ಚೀನಾದಲ್ಲೂ ಕೋವಿಡ್‌ ಬಿಗಿ ಕ್ರಮ: ತತ್ತರಿಸಿದ ನಾಗರಿಕರು, ಆಕ್ರೋಶ

ಕೋವಿಡ್‌ ಬಿಗಿಕ್ರಮದಿಂದ ಚೀನಾ ಸರಕಾರ ಜನರನ್ನು ಹಸಿವಿನ ದವಡೆಗೆ ದೂಡುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

Team Udayavani, Dec 28, 2021, 6:37 PM IST

ಚೀನಾದಲ್ಲೂ ಕೋವಿಡ್‌ ಬಿಗಿ ಕ್ರಮ: ತತ್ತರಿಸಿದ ನಾಗರಿಕರು, ಆಕ್ರೋಶ

ಬೀಜಿಂಗ್:ಯುರೋಪ್‌ ಹಾಗೂ ಅಮೆರಿಕಾ ಮಾದರಿಯಲ್ಲಿ ಚೀನಾದಲ್ಲೂ ಕೋವಿಡ್‌ ಬಿಗಿಕ್ರಮ ಜಾರಿಗೊಳಿಸಲಾಗಿದೆ. ಚೀನಾದ ಕ್ಸಿಯಾನ್‌ ನಗರದಲ್ಲಿ ಬಿಗಿ ನಿಯಮಗಳ ಜಾರಿಯಿಂದ ಜನರು ಆಹಾರ ಸೇರಿದಂತೆ ದಿನ ಬಳಕೆ ವಸ್ತುಗಳ ಬಳಕೆಗೂ ಪರದಾಡುವಂತಾಗಿದೆ.

ಕೋವಿಡ್‌ ಮೊಡಲ ಅಲೆಯ ಸಂದರ್ಭದಲ್ಲಿ ವುಹಾನ್‌ ಪಟ್ಟಣ ಎಲ್ಲ ಬಗೆಯ ನಾಗರಿಕ ಸಂಪರ್ಕದಿಂದ ವಂಚಿಸಲ್ಪಟ್ಟಿತ್ತು. ಆದರೆ ವುಹಾನ್‌ ನಲ್ಲಿ ಈಗ ಏನಾಗುತ್ತಿದೆ ಎಂಬ ಚಿತ್ರಣ ನಾಗರಿಕ ಜಗತ್ತಿಗೆ ಇನ್ನೂ ಸ್ಪಷ್ಟವಾಗಿ ಲಭ್ಯವಿಲ್ಲ. ಇದರ ಮಧ್ಯೆಯೇ ಕ್ಸಿಯಾನ್‌ ನಗರದಲ್ಲಿ ಜನರು ದಿನಬಳಕೆ ವಸ್ತುಗಳಿಗಾಗಿ ಪರದಾಡುವ ಸಂಗತಿ ಅಲ್ಲಿನ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸದ್ದು ಮಾಡುತ್ತಿದೆ.

ಅಮೆರಿಕಾ, ಬ್ರಟಿನ್‌ ಹಾಗೂ ಯುರೋಪ್‌ ದೇಶದಲ್ಲಿ ಕೋವಿಡ್‌ ರೂಪಾಂತರಿ ಓಮಿಕ್ರಾನ್‌ ಭಾರಿ ಪ್ರಮಾಣದಲ್ಲಿ ಹರಡುತ್ತಿದೆ. ಚೀನಾದಲ್ಲೂ ಈ ಸೋಂಕು ವ್ಯಾಪಿಸಬಹುದೆಂಬ ಕಾರಣಕ್ಕೆ ಅಲ್ಲಿನ ಸರಕಾರ ಬಿಗಿ ಕ್ರಮ ಕೈಗೊಂಡಿದ್ದು, ಲಾಕ್‌ಡೌನ್‌ ಜಾರಿ ಮಾಡಿದೆ. ಜನರ ಓಡಾಟವನ್ನು ಸಂಪೂರ್ಣವಾಗಿ ನಿಯಂತ್ರಿಸಲಾಗಿದೆ.

ಪ್ರತಿ ಮೂರು ದಿನಕ್ಕೊಮ್ಮೆ ಒಂದು ಕುಟುಂಬದ ಒಬ್ಬ ಸದಸ್ಯ ಮಾತ್ರ ಮನೆಯಿಂದ ಹೊರ ಬಂದು ದಿನಬಳಕೆ ವಸ್ತುಗಳನ್ನು ಖರೀದಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದ ಸಮಯದಲ್ಲಿ ಜನರು ಮನೆಯ ಆವರಣದಲ್ಲೇ ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಬಿಗಿ ಕ್ರಮದಿಂದ ತಮ್ಮ ಬದುಕು ದುರ್ಭರವಾಗುತ್ತಿದೆ ಎಂದು ಕ್ಸಿಯಾನ್‌ ಪಟ್ಟಣದ ಜನತೆ ಜಾಲತಾಣದಲ್ಲಿ ನೋವು ತೋಡಿಕೊಂಡಿದ್ದಾರೆ. ಕೋವಿಡ್‌ ಬಿಗಿಕ್ರಮದಿಂದ ಚೀನಾ ಸರಕಾರ ಜನರನ್ನು ಹಸಿವಿನ ದವಡೆಗೆ ದೂಡುತ್ತಿದೆ ಎಂಬ ಟೀಕೆ ವ್ಯಕ್ತವಾಗಿದೆ.

ವಿಶ್ವದ ಇತರೆ ದೇಶಗಳಲ್ಲೂ ಕೋವಿಡ್‌ ಭೀತಿ ಹೆಚ್ಚಿದೆ. ಅಮೆರಿಕಾದಲ್ಲಿ ಓಮಿಕ್ರಾನ್‌ ಪ್ರಕರಣ ಹೆಚ್ಚುತ್ತಿದ್ದು, ಆಸ್ಪತ್ರೆಗಳಲ್ಲಿ ದಟ್ಟಣೆ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬಿಡನ್‌ “ಓಮಿಕ್ರಾನ್‌ ಕೋವಿಡ್‌ ಆರಂಭಿಕ ಅಲೆಯಷ್ಟು ಅಪಾಯಕಾರಿಯಲ್ಲ. ಸಾಕಷ್ಟು ಮುನ್ನೆಚ್ಚರಿಕೆಯೊಂದಿಗೆ ಎದುರಿಸೋಣʼʼ ಎಂದು ಜನರಲ್ಲಿ ಭರವಸೆ ತುಂಬುವ ಪ್ರಯತ್ನ ನಡೆಸಿದ್ದಾರೆ.ಇನ್ನೊಂದೆಡೆ ಫ್ರಾನ್ಸ್‌ನಲ್ಲಿ ವಾರದಲ್ಲಿ ಮೂರು ದಿನ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆಗೆ ಒತ್ತು ನೀಡಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.