ಕೆಪಿಸಿಸಿಯವರು ಸತೀಶ್ ಜಾರಕಿಹೊಳಿ ಮೇಲೆ ಶಿಸ್ತುಕ್ರಮ ಜರುಗಿಸಲಿ: ಬಿಎಸ್‌ ವೈ


Team Udayavani, Nov 9, 2022, 1:30 PM IST

ಕೆಪಿಸಿಸಿಯವರು ಸತೀಶ್ ಜಾರಕಿಹೊಳಿ ಮೇಲೆ ಶಿಸ್ತುಕ್ರಮ ಜರುಗಿಸಲಿ: ಬಿಎಸ್‌ ವೈ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಕ್ಷಣವೇ ಕ್ಷಮಾಪಣೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಅವರ ಪಕ್ಷದವರೇ ಒಪ್ಪಿಕೊಳ್ಳುತ್ತಿಲ್ಲ. ಹೇಳಿದ್ದನ್ನು ಮತ್ತೆ ಸಮರ್ಥಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಸತೀಶ್ ಜಾರಕಿಹೊಳಿ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಒಂದು ವೇಳೆ ತಾವು ಹೇಳಿದ್ದೇ ಸರಿ ಎನ್ನುವುದಾದರೆ ಕೆಪಿಸಿಸಿಯವರು ಅವರ ಮೇಲೆ ಶಿಸ್ತುಕ್ರಮ ಜರುಗಿಸಲಿ. ಒಂದು ಧರ್ಮದ ಮತಕ್ಕಾಗಿ ಇನ್ನೊಂದು ಧರ್ಮವನ್ನು ಹಿಯಾಳಿಸುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.

ಹಿಂದೂಗಳಿಗೆ ಅಪಮಾನ ಮಾಡುವ ಕೆಲಸವನ್ನು ಅವರು ಮಾಡಿದ್ದಾರೆ. ತಕ್ಷಣವೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಜನರೇ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಸತೀಶ್ ಜಾರಕಿಹೊಳಿಗೆ ಜನ ತಕ್ಕ ಉತ್ತರವನ್ನು ನೀಡುತ್ತಾರೆ: ಬಿ.ಸಿ.ಪಾಟೀಲ್

ಪಕ್ಷದ ಕೇಂದ್ರ ಚುನಾವಣಾ ಸಮಿತಿ ಸಭೆ ಇರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಯಲಿದೆ. ಇಂಥ ಸಂದರ್ಭದಲ್ಲಿ ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತುಕತೆ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವ ಕುರಿತು ಮಾತನಾಡಿದ ಅವರು,  ಕರ್ನಾಟಕದ ವಿಷಯ ಬಂದಾಗ ಮುಖ್ಯಮಂತ್ರಿಗಳು, ಪಕ್ಷದ ರಾಜ್ಯಾಧ್ಯಕ್ಷರು, ರಾಜ್ಯ ಉಸ್ತುವಾರಿಗಳಿದ್ದಾಗ ಚರ್ಚೆಗೆ ಬರುತ್ತದೆ ಎಂದು ಹೇಳಿದರು.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ನನಗೆ ಗೊತ್ತಿಲ್ಲದ ಯಾವುದೇ ವಿಷಯಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟನೆ  ಕೊಟ್ಟರು.

ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರು ವರುಣಾದಿಂದ  ಸ್ಪರ್ಧಿಸುತ್ತಾರ ಎಂಬ ಮಾಧ್ಯಮದವರ ಪ್ರಶ್ನೆಗೆ ನಾನು ಶಿಕಾರಿಪುರದಿಂದ ಸ್ಪರ್ಧಿಸಬೇಕೆಂದು ಸೂಚಿಸಿದ್ದೇನೆ. ಅಂತಿಮವಾಗಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದವಾಗಿರಬೇಕಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.