
ಚಿತ್ರದುರ್ಗ ಜಿಲ್ಲೆಯಲ್ಲಿ 125 ಮಂದಿಗೆ ಕೋವಿಡ್ ದೃಢ, ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆ
Team Udayavani, Sep 15, 2020, 6:50 PM IST

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 125 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾದಂತಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 62, ಚಳ್ಳಕೆರೆ 13, ಹಿರಿಯೂರು 05, ಹೊಸದುರ್ಗ 13, ಮೊಳಕಾಲ್ಮುರು 13 ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 19 ಸೇರಿದಂತೆ ಒಟ್ಟು 125 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 250 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಮಂಗಳವಾರ ಒಟ್ಟು 1,262 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 125 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 5,356ಕ್ಕೆ ಏರಿಕೆಯಾಗಿದ್ದು, ಇದುವರೆಗೆ 33 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 4,061 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,260 ಸಕ್ರಿಯ ಪ್ರಕರಣಗಳು ಇವೆ.
ಸದ್ಯ ಜಿಲ್ಲೆಯಲ್ಲಿ ಒಟ್ಟು 1,196 ಕಂಟೈನ್ಮೆಂಟ್ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 35,413 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 50,644 ಜನರ ಮಾದರಿ ಸಂಗ್ರಹಿಸಲಾಗಿದ್ದು, 44,058 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 777 ಜನರ ವರದಿ ಬರುವುದು ಬಾಕಿ ಇದೆ. 453 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ಜೂನ್- ಜುಲೈನಲ್ಲಿ ಇಸ್ರೋದಿಂದ ಸೂರ್ಯನ ಅಧ್ಯಯನ? ಪೇ ಲೋಡ್ ಸ್ವೀಕರಿಸಿದ ಬಾಹ್ಯಾಕಾಶ ಸಂಸ್ಥೆ

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

ಗ್ರಾಹಕರ ಮನ ಗೆದ್ದರೆ ಅಂತಾರಾಷ್ಟ್ರೀಯ ಮಾರುಕಟ್ಟೆ: ಸಿಎಂ ಬೊಮ್ಮಾಯಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ