ಚಾಮರಾಜನಗರದಲ್ಲಿ 39 ಮಂದಿಗೆ ಕೋವಿಡ್ ಸೋಂಕು ದೃಢ! ಓರ್ವ ಸಾವು
Team Udayavani, Sep 3, 2020, 6:54 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಗುರುವಾರ ಕೋವಿಡ್ ಸೋಂಕಿನಿಂದ 76 ಮಂದಿ ಗುಣಮುಖರಾಗಿದ್ದಾರೆ. 39 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಓರ್ವ ವೃದ್ಧರು ಮೃತಪಟ್ಟಿದ್ದಾರೆ.
ಕೊಳ್ಳೇಗಾಲ ಪಟ್ಟಣದ 67 ವರ್ಷದ ವೃದ್ಧರು ಬುಧವಾರ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ಬರುವಾಗ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದರು. ನಿಧನದ ಬಳಿಕ ಪರೀಕ್ಷೆ ನಡೆಸಿದಾಗ ಕೋವಿಡ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2530 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 1983 ಮಂದಿ ಗುಣಮುಖರಾಗಿದ್ದಾರೆ. 497 ಸಕ್ರಿಯ ಪ್ರಕರಣಗಳಿವೆ. 16 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 108 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಗುರುವಾರ ಒಟ್ಟು 720 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಇದರಲ್ಲಿ 39 ಪಾಸಿಟಿವ್ ಫಲಿತಾಂಶ ಬಂದಿರುವುದು ಸಮಾಧಾನಕರ ಅಂಶವಾಗಿದೆ. ಚಾಮರಾಜನಗರ ತಾಲೂಕಿನಿಂದ 12, ಕೊಳ್ಳೇಗಾಲ 13, ಗುಂಡ್ಲುಪೇಟೆ 8, ಯಳಂದೂರು 4 ಹಾಗೂ ಹನೂರು ತಾಲೂಕಿನಿಂದ 1, ಹೊರ ಜಿಲ್ಲೆಯ 01 ಪ್ರಕರಣಗಳು ವರದಿಯಾಗಿವೆ.
ಇಂದಿನ ಪ್ರಕರಣಗಳು -39
ಇಂದು ಗುಣಮುಖ -76
ಒಟ್ಟು ಗುಣಮುಖ -1983
ಇಂದಿನ ಸಾವು -01
ಒಟ್ಟು ಸಾವು -50
ಸಕ್ರಿಯ ಪ್ರಕರಣಗಳು -497
ಒಟ್ಟು ಸೋಂಕಿತರು -2530
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್