ರಾಜಸ್ಥಾನ: ಬಾಲಕಿಯ ಮೇಲೆ ರೇಪ್ ನಡೆಸುತ್ತಿದ್ದಾಗಲೇ ಪೊಲೀಸರಿಂದ ಬಂಧನ!
ನಾಲ್ಕೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಗಸ್ತು ತಿರುಗುವ ವಾಹನ
Team Udayavani, Feb 14, 2022, 5:06 PM IST
ಜೈಪುರ: ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಸಿಕ್ಕಿಬಿದ್ದ 50 ವರ್ಷದ ವ್ಯಕ್ತಿಯನ್ನು ಪೊಲೀಸ್ ಪೇದೆಯೊಬ್ಬರು ಸಮಯಪ್ರಜ್ಞೆಯಿಂದ ಬಂಧಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಕಾನ್ಸ್ಟೇಬಲ್ ಲಾಭುರಾಮ್ ಅವರು ಕೆಲವು ದಿನಗಳ ಹಿಂದೆ ಸಿರೋಹಿಯ ಅಭಯ್ ಕಮಾಂಡ್ ಸೆಂಟರ್ನಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬ ಸಂತ್ರಸ್ತೆಯನ್ನು ಹೊತ್ತುಕೊಂಡು ತನ್ನ ಮೋಟಾರ್ಸೈಕಲ್ನಲ್ಲಿ ಅನುಮಾನಾಸ್ಪದವಾಗಿ ಚಲಿಸುತ್ತಿರುವ ದೃಶ್ಯಾವಳಿಗಳ ಮೇಲೆ ಕಣ್ಣಿಟ್ಟರು.
ಅನುಮಾನಿಸಿ, ಲಾಭುರಾಮ್ ಇತರ ಕ್ಯಾಮೆರಾಗಳಿಂದ ಮೋಟಾರ್ಸೈಕಲ್ನ ಲೈವ್ ದೃಶ್ಯಗಳನ್ನು ಪರಿಶೀಲಿಸಿದರು ಮತ್ತು ಆರೋಪಿ ಮತ್ತೊಂದು ಸ್ಥಳದಲ್ಲಿ ಹುಡುಗಿಗೆ ಕಿರುಕುಳ ನೀಡುವುದನ್ನು ಗಮನಿಸಿದರು.
ಕೂಡಲೇ ಅವರು ಕೊತ್ವಾಲಿ ಪೊಲೀಸ್ ಠಾಣೆಯ ಅಧಿಕಾರಿಗಳ ಗಮನಕ್ಕೆ ಘಟನೆಯನ್ನು ತಂದರು. ಕೇವಲ ನಾಲ್ಕೇ ನಿಮಿಷಗಳಲ್ಲಿ, ಗಸ್ತು ತಿರುಗುವ ವಾಹನವು ಸ್ಥಳಕ್ಕೆ ತಲುಪಿತು ಮತ್ತು ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ವ್ಯಕ್ತಿಯನ್ನು ಹಿಡಿಯಲಾಗಿದೆ ಎಂದು ಸಿರೋಹಿ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಆರೋಪಿ ಮತ್ತು ಸಂತ್ರಸ್ತೆಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಬಾಲಕಿಯ ಕುಟುಂಬಸ್ಥರಿಗೆ ಕರೆ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಪೋಕ್ಸೊ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ