ಸಂಪುಟ ವಿಚಾರದಲ್ಲಿ ಸಿಎಂ ಅವರದ್ದೇ ನಿರ್ಧಾರ : ಅರುಣ್ ಸಿಂಗ್
Team Udayavani, May 2, 2022, 9:52 PM IST
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಅವರೇ ನಿರ್ಧಾರ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ನೀಡಿದ್ದಾರೆ.
ಸೋಮವಾರ ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಸಾಕಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ಪಕ್ಷದ ಕಾರ್ಯಕ್ರಮ ಕೂಡ ಇದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟಿದ್ದು, ಆ ಬಗ್ಗೆ ಅವರೇ ನಿರ್ಧಾರ ಮಾಡಲಿದ್ದಾರೆ ಎಂದರು.
ಸದ್ಯ ರಾಜ್ಯ ಬಿಜೆಪಿಯಲ್ಲಿ ಸಂಘಟನಾತ್ಮಕವಾಗಿ ಯಾವ ಬದಲಾವಣೆಗಳು ಸಂಭವಿಸುತ್ತದೆ, ಸಚಿವ ಸಂಪುಟದ ವಿಚಾರದಲ್ಲಿ ಶಾ ಅವರು ಯಾವ ಸೂಚನೆ ಗಳನ್ನ ನೀಡುತ್ತಾರೆ, ಯಾವ ನಿರ್ಧಾರ ತಳೆಯುತ್ತಾರೆ ಎನ್ನುವ ಕುತೂಹಲ ಮನೆ ಮಾಡಿದೆ. ಈಗಾಗಲೇ ಬದಲಾವಣೆಯ ಸೂಚನೆಯನ್ನು ಬಿ.ಎಲ್.ಸಂತೋಷ್ ಅವರು ಪರೋಕ್ಷ ಹೇಳಿಕೆಗಳ ಮೂಲಕ ನೀಡಿದ್ದಾರೆ. ಶಾ ಅವರ ಭೇಟಿ ಬಿಜೆಪಿ ನಾಯಕರಲ್ಲಿ ಭಾರಿ ನಿರೀಕ್ಷೆ ಹುಟ್ಟು ಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ