ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ


Team Udayavani, Jan 30, 2023, 12:37 PM IST

ಗಾಂಧಿ ಮಾರ್ಗದಲ್ಲಿ ನಡೆಯುವ  ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಹಾತ್ಮಾ ಗಾಂಧೀಜಿಯವರು  ಹುತಾತ್ಮರಾದ ಈ  ದಿನದ  ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂಧೀಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ  ಸಂಕಲ್ಪವನ್ನು ಮಾಡಬೇಕು ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾಸೌಧ ಮತ್ತು ವಿಕಾಸಸೌಧದ  ನಡುವಿನ ಮಹಾತ್ಮಾ ಗಾಂಧಿಜೀಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಎರಡು ನಿಮಿಷಗಳ ಮೌನಾಚರಣೆ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮಾಹಾತ್ಮಾ ಗಾಂಧಿ ಅವರು ಹೇಳಿರುವಂತೆ ಅವರ  ಜೀವನವೇ ಒಂದು ಸಂದೇಶ. ಅವರ ಜೀವನವನ್ನು ಓದಿ, ತಿಳಿದುಕೊಂಡು , ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಅವರ ಜೀವನದ ಆಧಾರ ನೈತಿಕತೆ ಮತ್ತು ಸತ್ಯ. ಇವೆರಡನ್ನೂ ಅತ್ಯಂತ ಶುದ್ಧವಾಗಿ ಪ್ರತಿಪಾದಿಸಿದ್ದರು. ಸದಾಕಾಲ ತಮ್ಮನ್ನು ತಾವೇ ಪರೀಕ್ಷೆಗೆ ಒಳಪಡಿಸಿಕೊಂಡು ಪರಿಶುದ್ಧ ವಾಗುತ್ತಿದ್ದರು.  ಇಂಥ ಪ್ರಕ್ರಿಯೆ ಗಾಂಧೀಜಿ ಯವರು ಜೀವನದುದ್ದಕ್ಕೂ ನಡೆಸಿಕೊಂಡು ಬಂದಿರುವುದು ನಾವು ನೋಡುತ್ತೇವೆ. ಅಹಿಂಸೆಯಲ್ಲಿ ಬಹಳ ದೊಡ್ಡ  ಶಕ್ತಿ ಇದೆ ಎಂದು ಇಡೀ ಜಗತ್ತಿಗೆ ತೋರಿಸಿಕೊಟ್ಟವರು. ಅಹಿಂಸೆಯಿಂದ  ದೇಶಕ್ಕೆ  ಸ್ವಾತಂತ್ರ್ಯ ತಂದುಕೊಡುವವರಲ್ಲಿ ಮುಂಚೂಣಿ ಯಲ್ಲಿದ್ದರು ಎಂದರು.

ಇದನ್ನೂ ಓದಿ: ದಳಪತಿ ಸಿನಿಮಾದಲ್ಲಿ ನಟಿಸಲ್ಲ ರಕ್ಷಿತ್‌ ಶೆಟ್ಟಿ: ಟ್ವೀಟ್‌  ಮೂಲಕ ವದಂತಿಗೆ ತೆರೆ ಎಳದೆ ಸಿಂಪಲ್‌ ಸ್ಟಾರ್

ಹೊಸ ದಿಕ್ಸೂಚಿ:

ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಅನಾಮಧೇಯರು ತಮ್ಮ ಆಸ್ತಿಪಾಸ್ತಿ ಗಳನ್ನು ತ್ಯಾಗ   ಮಾಡಿದ್ದರು. ಗಟ್ಟಿ ನಿಲುವು ತೆಗೆದುಕೊಂಡು ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿದ  ಸುಭಾಶ್ ಚಂದ್ರ ಬೋಸ್ , ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಲೋಕ ಮಾನ್ಯ ತಿಲಕ್ ಮುಂತಾದವರೂ  ಕೂಡ  ಆ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು.  ಇವೆಲ್ಲವನ್ನೂ  ಕ್ರೋಢಿಕರಿಸಿ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಿ ಸತ್ಯಾಗ್ರಹ ನಡೆಸಿ ಆಂದೋಲನ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟ ವನ್ನು ಪರಿವರ್ತನೆ ಮಾಡಿ ಬ್ರಿಟಿಷರ ಜೊತೆ ಕಠಿಣ ಮಾತುಕತೆ ನಡೆಸಿ ದೇಶಕ್ಕೆ ಸ್ವಾತಂತ್ರ್ಯ  ಕೊಡಿಸಿದರು. ಗಾಂಧೀಜಿ ಅವರ ತತ್ವ ಆದರ್ಶಗಳ ಮೇಲೆ ಈ ದೇಶದ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರುವುದು ಅಗತ್ಯವಿದೆ. ಒಂದು ರೀತಿಯಲ್ಲಿ

ರಾಷ್ಟ್ರೀಯ ವ್ಯಕ್ತಿತ್ವ ಗಾಂಧಿಜಿಯವರಲ್ಲಿ ಇತ್ತು.‌ ದೇಶಕ್ಕೆ ಬಹಳ ದೊಡ್ಡ ಚರಿತ್ರೆ ಇದೆ. ಬೇಕಾಗಿರುವುದು ಚಾರಿತ್ರ್ಯ . ಅವರಿಗೆ ಭಾವಪೂರ್ವಕವಾಗಿ, ಹೃದಯದಂತರಾಳದಿಂದ, ಶ್ರದ್ಧಾಪೂರ್ವಕ   ನಮನಗಳನ್ನು ಸಲ್ಲಿಸುತ್ತೇನೆ ಎಂದರು.

ಆಯವ್ಯಯದಲ್ಲಿ ದುಡಿಯುವ ವರ್ಗಕ್ಕೆ ಆದ್ಯತೆ:

ಬಜೆಟ್ ನಲ್ಲಿ ಎಲ್ಲ ವರ್ಗದವರಿಗೆ ಆದ್ಯತೆ ನೀಡಲಾಗುತ್ತದೆ. ರೈತರು, ಮಹಿಳೆಯರು, ಕಾರ್ಮಿಕರು ಎಲ್ಲರಿಗೂ, ವಿಶೇಷವಾಗಿ ದುಡಿಯುವ ವರ್ಗಕ್ಕೆ  ಆದ್ಯತೆ ನೀಡಲಾಗುತ್ತದೆ. ಆರ್ಥಿಕವಾಗಿ ಅವರನ್ನು ಮೇಲೆತ್ತುವ ಕೆಲಸ ಪ್ರಾಥಮಿಕವಾಗಿ ಆಗಬೇಕು. ಆ ನಿಟ್ಟಿನಲ್ಲಿ  ಕಾರ್ಯಕ್ರಮಗಳು ಇರಲಿವೆ  ಎಂದರು.

ಸಚಿವ ಸಂಪುಟ ವಿಸ್ತರಣೆ :

ಸಂಪುಟ ವಿಸ್ತರಣೆಯ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

indi-1

ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

1-sdsadsd

‘ಮೋದಿ’ ಉಪನಾಮ ಮಾನನಷ್ಟ ಮೊಕದ್ದಮೆ ; ರಾಹುಲ್ ಗಾಂಧಿ ದೋಷಿ ಎಂದು ತೀರ್ಪು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

1-saddsadsadsadad

ಚಿಕ್ಕಮಗಳೂರು: ಕೋಟ್ಯಂತರ ರೂ. ಮೌಲ್ಯದ ಚಿನ್ನ‌,ಸಾವಿರಾರು ಸೀರೆಗಳು ವಶ

1-sadsdsadasd

ಸಕಲ ಸರಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಮಹಾಸ್ವಾಮಿಗಳ ಅಂತ್ಯಕ್ರಿಯೆ: ಸಿಎಂ

1-cc

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ

1-wewqeewqsda

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಬೊಂಬೆ ನುಡಿಯಿತು ಭವಿಷ್ಯ!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.