ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ: ರಾಜಕೀಯ ಚದುರಂಗದಾಟದಲ್ಲಿ ಲಾಭ ಯಾರಿಗೆ?


Team Udayavani, Oct 5, 2020, 3:04 PM IST

ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ: ರಾಜಕೀಯ ಚದುರಂಗದಾಟದಲ್ಲಿ ಲಾಭ ಯಾರಿಗೆ?

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ ಆದ ನಂತರ ರಾಜಕೀಯ ಪಕ್ಷಗಳು ತಮ್ಮ ಚಟುವಟಿಕೆಯನ್ನು ತೀವ್ರಗೊಳಿಸಿದ್ದವು. ಯಾರನ್ನು ಕಣಕ್ಕಿಳಿಸಬೇಕು? ಯಾವ ಕ್ಷೇತ್ರದಲ್ಲಿ ಯಾವ ರೀತಿಯ ರಣತಂತ್ರ ಹೆಣೆಯಬೇಕು, ಯಾರನ್ನು ಸೆಳೆಯಬೇಕು ಎನ್ನುವ ಲೆಕ್ಕಾಚಾರಗಳಿಗೆ ಇಂದು ಬೆಳಿಗ್ಗೆ ನಡೆದ ಒಂದು ಬೆಳವಣಿಗೆ ದೊಡ್ಡ ಟ್ವಿಸ್ಟ್ ನೀಡಿದೆ. ಅದೇ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ!

ಹೌದು, ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೇ ಹೆಸರಾದ ಡಿ ಕೆ ಶಿವಕುಮಾರ್ ಮತ್ತು ಸಹೋದರ ಡಿ ಕೆ ಸುರೇಶ್ ಮನೆ ಮತ್ತು ಆಸ್ತಿ ಪಾಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿದ್ದುಯ, ರಾಜ್ಯದಲ್ಲಿ ಸಂಚಲನ ಹುಟ್ಟಿಸಿದೆ. ಉಪಚುನಾವಣೆ ಘೋಷಣೆಯಾದ ಬಳಿಕ ದಾಳಿ ನಡೆದಿದ್ದು, ಇದು ಬಿಜೆಪಿಯ ಪ್ರತೀಕಾರದ ತಂತ್ರ ಎಂದು ಕಾಂಗ್ರೆಸ್ ಆರೋಪ ನಡೆಸುತ್ತಿದೆ.

ರಾಜಕೀಯ ಲಾಭ ಯಾರಿಗೆ?
ಉಪಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ ಈ ಬೆಳವಣಿಗೆ ನಡೆದಿದ್ದು, ಇನ್ನಷ್ಟು ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. ಈ ಸಿಬಿಐ ದಾಳಿ ರಾಜಕೀಯ ಪ್ರೇರಿತ, ಉಪಚುನಾವಣೆಯನ್ನು ಎದುರಿಸಲಾಗದ ಬಿಜೆಪಿ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಆಪಾದನೆ ಮಾಡುತ್ತಿದೆ. ಈ ವಿಚಾರವನ್ನೇ ಮುಂದಿಟ್ಟು ಚುನಾವಣೆ ಎದುರಿಸಬಹುದು. ರಾಜರಾಜೇಶ್ವರಿ ನಗರದಲ್ಲಿ ಡಿಕೆಶಿ ಮತ್ತು ಸುರೇಶ್ ಪ್ರಭಾವ ಉತ್ತಮವಾಗಿರುವ ಕಾರಣ ಈ ವಿಚಾರವನ್ನು ಮುಂದುಟ್ಟಿಕೊಂಡು ಕಾಂಗ್ರೆಸ್ ಲಾಭ ಪಡೆಯಲು ಪ್ರಯತ್ನಿಸಬಹುದು.

ಇದನ್ನೂ ಓದಿ:ಡಿಕೆ ಶಿವಕುಮಾರ್,ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ: ಟ್ರಬಲ್ ಶೂಟರ್ ಗೆ ಮತ್ತೊಂದು ಟ್ರಬಲ್

ಆರ್ ಆರ್ ನಗರ ಚುನಾವಣೆಗೆ ಮೂರು ಪಕ್ಷಗಳು ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಈ ಬೆಳವಣಿಗೆಯ ನಂತರ ತಮ್ಮ ಅಭ್ಯರ್ಥಿ ಘೋಷಣೆಯ ಲೆಕ್ಕಾಚಾರಗಳು ಬದಲಾಗಬಹುದು, ಘೋಷಣೆ ಇನ್ನೂ ತಡವಾಗಬಹುದು.

ಇದನ್ನೂ ಓದಿ:ಡಿಕೆ ಶಿವಕುಮಾರ್ ದೊಡ್ಡಾಲಹಳ್ಳಿಯ ಮನೆ ಲಾಕರ್ ಒಡೆದಾಗ ಸಿಕ್ಕಿದ್ದು ಚಿಲ್ಲರೆ ಮಾತ್ರ!

ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಆರ್.ಆರ್ ನಗರ ಕ್ಷೇತ್ರವೂ ಡಿಕೆ ಸುರೇಶ್ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲಿ ಬರುವ ಕಾರಣ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕು ಎಂದ ಡಿಕೆ ಬ್ರದರ್ಸ್ ಪಣತೊಟ್ಟವರಂತೆ ಕೆಲಸ ಮಾಡುತ್ತಿದ್ದಾರೆ. ಇದು ಅವರಿಗೆ ಪ್ರತಿಷ್ಠೆಯ ಕಣವೂ ಹೌದು. ಸದ್ಯ ದಾಳಿಯ ನಂತರ ವಿಚಾರಣೆ ಯ ತೀವ್ರತೆ ಜಾಸ್ತಿಯಾದರೆ, ಇಬ್ಬರಿಗೂ ಉಪಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ತೊಡಕಾಗಬಹುದು. ಇದು ಸಹಜವಾಗಿಯೇ ಕಾಂಗ್ರೆಸ್ ಗೆ ಹಿನ್ನೆಯಾಗುತ್ತದೆ. ಇದರ ಲಾಭ ಬಿಜೆಪಿ ಮತ್ತು ಜೆಡಿಎಸ್ ಪಡೆಯುತ್ತದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.