ಪಂಜಾಬ್: ಸೋನು ಸೂದ್ ಅವರ ಸಹೋದರಿಗೆ ಸೋಲುಣಿಸಿದ ಆಪ್
ಜನಪ್ರಿಯತೆ, ಸಮಾಜ ಸೇವೆ , ಸ್ಟಾರ್ ಪ್ರಚಾರ ಕೆಲಸ ಮಾಡಲಿಲ್ಲ..
Team Udayavani, Mar 10, 2022, 5:39 PM IST
ಮೊಗಾ: ಬಾಲಿವುಡ್ ನಟ ಸೋನು ಸೂದ್ ಅವರ ಸಹೋದರಿ, ಸಮಾಜ ಸೇವೆ ಮೂಲಕ ಹೆಸರು ಮಾಡಿದ್ದ ಮಾಳವಿಕಾ ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಲನುಭವಿಸಿದ್ದಾರೆ.
ಪಂಜಾಬ್ ನಲ್ಲಿ ಆಪ್ ಅಬ್ಬರದ ನಡುವೆ ಮಾಳವಿಕಾ ಅವರು ಸೋಲಿಗೆ ಶರಣಾಗಿದ್ದು, ಅವರನ್ನು ಎಎಪಿಯ ಡಾ.ಅಮನ್ದೀಪ್ ಕೌರ್ ಅರೋರಾ 20,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದಾರೆ.
ಕಾಂಗ್ರೆಸ್ ಶಾಸಕರಾಗಿದ್ದ ಹರ್ಜೋತ್ ಕಮಲ್ ಸಿಂಗ್ ಅವರು ಬಿಜೆಪಿ ಸೇರಿದ ಕಾರಣಕ್ಕೆ ಮಾಳವಿಕಾ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.
ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಸೋನು ಸೂದ್ ಅವರ ಕಾರನ್ನು ಜಪ್ತಿ ಮಾಡಿ ಮತ್ತು ಮನೆಗೆ ವಾಪಸ್ ಕಳುಹಿಸಿದ ಘಟನೆ ಮತದಾನದಂದು ನಡೆದಿತ್ತು. ಚುನಾವಣಾ ವೀಕ್ಷಕರ ನಿರ್ದೇಶನದ ಮೇರೆಗೆ ಅವರ ವಾಹನವನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.
ಜನವರಿ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ಮಾಳವಿಕಾ ಪರ ಸೋನು ಸೂದ್ ಭರ್ಜರಿ ಪ್ರಚಾರ ನಡೆಸಿದರೂ, ಅವರ ಸಮಾಜಮುಖಿ ಕಾರ್ಯಗಳು, ಜನಪ್ರಿಯತೆ ಗೆಲುವು ತಂದು ಕೊಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ