
ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ
Team Udayavani, Jan 25, 2021, 4:48 PM IST

ಮೈಸೂರು: ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ. ಕಾಂಗ್ರೆಸ್- ಬಿಜೆಪಿ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು.
ಈ ಸರ್ಕಾರ ಬಲಿಷ್ಠವಾಗಿದೆ. ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. ಇನ್ನು ಮುಖ್ಯಮಂತ್ರಿಗಳೋ ಬಹಳ ದೊಡ್ಡವರು ಎಂದು ಸರ್ಕಾರದ ಸಂಪುಟ ಪುನರಚನೆ ಹಾಗೂ ಖಾತೆ ಹಂಚಿಕೆ ಗೊಂದಲದ ಬಗ್ಗೆ ಲೇವಡಿ ಮಾಡಿದರು.
ಟ್ರ್ಯಾಕ್ಟರ್ ಜಾಥಾ ಕುರಿತು ಮಾತನಾಡಿ, ಜಾಥಾ ತೆರಳುತ್ತಿರುವ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ಜಪ್ತಿ ಮಾಡಿದರೆ ಅದನ್ನು ಬಿಡಿಸಿಕೊಳ್ಳಲು ನಾವು ಹೋಗುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಮೂವರು ಸಚಿವರ ಖಾತೆಗಳಲ್ಲಿ ಮತ್ತೆ ಬದಲಾವಣೆ : ಸುಧಾಕರ್ ಗೆ ಮತ್ತೆ ವೈದ್ಯಕೀಯ ಶಿಕ್ಷಣ
ಮೈಸೂರಿನಲ್ಲಿ ಮಾತನಾಡಿದ ಅವರು, ಅನ್ನದಾತರಿಲ್ಲದೆ ನಾವ್ಯಾರೂ ಇರುವುದಿಲ್ಲ. ರೈತರ ಪ್ರತಿಭಟನೆಗೆ ನಮ್ಮ ಸಂಪೂರ್ಣ ಹಕ್ಕಿದೆ. ಹೆದರಿಸಿ ರೈತರ ಬಾಯಿ ಮುಚ್ಚಿಸಬಾರದು. ಹಾಗೊಂದುವೇಳೆ ಅವರನ್ನು ಹೆದರಿಸಿದರೆ ನಾವು ರೈತರ ಬೆಂಬಲಕ್ಕೆ ನಿಲ್ಲುತ್ತೇವೆ. ಬಂಧಿಸಿದರೆ ಜೈಲ್ ಬರೋ ಚಳವಳಿ ಮಾಡುತ್ತೇವೆ ಎಂದು ಅವರು ತಿಳಿಸಿದರು.
ಒಂದು ವೇಳೆ ಕಾಂಗ್ರೆಸ್ ಪಕ್ಷವೇ ಆಡಳಿತದಲ್ಲಿದ್ದರೆ ರೈತರ ಪ್ರತಿಭಟನೆಗೆ ಅವಕಾಶ ಸಿಗುತ್ತಿತ್ತು. ಆಗಲೂ ನಾವು ರೈತರಿಗೆ ಬೆಂಬಲ ಕೊಡುತ್ತಿದ್ದೆವು ಎಂದು ಅವರು ಹೇಳಿದರು.
ಪೊಲೀಸರೇ ನೀವು ಸರ್ಕಾರದ ಕೈಗೊಂಬೆಯಾಬೇಡಿ. ಎಲ್ಲರಿಗೂ ಒಂದೆ ನ್ಯಾಯ ಕೊಡಿ. ಸುಪ್ರೀಂಕೋರ್ಟ್ ಸಹ ಪ್ರತಿಭಟನೆ ಮಾಡಬೇಡಿ ಎಂದು ಹೇಳಿಲ್ಲ. ನಾಳೆ ರಜಾ ಇದೆ ಯಾವ ಟ್ರಾಫಿಕ್ ಸಮಸ್ಯೆ ಆಗೋಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಕಾಶ್ಮೀರ ಕುರಿತ ಹೇಳಿಕೆ; ರಾಹುಲ್ ಗಾಂಧಿಗೆ ತಿರುಗೇಟು ನೀಡಿದ ವಿವೇಕ್ ಅಗ್ನಿಹೋತ್ರಿ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ