ಸಿಎಂ ಆದರೆ ಮುಸ್ಲಿಮರಿಗೆ ಮತ್ತೆ ಮೀಸಲಾತಿ-ರಾಜ್ಯದಲ್ಲಿAmul ಹಾಲಿಗೆ ಕಡಿವಾಣ: ಸಿದ್ದರಾಮಯ್ಯ

Team Udayavani, Apr 23, 2023, 7:22 AM IST

siddu

ಬೆಂಗಳೂರು: ಕರ್ನಾಟಕದಲ್ಲಿ ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರಿಗೆ ಮತ್ತೆ ಶೇ.4ರ ಮೀಸಲಾತಿ ನೀಡುತ್ತೇನೆ. ಜತೆಗೆ ರಾಜ್ಯದಲ್ಲಿ ಅಮುಲ್‌ ಹಾಲು ಖರೀದಿಸದಂತೆ ಆದೇಶಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಕಾನ್‌ಕ್ಲೇವ್‌ನಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ರಾಜ್ಯದಲ್ಲಿ ಬಿಜೆಪಿ ಸರಕಾರ ಮುಸ್ಲಿಮರ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ, ಅದನ್ನು ಒಕ್ಕಲಿಗರು ಮತ್ತು ಲಿಂಗಾಯತರಿಗೆ ಹಂಚಿದೆ. ಈ ಹಂಚಿಕೆ ಲಿಂಗಾಯತರು ಮತ್ತು ಒಕ್ಕಲಿಗರ ಬೇಡಿಕೆಯಾಗಿತ್ತಾ? ನಾನು ಮುಖ್ಯಮಂತ್ರಿಯಾದರೆ ಮುಸ್ಲಿಮರ ಮೀಸಲಾತಿಯನ್ನು ವಾಪಸ್‌ ತರುತ್ತೇನೆ. ಮಾತ್ರವಲ್ಲದೆ, ಒಕ್ಕಲಿಗರು ಹಾಗೂ ಲಿಂಗಾಯತರಿಗೂ ತೊಂದರೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ಗುಜರಾತ್‌ನ ಅಮುಲ್‌ ಹಾಗೂ ಕರ್ನಾಟಕದ ನಂದಿನಿ ವಿವಾದದ ಬಗ್ಗೆ ಮಾತನಾಡಿ, ಅಮುಲ್‌ ತನ್ನ ಪ್ರಸ್ತುತ ಗ್ರಾಹಕರ ನೆಲೆಯಲ್ಲಿ ವ್ಯವಹರಿಸುವುದನ್ನು ಬಿಟ್ಟು, ಕರ್ನಾಟಕ ಪ್ರವೇಶಿಸಿ ಇಲ್ಲಿನ ರೈತರಿಗೆ ಅನ್ಯಾಯ ಮಾಡಲು ಯತ್ನಿಸುತ್ತಿದೆ. ಹೀಗಾಗಿಯೇ ನಾನು ಅಮುಲ್‌ ಪ್ರವೇಶವನ್ನು ವಿರೋಧಿಸುತ್ತೇನೆ. ನಾನು ಮುಖ್ಯಮಂತ್ರಿಯಾದರೆ ಅಮುಲ್‌ ಹಾಲನ್ನು ಖರೀದಿಸಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಟಿಪ್ಪು ಹಿಂದೂಗಳನ್ನು ಕೊಂದಿಲ್ಲ
ಟಿಪ್ಪು ಸುಲ್ತಾನ್‌ ವಿರುದ್ಧ ಬಿಜೆಪಿ ಹೇಳುವುದೆಲ್ಲ ರಾಜಕೀಯ ಪ್ರೇರಿತ ಆರೋಪಗಳು. ಆಂಗ್ಲೋ-ಮೈಸೂರು ಯುದ್ಧಗಳು ಯಾರಿಗಾಗಿ ನಡೆದವು? ಟಿಪ್ಪು ಬ್ರಿಟಿಷರಿಗಾಗಿ ಹೋರಾಟ ಮಾಡಿದರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಟಿಪ್ಪು ಹಿಂದೂಗಳನ್ನು ಕೊಂದರು, ದೇಗುಲ ನಾಶಪಡಿಸಿದರು ಎನ್ನುವುದೆಲ್ಲ ಸುಳ್ಳು. ಅವೆಲ್ಲವೂ ಟಿಪ್ಪು ಮತ್ತು ಹೈದರಲಿ ವಿರುದ್ಧ ರಾಜಕೀಯ ಪ್ರೇರಿತ ಆರೋಪಗಳಷ್ಟೆ ಎಂದು ಹೇಳಿದ್ದಾರೆ.

ಇದೇ ವೇಳೆ ನೀವು ಸಿಎಂ ಆದರೆ ಮತ್ತೆ ಟಿಪ್ಪು ಜಯಂತಿ ಆಚರಣೆ ತರುವಿರಾ ಎನ್ನುವ ಪ್ರಶ್ನೆಗೆ, ನಾನು ಸರ್ವಾಧಿಕಾರಿಯಲ್ಲ, ಪ್ರಜಾಪ್ರಭುತ್ವವಾದಿ. ಅದನ್ನು ಅಂದಿನ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗುತ್ತದೆ ಎಂದಿದ್ದಾರೆ. ಇದೇ ವೇಳೆ ಹಿಜಾಬ್‌ ವಿಚಾರವನ್ನೂ ಪ್ರಸ್ತಾವಿಸಿ ಎಲ್ಲರಿಗೂ ಅವರದ್ದೇ ಸಂಪ್ರದಾಯ, ಆಚರಣೆಗಳಿವೆ. ಅದನ್ನು ಪ್ರಶ್ನಿಸಲು ನಾವು ಯಾರು ? ನಾನೂ ಹಿಂದೂ. ಆದರೆ ನನಗೆ ಮೌಡ್ಯಗಳಿಲ್ಲ ಎಂದಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.