ಜ| ರಾವತ್ ದಂಪತಿ ಪಂಚಭೂತಗಳಲ್ಲಿ ಲೀನ : ಪುತ್ರಿಯರಿಂದ ಅಂತಿಮ ವಿಧಿ

Team Udayavani, Dec 10, 2021, 5:03 PM IST

1-aa

Images and Video Courtesy : ANI

ನವದೆಹಲಿ : ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಮಡಿದಿದ್ದ ದೇಶದ ಮೂರು ಸಶಸ್ತ್ರ ಪಡೆಗಳ ಮೊತ್ತಮೊದಲ ಮುಖ್ಯಸ್ಥ (ಸಿಡಿಎಸ್‌) ಜ| ಬಿಪಿನ್‌ ರಾವತ್‌ ಮತ್ತು ಪತ್ನಿ ಮಧುಲಿಕಾ ರಾವತ್‌ ಅವರ ಅಂತ್ಯಕ್ರಿಯೆ ಶುಕ್ರವಾರ ದೆಹಲಿ ಕಂಟೋನ್ಮೆಂಟ್‌ನಲ್ಲಿರುವ ಬ್ರಾರ್ ಸ್ಕ್ವೇರ್ ರುದ್ರ ಭೂಮಿಯಲ್ಲಿ ಸಕಲ ಸೇನಾ ಗೌರವಗಳೊಂದಿಗೆ ನಡೆಸಲಾಯಿತು.

ಒಂದೇ ಚಿತೆಯಲ್ಲಿ ದಂಪತಿಗಳನ್ನು ಮಲಗಿಸಿ ಅಗ್ನಿ ಸ್ಪರ್ಷ ಮಾಡಲಾಯಿತು. ಪುತ್ರಿಯರಾದ ಕೃತಿಕಾ ಮತ್ತು ತಾರಿಣಿ ಅಂತಿಮ ವಿಧಿಗಳನ್ನು ನೆರವೇರಿಸಿದರು.

ಅಂತಿಮ ಯಾತ್ರೆಯ ವೇಳೆ ಸಾವಿರಾರು ಜನರು ಗೌರವ ನಮನ ಸಲ್ಲಿಸಿದರು. 17 ಸುತ್ತು ಕುಶಾಲ ತೋಪುಗಳನ್ನು ಹಾರಿಸಿ ರಾವತ್ ಅವರಿಗೆ ಗೌರವ ಸಲ್ಲಿಸಲಾಯಿತು.

ಜನರಲ್ ಬಿಪಿನ್ ರಾವತ್ ಅವರಿಗೆ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ , ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಗೌರವ ಸಲ್ಲಿಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಮೂರು ಸೇನಾ ಮುಖ್ಯಸ್ಥರಾದ ,ಭೂ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿ ಕುಮಾರ್ ಮತ್ತು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿಆರ್ ಚೌಧರಿ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.

ಬಿಪಿನ್ ಜಿ ಕಾ ನಾಮ್ ರಹೇಗಾ

ರಾವತ್ ದಂಪತಿಗಳ ಪಾರ್ಥಿವ ಶರೀರ ದೆಹಲಿ ಕಂಟೋನ್ಮೆಂಟ್‌ನಲ್ಲಿರುವ ಬ್ರಾರ್ ಸ್ಕ್ವೇರ್ ಸ್ಮಶಾನದ ಕಡೆಗೆ ಸೇನಾ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗುತ್ತಿರುವಾಗ ನಾಗರಿಕರು “ಜಬ್ ತಕ್ ಸೂರಜ್ ಚಾಂದ್ ರಹೇಗಾ, ಬಿಪಿನ್ ಜಿ ಕಾ ನಾಮ್ ರಹೇಗಾ” ಎಂಬ ಘೋಷಣೆಗಳನ್ನು ಮೊಳಗಿಸಿದರು.

ಫ್ರಾನ್ಸ್ ರಾಯಭಾರಿಯಿಂದ ಅಂತಿಮ ನಮನ

ಫ್ರಾನ್ಸ್ ರಾಯಭಾರಿ ಎಮ್ಯಾನುಯೆಲ್ ಲೆನೈನ್ ಅವರು ಅಂತಿಮ ನಮನ ಸಲ್ಲಿಸಿ, ನಾನು ಗೌರವವನ್ನು ಸಲ್ಲಿಸಿ, ನಾವು ಒಬ್ಬ ದೃಢವಾದ, ದೃಢನಿಶ್ಚಯ ಉಳ್ಳ  ಮಹಾನ್ ಮಿಲಿಟರಿ ನಾಯಕನನ್ನ ಕಳೆದುಕೊಂಡಿದ್ದೇವೆ.  ನನ್ನ ದೇಶದೊಂದಿಗೆ ಸಹಕಾರವನ್ನು ಮುಂದುವರಿಸಲು, ಉತ್ತಮ ಸ್ನೇಹಿತನನ್ನ ಸದಾ ನೆನಪಿಸಿಕೊಳ್ಳುತ್ತೇವೆ ಎಂದರು.

ಬ್ರಿಟಿಷ್ ಹೈ ಕಮಿಷನರ್ ಅಂತಿಮ ನಮನ

ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್ ಅವರು ಅಂತಿಮ ನಮನ ಸಲ್ಲಿಸಿ, ಇದು ನಂಬಲಾಗದಷ್ಟು ದುಃಖಕರವಾಗಿದೆ. ಯುಕೆಯಲ್ಲಿ ನಾವು ಜಂಟಿ ರಕ್ಷಣಾ ವಿಧಾನವನ್ನು ಪ್ರಾರಂಭಿಸಿದ ಪ್ರವರ್ತಕರಾಗಿದ್ದವರು ರಾವತ್. ಅವರು ಭಾರತದಲ್ಲಿ ಸೇನೆಯನ್ನು ಮುನ್ನಡೆಸಿದರು. ಭಾರತವು ಒಬ್ಬ ಮಹಾನ್ ನಾಯಕ, ಸೈನಿಕ ಮತ್ತು ಸಂಪೂರ್ಣವಾಗಿ ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡಿರುವುದು ತುಂಬಾ ದುಃಖಕರ ಎಂದರು.

ಶ್ರೀಲಂಕಾದ ಹೈ ಕಮಿಷನರ್ ಗೌರವ

ಇದು ನಿಜವಾದ ದುರಂತ. ನಮ್ಮ ಅಧ್ಯಕ್ಷರು ಇಂದು CDS ಅಂತಿಮ ಕಾರ್ಯಕ್ಕೆ ಶ್ರೀಲಂಕಾದ ಸೇನಾ ಕಮಾಂಡ್ ಅನ್ನು ರಾಯಭಾರಿಯಾಗಿ ಕಳುಹಿಸಿದ್ದಾರೆ. ನಾವು ಎದೆಗುಂದಿದ್ದೇವೆ, ನಮ್ಮ ಸೇನೆಯ ಅನೇಕ ಹಿರಿಯ ಸಿಬ್ಬಂದಿ ಅವರನ್ನು ಚೆನ್ನಾಗಿ ತಿಳಿದಿದ್ದಾರೆ. ಅವರು ಶ್ರೀಲಂಕಾದ ಸ್ನೇಹಿತ ಎಂದು ಶ್ರೀಲಂಕಾದ ಹೈ ಕಮಿಷನರ್ ಮಿಲಿಂದ ಮೊರಗೋಡ ಹೇಳಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.