ಬರಗಾಲ ಘೋಷಣೆ ಮಾರ್ಗಸೂಚಿ ಬದಲಾವಣೆ ಅತ್ಯಗತ್ಯ


Team Udayavani, Jul 22, 2023, 5:26 AM IST

DROUGHT 2

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಇನ್ನೂ ಸರಿಯಾಗಿ ಮಳೆ ಬಂದಿಲ್ಲ. ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಬೆಳಗಾವಿ ಸಹಿತ ಸುತ್ತಮುತ್ತಲ ಜಿಲ್ಲೆಗಳಲ್ಲಿ ಒಂದಷ್ಟು ಮಳೆ ಮತ್ತು ಪ್ರವಾಹ ಕಾಣಿಸಿಕೊಂಡಿದೆ. ಒಂದಷ್ಟು ದಿನಗಳ ಹಿಂದೆ ಕರಾವಳಿಯಲ್ಲಿ ಭರ್ಜರಿಯಾಗಿಯೇ ಸುರಿದಿದ್ದ ಮಳೆ ಮತ್ತೆ ಕಾಣಿಸಿಕೊಳ್ಳುತ್ತಿಲ್ಲ. ಈಗ ಅಲ್ಲಿಯೂ ಕಣ್ಣಾಮುಚ್ಚಾಲೆಯಾಡುತ್ತಿದೆ.

ಮುಂಗಾರು ಮಳೆಯ ಈ ಕಣ್ಣಾಮುಚ್ಚಾಲೆಯಿಂದಾಗಿ ರಾಜ್ಯದ ರೈತಾಪಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೆ ಇದು ಜುಲೈ ತಿಂಗಳ ಅಂತ್ಯದ ಸಮೀಪಕ್ಕೆ ಬಂದಿದ್ದು ಇನ್ನೂ ಬಹಳಷ್ಟು ಪ್ರದೇಶದಲ್ಲಿ ಸರಿಯಾಗಿ ಬಿತ್ತನೆಯೂ ಆಗಿಲ್ಲ. ಈ ವಾರದ ಆರಂಭದಲ್ಲಿನ ವರದಿ ಪ್ರಕಾರ ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ, ಬಳ್ಳಾರಿ, ಗದಗ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ವಿಜಯನಗರ, ಮಂಡ್ಯ, ಚಿಕ್ಕಬಳ್ಳಾಪುರ ಸಹಿತ ಹಲವಾರು ಜಿಲ್ಲೆಗಳಲ್ಲಿ ಮಳೆ ಕೊರತೆ ಸಮಸ್ಯೆ ಇದೆ. ಕೆಲವೆಡೆ ಈಗಾಗಲೇ ಬಿತ್ತನೆಯಾಗಿ ಮಳೆಗಾಗಿ ರೈತ ಕಾಯುತ್ತಿದ್ದಾನೆ. ಇನ್ನೂ ಕೆಲವು ದಿನ ಮಳೆ ಬಾರದೇ ಹೋದರೆ, ಬೆಳೆ ಒಣಗುವ ಆತಂಕ ಎದುರಾಗಿದೆ.

ಅಂದರೆ ಬೆಳಗಾವಿಯಲ್ಲಿ ಶೇ.50 ಕೊರತೆ, ಚಿತ್ರದುರ್ಗದಲ್ಲಿ ಶೇ.13, ಶಿವಮೊಗ್ಗದಲ್ಲಿ ಶೇ.48, ಗದಗ ಶೇ.36, ಹಾವೇರಿ ಶೇ.59ರಷ್ಟು ಮಳೆ ಕೊರತೆಯಾಗಿದೆ. ಆದರೆ ಮಳೆ ಕೊರತೆ ಕಾಡುತ್ತಿರುವ ಜಿಲ್ಲೆಗಳ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಂಬಂಧ ಕೆಲವೊಂದು ನಿಯಮಗಳು ಅಡ್ಡಿಯಾಗಿವೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಅಧಿವೇಶನದಲ್ಲಿಯೇ ಈ ಸಂಬಂಧ ಕೃಷ್ಣ ಬೈರೇಗೌಡರು ಪ್ರಸ್ತಾವಿಸಿದ್ದು, ಕೇಂದ್ರದ ನಿಯಮಗಳಿಂದಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ. ಅಂದರೆ ಕೇಂದ್ರ ಸರಕಾರದ ಬರ ಕೈಪಿಡಿ 2016ರ ಅನ್ವಯ ಬರ ಪೀಡಿತ ಘೋಷಣೆಗೆ ಕೇವಲ ಮಳೆ ಕೊರತೆಯಷ್ಟೆ ಮಾನದಂಡವಾಗು ವುದಿಲ್ಲ. ಹಾಗೆಯೇ ರಾಜ್ಯ ಸರಕಾರಕ್ಕೆ ಬರಪೀಡಿತ ತಾಲೂಕುಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

2016ರಲ್ಲಿ ಕೇಂದ್ರ ಸರಕಾರ ಒಂದು ಮಾರ್ಗಸೂಚಿ ತಂದಿದ್ದು, ಇದು ಕಠಿನವಾಗಿದೆ. ಇದಕ್ಕಿಂತ ಹಿಂದೆ ಇದ್ದ ಮಾರ್ಗಸೂಚಿಗಳಲ್ಲಿ ರಾಜ್ಯ ಸರಕಾರವೇ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು ಬರಪೀಡಿತ ಎಂದು ಘೋಷಿಸಬಹುದಾಗಿತ್ತು. ಆದರೆ ಈಗಿನ ನಿಯಮದಂತೆ ಶೇ.60ರಷ್ಟು ಮಳೆ ಕೊರತೆಯಾಗಿರಬೇಕು ಮತ್ತು ಹಿಂದಿನ ಮೂರು ವಾರಗಳ ಕಾಲ ಮಳೆ ಬಂದಿರಲೇಬಾರದು.

ಈ ನಿಯಮಗಳಿಂದಾಗಿ ನಾವು ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗುವುದಿಲ್ಲ ಎಂದಿರುವ ಕೃಷ್ಣ ಬೈರೇಗೌಡರು ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಬದಲಾವಣೆ ಮಾಡುವಂತೆ ಕೋರಿಕೊಳ್ಳುವುದಾಗಿ ತಿಳಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಹೇಳುವುದಾದರೆ ಇದು ರಾಜ್ಯ ಸರಕಾರದ ಉತ್ತಮ ನಡೆಯಾಗಿದೆ.

ಅತೀ ಶೀಘ್ರದಲ್ಲಿ ಕೇಂದ್ರಕ್ಕೆ ಈ ಸಂಬಂಧ ಪತ್ರ ಬರೆಯಲಿ. ಅಲ್ಲದೆ ರಾಜ್ಯದ ಸಂಸದರು ಮತ್ತು ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವವರು ಈ ಸಂಬಂಧ ಗಮನ ಹರಿಸಬೇಕು. ಈಗಾಗಲೇ ಮಳೆ ಕೊರತೆ ಕಾರಣದಿಂದಾಗಿ ಸಮಸ್ಯೆಗೆ ಸಿಲುಕಿರುವ ರೈತಾಪಿ ವರ್ಗಕ್ಕೆ ಇದರಿಂದ ಕಿಂಚಿತ್ತಾದರೂ ಅನುಕೂಲವಾಗುತ್ತದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಗಮನಹರಿಸಲಿ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.