಡಿಯ ಟಕ್ಕರ್‌; ಇಂದಿನಿಂದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಜನಸಂಕಲ್ಪ

Team Udayavani, Oct 11, 2022, 7:00 AM IST

ಜೋಡೋಗೆ ಈ ಜೋಡಿಯ ಟಕ್ಕರ್‌; ಇಂದಿನಿಂದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‌ವೈ ಜನಸಂಕಲ್ಪ

ಬೆಂಗಳೂರು/ರಾಯಚೂರು: ರಾಜ್ಯದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ “ಭಾರತ್‌ ಜೋಡೋ’ ಯಾತ್ರೆ ಸಾಗು ತ್ತಿದ್ದರೆ, ಮಂಗಳವಾರದಿಂದ ಜನ ಸಂಕಲ್ಪ ಹೆಸರಲ್ಲಿ ಕೃಷ್ಣೆ- ತುಂಗೆಯರನಾಡಲ್ಲಿ ರಾಜ್ಯ ರಾಜಕಾರಣದ ರಣವೀಳ್ಯ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದಲ್ಲಿ “ಜೋಡಿ ಯಾತ್ರೆ’ ಆರಂಭಗೊಳ್ಳಲಿದೆ.

ಎಸ್ಸಿ-ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ಹುರುಪಿನಲ್ಲಿರುವ ಬಿಜೆಪಿಗೆ ಜೋಡಿ ಯಾತ್ರೆ ಇನ್ನಷ್ಟು ಹುಮ್ಮಸ್ಸು ತುಂಬಲಿದೆ. ಮೀಸ ಲಾತಿ ಹೆಚ್ಚಿಸುವ ನಿರ್ಧಾರ ಕೈಗೊಂಡ ಬಳಿಕ ಇದು ಮೊದಲ ಕಾರ್ಯಕ್ರಮ ವಾಗಿದ್ದು, ರಾಯಚೂರು ಗ್ರಾಮಾಂ ತರ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಜನಸಂಕಲ್ಪ ಯಾತ್ರೆ ಹೊರಡುತ್ತಿರುವುದು ವಿಶೇಷ. 50 ಸಾವಿರಕ್ಕೂ ಹೆಚ್ಚು ಜನ ಭಾಗಿಯಾಗುವ ನಿರೀಕ್ಷೆ ಇದೆ.

ರಾಯಚೂರು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಪ್ರಾಬಲ್ಯ ವಿದ್ದು, ಏಳು ವಿಧಾನಸಭೆ ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳು ಈ ಸಮುದಾಯಕ್ಕೇ ಮೀಸಲು. ಈಗ ಕಾರ್ಯಕ್ರಮ ನಡೆ ಯುತ್ತಿರುವ ರಾಯಚೂರು ಗ್ರಾಮೀಣ ಕ್ಷೇತ್ರವೂ ಮೀಸಲು ಕ್ಷೇತ್ರ. ಹಾಗಾಗಿ ಎಸ್‌ಟಿ ಮೋರ್ಚಾ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದೆ. ಇದೇ ವೇಳೆ ಮೀಸಲಾತಿ ಹೆಚ್ಚಳಕ್ಕೆ ಕಾರಣ ರಾದ ಸಿಎಂ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್‌ವೈ ಅವರನ್ನು ಅಭಿನಂದಿಸಲಾಗುತ್ತಿದೆ.

ಅ. 11ರಿಂದ ಆರಂಭವಾಗಿ ಡಿ. 25ರ ವರೆಗೆ ಒಟ್ಟು 26 ದಿನಗಳ ಕಾಲ ರಾಜ್ಯದ 52 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಜೋಡಿ ಅಂದಾಜು 1,870 ಕಿ.ಮೀ. ಕ್ರಮಿಸಲಿದೆ.

ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿರುವ ಬಗ್ಗೆ ಮನೆ-ಮನೆಗೆ ತೆರಳಿ ಖಾತರಿ ಪಡಿಸಿಕೊಳ್ಳುವ ಉದ್ದೇಶ ಈ ಯಾತ್ರೆ ಯದ್ದು. ಆ ಮೂಲಕ ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ದೃಢ ಸಂಕಲ್ಪ ಹೊಂದಲಾಗಿದೆ.

ರಾಯಚೂರು ತಾಲೂಕಿನ ಗಿಲ್ಲೆಸೂ ಗೂರಿಂದ ಯಾತ್ರೆಗೆ ಚಾಲನೆ ಸಿಗಲಿದ್ದು, ಸಿಎಂ ಹಾಗೂ ಮಾಜಿ ಸಿಎಂ ಅವರ ಜೋಡಿ ಯಾತ್ರೆ ಅತ್ಯಂತ ಮಹತ್ವ ಪಡೆದಿದೆ. ಈ ಜೋಡಿ 52 ವಿಧಾನಸಭಾ ಕ್ಷೇತ್ರಗಳಲ್ಲದೆ, ಅ.16ರಂದು ಮೈಸೂರಿನಲ್ಲಿ ನಡೆಯಲಿರುವ ಎಸ್ಸಿ ಮೋರ್ಚಾ, ಅ.30ರಂದು ಕಲಬುರಗಿಯಲ್ಲಿ ಒಬಿಸಿ ಮೋರ್ಚಾ, ನ.13ರಂದು ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ, ನ.27ರಂದು ಶಿವಮೊಗ್ಗದಲ್ಲಿ ಯುವ ಮೋರ್ಚಾ, ಡಿ.11ರಂದು ಬಳ್ಳಾರಿ ಯಲ್ಲಿ ಎಸ್ಟಿ ಮೋರ್ಚಾ, ಡಿ.25ರಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ಹಾಗೂ 2023ರ ಜ.8ರಂದು ವಿಜಯಪುರದಲ್ಲಿ ಅಲ್ಪಸಂಖ್ಯಾಕರ ಮೋರ್ಚಾದ ಬೃಹತ್‌ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದೆ.

ಇವರು ಸಂಚರಿಸುವ 52 ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್ಸಿ ಮೀಸಲು 10, ಎಸ್ಟಿ ಮೀಸಲು 5, ಸಾಮಾನ್ಯ 37 ಕ್ಷೇತ್ರಗಳಿವೆ. ಇದರಲ್ಲಿ ಬಿಜೆಪಿ ಶಾಸಕರು ಇರುವ 28, ಕಾಂಗ್ರೆಸ್‌ ಶಾಸಕರು ಇರುವ 20 ಹಾಗೂ ಜೆಡಿಎಸ್‌ ಶಾಸಕರು ಇರುವ 4 ಕ್ಷೇತ್ರಗಳಿವೆ.ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ನೇತೃತ್ವದ ತಂಡಗಳು ಯಾತ್ರೆ ಆರಂಭಿಸಿದ್ದು, 75 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿವೆ.

ಹೈವೋಲ್ಟೇಜ್ ಕೇಂದ್ರ
ಪ್ರಮುಖ ಪಕ್ಷಗಳ ಶಕ್ತಿಪ್ರದರ್ಶನಕ್ಕೆ ವೇದಿಕೆ  ಈ ಗಿಲ್ಲೆಸೂಗುರು. ಹೈವೋಲ್ಟೇಜ್ ತಾಣ. ಒಂದೆಡೆ ಬಿಜೆಪಿ ಜನಸಂಕಲ್ಪ ಯಾತ್ರೆ ಮತ್ತೂಂದೆಡೆ ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆಗಳು ಇಲ್ಲೇ ನಡೆ ಯುತ್ತಿವೆ. ಈಚೆಗೆ ಜೆಡಿಎಸ್‌ ಸಮಾವೇಶ ಕೂಡ ನಡೆದಿತ್ತು. ಜನಸಂಕಲ್ಪ ಯಾತ್ರೆಯಲ್ಲಿ 2 ಹಂತ ಗಳಲ್ಲಿ ತಲಾ 50 ಕ್ಷೇತ್ರಗಳನ್ನು ತಲುಪಲಾಗುತ್ತಿದೆ. ಮೊದಲ ಹಂತದಲ್ಲೇ ಕಲ್ಯಾಣ ಕರ್ನಾಟಕದ ರಾಯಚೂರು, ವಿಜಯ ನಗರ, ಬಳ್ಳಾರಿ, ಕೊಪ್ಪಳ, ಕಲಬುರಗಿ ಜಿಲ್ಲೆಗಳತ್ತ ಗಮನಹರಿಸಿರುವುದು ವಿಶೇಷ. ಡಿಸೆಂಬರ್‌ನೊಳಗೆ 150 ಕ್ಷೇತ್ರಗಳಲ್ಲಿ ಈ ಯಾತ್ರೆ ನಡೆಸುವ ಗುರಿ ಹಾಕಿಕೊಂಡಿದೆ.

ಜನಸಂಕಲ್ಪ ಯಾತ್ರೆ ಅ.11ರಿಂದ ಡಿ.25
ಜೋಡಿ: ಬಸವರಾಜ ಬೊಮ್ಮಾಯಿ- ಯಡಿಯೂರಪ್ಪ
ಯಾತ್ರೆಯ ದಿನ: 26
ವಿಧಾನಸಭಾ ಕ್ಷೇತ್ರ: 52

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಿಂದ ಸೋತ ಕ್ಷೇತ್ರಗಳು, ನೂರಕ್ಕೆ ನೂರು ಗೆಲ್ಲುವ ಮತ್ತು 50:50 ಅವಕಾ ಶವಿರುವ ಕ್ಷೇತ್ರಗಳನ್ನು ಗಮನ ದಲ್ಲಿಟ್ಟು ಕೊಂಡು ಯಾತ್ರೆ ಆರಂ ಭಿಸಲಾಗಿದ್ದು, ಮತದಾರರ ಮನೆ-ಮನೆಗೆ ತಲುಪುತ್ತೇವೆ. ಆ ಮೂಲಕ 150 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ.
– ಎನ್‌. ರವಿಕುಮಾರ್‌, ವಿಧಾನಪರಿಷತ್‌ ಸದಸ್ಯ

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.