ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
Team Udayavani, Mar 8, 2021, 7:10 AM IST
ಬೆಂಗಳೂರು: ರಮೇಶ್ ಜಾರಕಿಹೊಳಿಯ ಅಶ್ಲೀಲ ವೀಡಿಯೋದಲ್ಲಿದ್ದ ಯುವತಿಯ ಮಾಹಿತಿಯನ್ನು ಪೊಲೀಸರು ಪತ್ತೆ ಮಾಡಿದ್ದು, ಆಕೆಯನ್ನು ಹುಡುಕಿ ಕರೆತಂದು, ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಯುವತಿಯು ಮಾ.1ರವರೆಗೂ ಬೆಂಗಳೂರಿನಲ್ಲಿದ್ದು, ಬಳಿಕ ನಾಪತ್ತೆಯಾಗಿಯಾಗಿದ್ದಾಳೆ. ಬಳಿಕ, ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅಶ್ಲೀಲ ವಿಡಿಯೋ(ಸಿ.ಡಿ) ಸಂಬಂಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ, ನಗರದಲ್ಲಿ ವಾಸವಿದ್ದಳು ಎಂಬ ಮಾಹಿತಿ ಮೇರೆಗೆ ಪೊಲೀಸರು, ಹಲವು ಪಿ.ಜಿ (ಪೇಯಿಂಗ್ ಗೆಸ್ಟ್)ಗಳನ್ನು ಪರಿಶೀಲಿಸಿದ್ದು, ಆಗ ಆಕೆಯ ವಿಳಾಸದ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.
2018ರಿಂದ ಆ ಮನೆಯಲ್ಲಿ ಯುವತಿ ವಾಸವಿದ್ದು, ಆಕೆಯ ಸ್ನೇಹಿತರು ಆಗಾಗ ಬಂದು ಹೋಗುತ್ತಿದ್ದರು ಎಂದು ಮಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಆಕೆಯ ಮೊಬೈಲ್ ಸಂಖ್ಯೆ ಹಾಗೂ ಯುವತಿ ಬಗೆಗಿನ ಇತರ ಮಾಹಿತಿ ಸಿಕ್ಕಿದೆ. ಉತ್ತರ ಕರ್ನಾಟಕ ಮೂಲದವಳಾಗಿದ್ದ ಆಕೆ ಎಂಜಿನಿಯರಿಂಗ್ ಓದಿದ್ದಳು. ಆದರೆ ಕೋರ್ಸ್ ಪೂರ್ತಿಯಾಗದ ಕಾರಣ ನಗರದ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಳು ಎಂಬ ಮಾಹಿತಿ ಸಿಕ್ಕಿದ್ದು, ಪೊಲೀಸರು ಆಕೆಯ ಪತ್ತೆಗೆ ಬಲೆ ಬೀಸಿದ್ದಾರೆ.
ನಕಲಿ ಇನ್‌ಸ್ಟಾಗ್ರಾಮ್ ಐಡಿ ಪತ್ತೆ
ಯುವತಿಯಲ್ಲಿ ನಾಲ್ಕು ನಕಲಿ ಇನ್‌ಸ್ಟಾಗ್ರಾಮ್ ಖಾತೆಗಳಿದ್ದವು ಎನ್ನಲಾಗಿದೆ. ಕೇವಲ ಎರಡು ದಿನಗಳಲ್ಲಿ ನಾಲ್ಕು ನಕಲಿ ಐಡಿ ರಚಿಸಿದ್ದು, ಈ ಐಡಿಗೆ ತಲಾ ಒಂದು, ಎರಡು, ನೂರು ಮತ್ತು 400 ಫಾಲೋವರ್ಸ್ ಇರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
ರಾಜ್ಯದ ವಿವಿಧೆಡೆ ಉತ್ತಮ ಮಳೆ : ಮಂಗಳೂರು ರಸ್ತೆ ಬದಿ ಕುಸಿತ, ಎರಡು ದಿನ ಎಲ್ಲೋ ಅಲರ್ಟ್
ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು
ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ
MUST WATCH
ಹೊಸ ಸೇರ್ಪಡೆ
ಕಾಪು: ನಾಗಬನದ ಮೇಲೆ ಉರುಳಿ ಬಿದ್ದ ಅಶ್ವಥ ಮರ, ಅಪಾರ ಹಾನಿ
ಮಾಜಿ ಶಾಸಕ, ಅಪ್ಪಟ ಗಾಂಧಿವಾದಿ ಸದಾಶಿವರಾವ್ ಭೋಸಲೆ ಇನ್ನಿಲ್ಲ
ಸೋಂಕು ನಿಯಂತ್ರಣಕ್ಕೆ ರಾತ್ರಿ ಕರ್ಫ್ಯೂ ಇನ್ನಷ್ಟು ನಗರಗಳಿಗೆ ವಿಸ್ತರಣೆ: ಗೃಹ ಸಚಿವ ಬೊಮ್ಮಾಯಿ
10 ದಿನಗಳಲ್ಲಿ ಮತ್ತಷ್ಟು ಹೆಚ್ಚಳ; ಭಾರತದಲ್ಲಿ 24 ಗಂಟೆಯಲ್ಲಿ 2 ಲಕ್ಷ ಕೋವಿಡ್ ಪ್ರಕರಣ ಪತ್ತೆ
ಬುಕಿಯಿಂದ ಬಿಟ್ ಕಾಯಿನ್, ಪತ್ನಿಗಾಗಿ ಐಫೋನ್ ಪಡೆದಿದ್ದ ಹೀತ್ ಸ್ಟ್ರೀಕ್ ಗೆ 8 ವರ್ಷ ನಿಷೇಧ!