
ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್: ಕಾಂಗ್ರೆಸ್ ಗ್ಯಾರಂಟಿ ನಂ.1
ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆಮ್ಮದಿ ನೀಡುತ್ತೇವೆ
Team Udayavani, Jan 11, 2023, 6:16 PM IST

ಬೆಂಗಳೂರು : ಬೆಲೆಯೇರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ನೆಮ್ಮದಿ ನೀಡುವ ಯೋಜನೆಯನ್ನು ನಾವು ಘೋಷಿಸುತ್ತಿದ್ದೇವೆ.ರಾಜ್ಯದ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ಒದಗಿಸುವ ‘ಗೃಹಜ್ಯೋತಿ’ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ. ನಿಮ್ಮ ವಿದ್ಯುತ್ ಬಿಲ್ ಇನ್ಮುಂದೆ ಕಾಂಗ್ರೆಸ್ ಜವಾಬ್ದಾರಿ.ಇದು ಕಾಂಗ್ರೆಸ್ ಗ್ಯಾರಂಟಿ ಎಂದು ರಾಜ್ಯ ಕಾಂಗ್ರೆಸ್ ಚುನಾವಣಾ ಪೂರ್ವ ಭರವಸೆ ನೀಡಿದೆ.
”ಕಾಂಗ್ರೆಸ್ ಗ್ಯಾರಂಟಿ ನಂ.1 ‘ಗೃಹಜ್ಯೋತಿ’ ಯೋಜನೆ! ಬಿಜೆಪಿ ಸರ್ಕಾರದ ದುರಾಡಳಿತದಿಂದ, ಬೆಲೆಯೇರಿಕೆಯಿಂದ ದುಬಾರಿಯಾಗಿರುವ ಜನರ ಜೀವನ ನಿರ್ವಹಣೆಗೆ ಪರಿಹಾರವಾಗಿ ಕಾಂಗ್ರೆಸ್ ಪಕ್ಷವು ಮೊದಲ ಭರವಸೆಯನ್ನು ಇಂದು ಘೋಷಿಸುತ್ತಿದೆ. ಪ್ರತಿ ಮನೆಗೆ, ಪ್ರತಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ – ಇದು ಕಾಂಗ್ರೆಸ್ ಭರವಸೆ” ಜನತೆಗೆ ಮೊದಲ ಆಶ್ವಾಸನೆಯನ್ನು ನೀಡಿ ಮತದಾರರ ಗಮನ ಸೆಳೆಯುವ ಯತ್ನ ಮಾಡಿದೆ.
”ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ ಕರ್ನಾಟಕ, ಇದು ಕಾಂಗ್ರೆಸ್‌ನ ಸದಾಶಯ. 2022ರ ಒಂದೇ ವರ್ಷದ ಅವಧಿಯಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ 4 ವರ್ಷದಲ್ಲಿ 8ಕ್ಕೂ ಹೆಚ್ಚು ಬಾರಿ ದರ ಏರಿಸಿದೆ. ಮುಂದಿನ ಕಾಂಗ್ರೆಸ್ ಸರ್ಕಾರ ಜನರ ಬದುಕಿಗೆ ಬೆಳಕಾಗಲಿದೆ” ಎಂದು ಟ್ವೀಟ್ ಮಾಡಿದೆ.
”ಕೋವಿಡ್, ಲಾಕ್ಡೌನ್, ನೋಟ್ ಬ್ಯಾನ್, ಜಿಎಸ್ ಟಿ , ಬೆಲೆ ಏರಿಕೆಯಂತಹ ಅಮಾನವೀಯ ಕ್ರಮಗಳಿಂದ ಜನರ ಬದುಕು ಭಾರವಾಗಿದೆ. ಜನರ ದುಡಿಮೆ ಹಸಿವು ನೀಗಿಸಲು ಸಾಲದಾಗಿರುವಾಗ 200 ಯೂನಿಟ್ ಉಚಿತ ವಿದ್ಯುತ್ತಿನ ಗೃಹಜ್ಯೋತಿ ಘೋಷಣೆಯು ಜನಸಾಮಾನ್ಯರ ಬದುಕಿನಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ.ಕಾಂಗ್ರೆಸ್ ಎಂದೂ ಜನಪರ” ಎಂದು ಹೇಳಿಕೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train Tragedy ತಾಯ್ನಾಡಿಗೆ ವಾಪಸ್ ಆದ ಹುಣಸೂರಿನ ಕ್ರೀಡಾಪಟುಗಳು

Bengaluru 1,500 ಕ್ಕೂ ಹೆಚ್ಚು ರೈಲು ಪ್ರಯಾಣಿಕರ ಪರದಾಟ ; ಸರಕಾರದ ನೆರವು

Bhadravathi ಮೊಮ್ಮಗಳನ್ನು ನೋಡಲು ಬಂದ ಸಚಿವೆ ಹೆಬ್ಬಾಳ್ಕರ್ ರಿಗೆ ಭರ್ಜರಿ ಸ್ವಾಗತ

Congress Guarantee ಘೋಷಣೆಯಿಂದ ಬಿಜೆಪಿಗೆ ಆತಂಕ: ಸಚಿವ ಸತೀಶ್ ಜಾರಕಿಹೊಳಿ

ಸಿದ್ರಾಮಣ್ಣೋರ್ ಫೈವ್ ಗ್ಯಾರಂಟಿ ಕೊಟ್‌ಮ್ಯಾಕೆ ಲೈಫ್ ಈಸ್ ಜಿಂಗಾಲಾಲಾ…
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
