
ಮೋದಿ, ಸಚಿವ ಶಾ ವಿರುದ್ಧ CM ಸಿದ್ದರಾಮಯ್ಯ ವಾಗ್ಧಾಳಿ
Team Udayavani, May 29, 2023, 7:19 AM IST

ಬೆಂಗಳೂರು: ಧರಣಿ ನಿರತ ಮಹಿಳಾ ಕುಸ್ತಿ ಪಟುಗಳನ್ನು ಬಂಧಿಸಿರುವ ದಿಲ್ಲಿ ಪೊಲೀಸರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿರುವ ಭಾರತ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೋರಾಡುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತತ್‌ಕ್ಷಣ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸುತ್ತಿರುವ ಪ್ರಧಾನಿ ಮೋದಿ ಅವರ ಸರಕಾರ ಅಲ್ಲಿಂದ ಕೂಗಳತೆ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಕಿಡಿಕಾರಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಭಾರತೀಯ ಕುಸ್ತಿಪಟುಗಳ ಒಕ್ಕೂಟದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಕೇಂದ್ರ ಬಿಜೆಪಿ ಸರಕಾರ ತತ್‌ಕ್ಷಣ ಬಂಧಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು