
ಚಿಲುಮೆ ಅವ್ಯವಹಾರ, ಬಿಬಿಎಂಪಿ ಅಧಿಕಾರಿಗಳಿಗೆ ನಡುಕ
Team Udayavani, Nov 26, 2022, 12:03 PM IST

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ವಿಚಾರಣೆಗೆ ಆದೇಶಿಸಿರುವುದು ಬಿಬಿಎಂಪಿಯ ಹಲವು ಅಧಿಕಾರಿಗಳಿಗೆ ಆತಂಕ ಸೃಷ್ಟಿಸಿದೆ.
ಚಿಲುಮೆ ಸಂಸ್ಥೆಯ ಜತೆಗೆ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಕೇಂದ್ರ ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಇವರಿಬ್ಬರ ವಿಚಾರಣೆ ನಡೆಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಆಯೋಗ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಪ್ರಕರಣ ಆಯೋಗದ ನಿಲುವನ್ನು ಸಾರ್ವಜನಿಕವಾಗಿ ಪ್ರಶ್ನೆ ಮಾಡುವಂತೆ ಮಾಡಿತ್ತು. ಹೀಗಾಗಿ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕವಂತೂ ಪ್ರಕರಣ ತೀವ್ರತೆ ಪಡೆದುಕೊಂಡಿದೆ.
ಇದನ್ನೂ ಓದಿ:ಮಹಿಳೆಯರಿರುವ ಸಂಸ್ಥೆಯಲ್ಲಿ ಹೆಚ್ಚು ಸಂಸ್ಕಾರ, ಸಂಸ್ಕೃತಿ ಇರುತ್ತದೆ: ಚಂದ್ರಹಾಸ್ ಶೆಟ್ಟಿ
ಒಂದು ಮೂಲಗಳ ಪ್ರಕಾರ ಬಿಬಿಎಂಪಿಯ ಹಿರಿಯ ಹಾಗೂ ಪ್ರಭಾವಿ ಅಧಿಕಾರಿಯ ತಲೆದಂಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ‍್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ