ಕಾರು ಪಲ್ಟಿ : ಮಹಿಳೆಯರಿಬ್ಬರ ದುರ್ಮರಣ, ಮೂವರಿಗೆ ಗಂಭೀರ ಗಾಯ
Team Udayavani, Oct 6, 2021, 7:19 PM IST
ಹಳಿಯಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ದಾರುಣವಾಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗಳಾಗಿರುವ ದುರ್ಘಟನೆ ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಭಾಗವತಿ ಕ್ರಾಸ್ ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಮೃತರು ಕೊಲ್ಲಾಪುರದ ರಮಾನಂದ ನಗರದ ಮೀನಾ ಗಣೇಶ ಪಿಳೈ(55) ಮತ್ತು ರಾಜಮ್ಮ ಪಿಳೈ(35) ಎನ್ನುವವರಾಗಿದ್ದು, ಗಣೇಶ ಪಿಳೈ, ಸರಸ್ವತಿ ಪಿಳೈ ಮತ್ತು ರಾಧಾಕೃಷ್ಣ ಪಿಳೈ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಸಂಬಂಧಿಕರ ಮನೆಗೆ ಮಹಾಲಯ ಅಮವಾಸ್ಯೆಯ ದಿನದ ಶ್ರಾದ್ದ ಕಾರ್ಯಕ್ಕೆ ತೆರಳುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆ ನಡೆದ ತಕ್ಷಣ ಭಾಗವತಿ ಗ್ರಾಮದ ಸಮಾಜ ಸೇವಕ ಅರ್ಜುನ ಬೋವಿ ಅವರು ಸ್ಥಳಕ್ಕೆ ದೌಡಾಯಿಸಿ ಗ್ರಾಮಸ್ಥರ ಸಹಕಾರದೊಂದಿಗೆ ಕಾರನಲ್ಲಿ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹಾಗೂ ಮೃತ ದೇಹಗಳನ್ನು ಹೊರ ತೆಗೆದು ಅಂಬ್ಯೂಲೆನ್ಸ್ ಮೂಲಕ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೆರವಾದರು.
ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ಮೋತಿಲಾಲ್ ಪವಾರ್, ಪಿಎಸ್ಐಗಳಾದ ಶಿವಾನಂದ ನಾವದಗಿ, ಸತ್ಯಪ್ಪ ಹುಕ್ಕೇರಿ ಹಾಗೂ ಪ್ರೊಬೆಷನರಿ ಪಿಎಸ್ಐ ವಿಶ್ವನಾಥ ಅವರು ಭೆಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು