ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರ: 4 ರಾಜ್ಯಗಳಲ್ಲಿ ಕೋಮು ಘರ್ಷಣೆ; 2 ಸಾವು

ಮಧ್ಯಪ್ರದೇಶದ ಖಾರ್ಗೋನ್ ನಲ್ಲಿ ಕರ್ಫ್ಯೂ

Team Udayavani, Apr 11, 2022, 2:12 PM IST

1-fdsfdsf

ನವದೆಹಲಿ : ದೇಶದ ನಾಲ್ಕು ರಾಜ್ಯಗಳಲ್ಲಿ ಭಾನುವಾರ ನಡೆದ ರಾಮ ನವಮಿಯ ಮೆರವಣಿಗೆಯ ವೇಳೆ ಕೋಮು ಹಿಂಸಾಚಾರ ನಡೆದಿದ್ದು, ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಪೊಲೀಸರು ಸೇರಿ ಹಲವು ಮಂದಿ ಗಾಯಗೊಂಡಿದ್ದಾರೆ.

ಮಧ್ಯಪ್ರದೇಶದ ಖಾರ್ಗೋನ್ ನಗರದಲ್ಲಿ ಕರ್ಫ್ಯೂ ಹೇರಲಾಗಿದ್ದು, ರಾಮನವಮಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 77 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹಿಂಸಾಚಾರದಲ್ಲಿ ಖಾರ್ಗೋನ್‌ನ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಅವರು ಗಾಯಗೊಂಡಿದ್ದಾರೆ ಮತ್ತು ಅವರ ಜೊತೆಗೆ ಆರು ಪೊಲೀಸರು ಸೇರಿದಂತೆ ಕನಿಷ್ಠ 24 ಜನರು ಗಾಯಗೊಂಡಿದ್ದಾರೆ.

ಭಾನುವಾರ ರಾಮನವಮಿ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದ ನಂತರ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ್ದರು.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘಟನೆಯನ್ನು “ದುರದೃಷ್ಟಕರ” ಎಂದು ಬಣ್ಣಿಸಿದ್ದು, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಿಗೆ ಉಂಟಾದ ಹಾನಿಯನ್ನು ಗಲಭೆಕೋರರಿಂದ ವಸೂಲಿ ಮಾಡಲಾಗುವುದು ಎಂದು ಗುಡುಗಿದ್ದಾರೆ. ಗಲಭೆಕೋರರನ್ನು ಗುರುತಿಸಲಾಗಿದ್ದು, ಅವರನ್ನು ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮಧ್ಯಪ್ರದೇಶದಲ್ಲಿ ಗಲಭೆಕೋರರಿಗೆ ಜಾಗವಿಲ್ಲ ಎಂದಿದ್ದಾರೆ.

“ನಾವು ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಮರುಪಡೆಯುವಿಕೆ ಕಾಯಿದೆಯನ್ನು ಅಂಗೀಕರಿಸಿದ್ದೇವೆ. ನಾವು ಕಾಯಿದೆಯಡಿಯಲ್ಲಿ ಕ್ಲೈಮ್ ಟ್ರಿಬ್ಯೂನಲ್ ಅನ್ನು ರಚಿಸುತ್ತಿದ್ದೇವೆ ಮತ್ತು ನಷ್ಟವನ್ನು ನಿರ್ಣಯಿಸಿದ ನಂತರ, ಗಲಭೆಕೋರರಿಂದ ಅದನ್ನು ವಸೂಲಿ ಮಾಡಲಾಗುವುದು” ಎಂದು ಚೌಹಾಣ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬರ್ವಾನಿ ಜಿಲ್ಲೆಯ ಸೆಂಧ್ವಾ ಪಟ್ಟಣದಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಇದೇ ರೀತಿಯಲ್ಲಿ ಕಲ್ಲು ತೂರಾಟ ವರದಿಯಾಗಿದ್ದು, ಅಲ್ಲಿ ಪೊಲೀಸ್ ಠಾಣೆಯ ಉಸ್ತುವಾರಿ ಮತ್ತು ಐವರು ಗಾಯಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ ಪರಿಸ್ಥಿತಿಯನ್ನು ನಂತರ ನಿಯಂತ್ರಣಕ್ಕೆ ತರಲಾಗಿದೆ.

ಗುಜರಾತ್, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲೂ ರಾಮನವಮಿ ಮೆರವಣಿಗೆಗಳ ಸಮಯದಲ್ಲಿ ಹಿಂಸಾಚಾರ ಸಂಭವಿಸಿದ್ದು, ಹಲವರು ಗಾಯಗೊಂಡಿದ್ದು, ಗುಜರಾತ್, ಜಾರ್ಖಂಡ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.