ಚುನಾವಣಾ ಫ‌ಲಿತಾಂಶ ಬಳಿಕ ರಾಜ್ಯದಲ್ಲಿ ಸಂಪುಟ ಸರ್ಕಸ್‌ ಸನ್ನಿಹಿತ

Team Udayavani, Nov 6, 2020, 9:58 PM IST

ಚುನಾವಣಾ ಫ‌ಲಿತಾಂಶ ಬಳಿಕ ರಾಜ್ಯದಲ್ಲಿ ಸಂಪುಟ ಸರ್ಕಸ್‌ ಸನ್ನಿಹಿತ

ಬೆಂಗಳೂರು: ವಿಧಾನ ಪರಿಷತ್‌ನ ನಾಲ್ಕು ಸ್ಥಾನಕ್ಕೆ ನಡೆದ ಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫ‌ಲಿತಾಂಶದ ಬಳಿಕ ಸಂಪುಟ ಸರ್ಕಸ್‌ಗೆ ಚಾಲನೆ ಸಿಗುವುದು ಬಹುತೇಕ ಖಚಿತವಾದಂತಿದೆ.

ಫ‌ಲಿತಾಂಶ ಪ್ರಕಟವಾದ ಬಳಿಕ ಪಕ್ಷದ ವರಿಷ್ಠರನ್ನು ದೂರವಾಣಿ ಕರೆ ಮೂಲಕ ಸಂಪರ್ಕಿಸಿ ಸಂಪುಟ ವಿಸ್ತರಣೆಗೆ ಒಪ್ಪಿಗೆ ಪಡೆಯಲು ಪ್ರಯತ್ನಿಸಲಾಗುವುದು ಎಂದಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಅಗತ್ಯಬಿದ್ದರಷ್ಟೇ ನ. 11ಕ್ಕೆ ದೆಹಲಿ ಪ್ರವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ. ಹಾಗಾಗಿ ದೀಪಾವಳಿ ಹಬ್ಬದ ಮೊದಲು ಇಲ್ಲವೇ ನಂತರ ಸಂಪುಟ ವಿಸ್ತರಣೆ ಸನ್ನಿಹಿತನವೆನಿಸಿದೆ.

ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ನ. 10ಕ್ಕೆ ಚುನಾವಣೆ, ಉಪಚುನಾವಣಾ ಫ‌ಲಿತಾಂಶ ಬರಬೇಕಿದ್ದು, ಅದಕ್ಕಾಗಿ ಕಾಯುತ್ತಿದ್ದೇನೆ. ಬಹುಶಃ ವರಿಷ್ಠರನ್ನು ದೂರವಾಣಿ ಕರೆ ಮೂಲಕವೇ ಸಂಪರ್ಕಿಸಿ ಚರ್ಚಿಸಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆಯಬಹುದೇ ಎಂಬ ಬಗ್ಗೆ ಚಿಂತಿಸಲಾಗುವುದು. ಅಗತ್ಯಬಿದ್ದರೆ ನ. 11ಕ್ಕೆ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಹೇಳಿದರು.

ಈಗಾಗಲೇ ಗೆದ್ದಾಗಿದೆ
ಪರಿಷತ್‌ನ ನಾಲ್ಕು ಕ್ಷೇತ್ರಗಳ ಉಪಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಹು ದೊಡ್ಡ ಅಂತರದಲ್ಲಿ ನಾವು ಈಗಾಗಲೇ ಗೆದ್ದಾಗಿದೆ. ನ. 10ರಂದು ಫ‌ಲಿತಾಂಶ ಬಂದಾಗ ಅದು ಗೊತ್ತಾಗಲಿದೆ. ನಾನು ಏನಾದರೂ ಹೇಳಿದರೆ 100 ಬಾರಿ ಯೋಚಿಸಿ, ಲೆಕ್ಕಾಚಾರ ಹಾಕಿ ಹೇಳುತ್ತೇನೆ. ಈವರೆಗೆ ನಾನು ಹೇಳಿರುವುದು ಯಾವುದೂ ವ್ಯತ್ಯಾಸವಾಗಿಲ್ಲ. ಈ ಬಾರಿಯೂ ಹೇಳುತ್ತಿದ್ದೇನೆ. ರಾಜರಾಜೇಶ್ವರಿನಗರ ಹಾಗೂ ಶಿರಾ ಕ್ಷೇತ್ರದಲ್ಲಿ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ:ನಿವೃತ್ತ ಪೋಲಿಸ್ ಅಧಿಕಾರಿಯೊಬ್ಬರ ನೆರವಿಗೆ ಧಾವಿಸಿ ಮಾನವೀಯತೆ ಮೆರೆದ ಸಿಪಿಐ ಆನಂದ್ ಕುಮಾರ್

ರಾಜರಾಜೇಶ್ವರಿನಗರ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿರುವುದರಿಂದ ಪಕ್ಷದ ಗೆಲುವಿಗೆ ಹಿನ್ನಡೆಯಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ಏನೇನೂ ತೊಂದರೆ ಇಲ್ಲ. ಯಾವುದೇ ಕಾರಣಕ್ಕೂ ತೊಂದರೆಯಾಗದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಸಂಪುಟದಲ್ಲಿ ಆರು ಸಚಿವ ಸ್ಥಾನ ಖಾಲಿಯಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿರುವ ಸಿ.ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ಈವರೆಗೆ ರಾಜೀನಾಮೆಯನ್ನು ಅಂಗೀಕರಿಸಿಲ್ಲ. ಸದ್ಯದಲ್ಲೇ ಅವರ ರಾಜೀನಾಮೆ ಅಂಗೀಕಾರವಾಗಲಿದ್ದು, ಬಳಿಕ ಏಳು ಸಚಿವ ಸ್ಥಾನ ಖಾಲಿ ಉಳಿದಂತಾಗಲಿದೆ.

ಬಿಜೆಪಿ ಸರ್ಕಾರ ರಚನೆಗೆ ಕಾರಣರಾದ ಮಾಜಿ ಸಚಿವರಾದ ಎಂ.ಟಿ.ಬಿ.ನಾಗರಾಜ್‌, ಆರ್‌.ಶಂಕರ್‌ ಜತೆಗೆ ಉಪಚುನಾವಣೆಯಲ್ಲಿ ಗೆದ್ದರೆ ಮುನಿರತ್ನ ಅವರಿಗೂ ಸಚಿವ ಸ್ಥಾನ ಬಹುತೇಕ ಖಚಿತ ಎನ್ನಲಾಗಿದೆ. ಈ ಮೂರು ಮಂದಿಗೆ ಸಚಿವ ಸ್ಥಾನ ದೊರೆತರೆ ನಾಲ್ಕು ಸ್ಥಾನ ಖಾಲಿ ಉಳಿಯಲಿದೆ. ಮಸ್ಕಿ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲಿದ್ದು, ಪ್ರತಾಪಗೌಡ ಪಾಟೀಲ್‌ ಅವರಿಗೂ ಒಂದು ಸಚಿವ ಸ್ಥಾನ ಕಾಯ್ದಿರಿಸಬೇಕಾಗಬಹುದು.

ಇದನ್ನೂ ಓದಿ:ಅಶೋಕ್‌ ಚಕ್ರಧಾರಿ ತಯಾರಿಸಿದ ಈ ಮ್ಯಾಜಿಕ್ ಲ್ಯಾಂಪ್ 24 – 60 ಗಂಟೆ ಕಾಲ ಬೆಳಗುತ್ತಂತೆ

ಆ ಹಿನ್ನೆಲೆಯಲ್ಲಿ ಬಾಕಿ ಉಳಿಯುವ ಮೂರು ಸ್ಥಾನಗಳಿಗೆ ತೀವ್ರ ಪೈಪೋಟಿ ಸೃಷ್ಟಿಯಾಗುವ ಸಾಧ್ಯತೆ ಇದೆ. ಮೂಲ ಬಿಜೆಪಿಯಿಂದ ಉಮೇಶ್‌ ಕತ್ತಿ, ಮುರುಗೇಶ್‌ ನಿರಾಣಿ, ಅರವಿಂದ ಲಿಂಬಾವಳಿ, ಜಿ.ಎಚ್‌.ತಿಪ್ಪಾರೆಡ್ಡಿ ಸೇರಿದಂತೆ ಇತರೆ ಆಕಾಂಕ್ಷಿಗಳಿದ್ದು, ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ. ಕಳೆದ ಬಾರಿ ಸಂಪುಟ ಪುನಾರಚನೆಯ ಇಂಗಿತವನ್ನು ಯಡಿಯೂರಪ್ಪ ಅವರು ವ್ಯಕ್ತಪಡಿಸಿದರೂ ವರಿಷ್ಠರು ಸ್ಪಂದಿಸಿರಲಿಲ್ಲ. ಹಾಗಾಗಿ ಈ ಬಾರಿಯೂ ವರಿಷ್ಠರು ಸಂಪುಟ ವಿಸ್ತರಣೆಗಷ್ಟೇ ಹಸಿರು ನಿಶಾನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.