ಸೋಲಿನ ನಂತರ ಕಾಂಗ್ರೆಸ್ ಮಹತ್ವದ ಸಭೆ: ಸರ್ಕಾರವನ್ನು ಎದುರಿಸಲು ಹೊಸ ತಂತ್ರ

ಪಕ್ಷದೊಳಗೆ ಹೆಚ್ಚಿದ ಬದಲಾವಣೆಯ ಒತ್ತಡ

Team Udayavani, Mar 13, 2022, 11:52 AM IST

1-sadsad

ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಯಲ್ಲಿ ಹೀನಾಯ ಸೋಲು ಅನುಭವಿಸಿದ ಬಳಿಕ ಕಾಂಗ್ರೆಸ್ ನಾಯಕರು ಭಾನುವಾರ ಮಹತ್ವದ ಸಭೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಹೋರಾಟಕ್ಕೆ ಕೈಗೊಳ್ಳಬೇಕಾದ ಹೊಸ ರಣ ತಂತ್ರಗಳ ಕುರಿತು ಚರ್ಚೆ ನಡೆಸಿದ್ದಾರೆ.

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಸೋಲಿನ ನಂತರ ನಡೆದ ಕಾಂಗ್ರೆಸ್ ಸಂಸದೀಯ ಕಾರ್ಯತಂತ್ರ ಸಮಿತಿ ಸಭೆ ಸೋನಿಯಾ ಗಾಂಧಿ ನೇತೃತ್ವದಲ್ಲಿ 10 ಜನಪಥ್‌ನಲ್ಲಿ ನಡೆಯಿತು.

ಪ್ರತಿಪಕ್ಷಗಳ ಜತೆಗೂಡಿ ಸರ್ಕಾರದ ವಿರುದ್ಧ ಹೋರಾಡಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರಾದ ಕೆಸಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮಾ, ಮನೀಶ್ ತಿವಾರಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

”ಮುಂಬರುವ ಸಂಸತ್ ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸಿದ್ದೇವೆ. ಉಕ್ರೇನ್‌ನಿಂದ ಹಿಂತಿರುಗುವ ವೈದ್ಯಕೀಯ ವಿದ್ಯಾರ್ಥಿಗಳ ಕುರಿತು, ರೈತರ ಎಂಎಸ್‌ಪಿ , ಹಣದುಬ್ಬರ, ನಿರುದ್ಯೋಗ, ಸಮಸ್ಯೆಗಳನ್ನು ಪ್ರಸ್ತಾಪಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದ ಉತ್ತರ ಪ್ರದೇಶದಲ್ಲಿ, ಕಾಂಗ್ರೆಸ್ ಕೇವಲ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯವಾಗಿತ್ತು. ಇಡೀ ಯುಪಿಯಲ್ಲಿ ಶೇ.2.4ರಷ್ಟು ಮತಗಳನ್ನು ಮಾತ್ರ ಪಡೆದಿದೆ. ಯುಪಿಯ 380 ಸೀಟುಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿಯನ್ನೂ ಕಳೆದುಕೊಂಡಿದ್ದಾರೆ.

ಪಕ್ಷದೊಳಗೆ ಹೆಚ್ಚಿದ ಬದಲಾವಣೆಯ ಒತ್ತಡ

ಭಾರಿ ಸೋಲಿನ ನಂತರ, ಕೇರಳ ಸಂಸದ ಶಶಿ ತರೂರ್ ಸೇರಿದಂತೆ ಹಲವು ನಾಯಕರು ಈಗಾಗಲೇ ಉನ್ನತ ಮಟ್ಟದಲ್ಲಿ ಬದಲಾವಣೆಗೆ ಒತ್ತಾಯಿಸಿದ್ದಾರೆ. ಆದರೆ, ಕರ್ನಾಟಕದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಡಿ.ಕೆ.ಶಿವಕುಮಾರ್ ಅವರು ಗಾಂಧಿ ಕುಟುಂಬದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸೋಲಿನ ಬಳಿಕ ಯುಪಿ ಕಾಂಗ್ರೆಸ್‌ನ ಹಲವು ನಾಯಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ.
ಮತ್ತೊಂದೆಡೆ, ಯುಪಿ ಕಾಂಗ್ರೆಸ್‌ನ ಎಲೆಕ್ಟ್ರಾನಿಕ್ ಮಾಧ್ಯಮ ಸಂಯೋಜಕ ಜೀಶನ್ ಹೈದರ್ ಅವರನ್ನು ನಾಯಕತ್ವದ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಕಾರಣಕ್ಕಾಗಿ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.