ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯವನ್ನು ಕುಂದಿಸದು : ಬಿ.ವೈ.ವಿಜಯೇಂದ್ರ ಟ್ವೀಟ್
Team Udayavani, Aug 26, 2020, 4:52 PM IST
ಬೆಂಗಳೂರು : ದುರುದ್ದೇಶ ಪೂರಿತ ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ ಅಂತೆಯೇ ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯವನ್ನು ಕುಂದಿಸದು ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಬಿ.ವೈ.ವಿಜಯೇಂದ್ರ ಅವರು ರಾಜ್ಯದಲ್ಲಿ ತಮ್ಮದೇ ಆದ ಪರ್ಯಾಯ ಸರಕಾರವನ್ನು ನಡೆಸುತ್ತಿದ್ದಾರೆ ಎಂದು ದೂರಿ ಬಿಜೆಪಿಯ 7 ಮಂದಿ ಶಾಸಕರು ತಮ್ಮ ಹೈಕಮಾಂಡಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರು ಇಂದು ಮೈಸೂರಿನಲ್ಲಿ ಬಿಡುಗಡೆಮಾಡಿದ್ದರು ಈ ವಿಚಾರಕ್ಕೆ ಸಂಬಂಧಿಸಿ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ, ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ, ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ ಜೊತೆಗೆ ಅಪಪ್ರಚಾರಗಳಿಂದ ನನ್ನ ನೈತಿಕ ಸ್ಥೈರ್ಯ ಕುಂದಿಸದು ಎಂದು ಹೇಳಿದ್ದಾರೆ.
ಕಟ್ಟು ಕಥೆ ಕಟ್ಟುವುದರಲ್ಲಿ , ಹಸೀ ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ಎತ್ತಿದ ಕೈ, ನನ್ನನ್ನು ಗುರಿಯಾಗಿಸಿಕೊಂಡು ಮೈಸೂರಿನಲ್ಲಿಂದು ಇಂಥದ್ದೇ ಒಂದು ಹಾಸ್ಯಾಸ್ಪದವಾದ ಜೊಳ್ಳು ಆರೋಪವನ್ನು ಮಾಡಲಾಗಿದೆ. ದುರುದ್ದೇಶ ಪೂರಿತ,ರಾಜಕೀಯ ಪಿತೂರಿಯ ಆರೋಪಗಳಿಗೆ ನಾನೆಂದೂ ಬೆನ್ನು ತೋರುವುದಿಲ್ಲ. ಅಪಪ್ರಚಾರಗಳು ನನ್ನ ನೈತಿಕ ಸ್ಥೈರ್ಯ ಕುಂದಿಸದು.
— Vijayendra Yeddyurappa (@BYVijayendra) August 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಕಾಂಗ್ರೆಸ್ ಪಕ್ಷದ ನಾಲ್ಕನೇ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ
ಉರಿಗೌಡ,ನಂಜೇಗೌಡ ಹೆಸರು ರಾಜಕೀಯ ವಿಚಾರ ಆಗಬಾರದು: ಆರ್.ಅಶೋಕ್
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಪರಿಸ್ಥಿತಿ ಬರಬಾರದಿತ್ತು: ಬಿ.ವೈ.ವಿಜಯೇಂದ್ರ
ಡಿಸಿ ಕಚೇರಿ ಮುಂದೆ ಆಜಾನ್ ವಿಚಾರ: ಹಿಂದೂ ಕಾರ್ಯಕರ್ತರಿಂದ ಗೋಮೂತ್ರ ಹಾಕಿ ಸ್ಥಳ ಶುದ್ದೀಕರಣ
MUST WATCH
ಹೊಸ ಸೇರ್ಪಡೆ
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ
ಪೂರ್ಣಿಮಾ ಹೆಗಲ ಮೇಲೆ ಕೈ ಇಟ್ಟು, ‘ನಮ್ಮ ಜೊತೆಯಲ್ಲೇ ಇದ್ದಾರೆ’ ಎಂದ ಬಿಎಸ್‌ವೈ
ಅಮೃತಾ ಫಡ್ನವಿಸ್ ಗೆ ಲಂಚದ ಆಮಿಷ, ಬೆದರಿಕೆ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ