ಫೆ.3ರ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್ ಸಿದ್ಧತೆ
ಕೋಲಾರದಲ್ಲಿ ಸಭೆ ಮಾಡಿದ ಎಂ.ಆರ್.ಸೀತಾರಾಂ
Team Udayavani, Jan 30, 2023, 8:39 PM IST
ಬೆಂಗಳೂರು: ಜಂಟಿ ಬಸ್ ಯಾತ್ರೆ ನಂತರ ಪ್ರತ್ಯೇಕ ಪ್ರಜಾಧ್ವನಿ ಯಾತ್ರೆಗೆ ಕಾಂಗ್ರೆಸ್‌ನಲ್ಲಿ ಸಿದ್ಧತೆ ನಡೆದಿದ್ದು, ಫೆ.3 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೋಲಾರದ ಕೂಡುಮಲೆಯಿಂದ ಯಾತ್ರೆ ಆರಂಭಿಸಲಿದ್ದಾರೆ.
ಸೋಮವಾರ ಡಿ.ಕೆ.ಶಿವಕುಮಾರ್ ಯಾತ್ರೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ಎಂ.ಆರ್.ಸೀತಾರಾಂ, ಯಾತ್ರೆ ಸಾಗಲಿರುವ ಮಾರ್ಗ ಹಾಗೂ ಸಭೆಗಳ ಬಗ್ಗೆ ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ನಡೆಸಿದರು.
ಕೋಲಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಉಸ್ತುವಾರಿ ಉಪಾಧ್ಯಕ್ಷರೂ ಆಗಿರುವ ಸೀತಾರಾಂ, ಕಾರ್ಯಕ್ರಮದ ರೂಪರೇಷೆ, ಜಿಲ್ಲೆಯಲ್ಲಿ ಸಾಗಲಿರುವ ಯಾತ್ರೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸಿದ್ಧತೆ ಕುರಿತು ಮುಖಂಡರ ಸಲಹೆ-ಸೂಚನೆ ಪಡೆದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕೊತ್ತೂರು ಮಂಜು ಸ್ಥಳೀಯ ಮುಖಂಡರು ಹಾಜರಿದ್ದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಫೆ.3 ರಂದು ಬಸವಕಲ್ಯಾಣದಿಂದ ಯಾತ್ರೆ ಪ್ರಾರಂಭಿಸಲಿದ್ದಾರೆ. 12 ರವರೆಗೆ ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕದ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕದ ಜಿಲ್ಲೆಗಳ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದಾರೆ.
ತಂಡ
*ಡಿ.ಕೆ.ಶಿವಕುಮಾರ್ ನೇತೃತ್ವದ ತಂಡದಲ್ಲಿ ಬಿ.ಕೆ. ಹರಿಪ್ರಸಾದ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ವೀರಪ್ಪಮೊಯ್ಲಿ, ರಮೇಶ್‌ಕುಮಾರ್ ಸೇರಿ 54 ನಾಯಕರು.
*ಸಿದ್ದರಾಮಯ್ಯ ನೇತೃತ್ವದ ತಂಡದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಹಿರಿಯ ನಾಯಕ ಎಚ್.ಕೆ.ಪಾಟೀಲ್, ಮಾಜಿ ಸಚಿವರಾದ ಜಮೀರ್ ಅಹಮದ್, ಎಚ್.ಸಿ.ಮಹದೇವಪ್ಪ, ಸೇರಿ 35 ನಾಯಕರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ
ಗಂಗಾವತಿ: ದಾಖಲೆ ಇಲ್ಲದೇ 60 ಲಕ್ಷ ರೂ.ಸಾಗಾಟ; ನಗದು ಸಮೇತ ಕಾರು ವಶಕ್ಕೆ
ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್
ವಿಧಾನಸಭೆ ಚುನಾವಣೆ: ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್
MUST WATCH
ಹೊಸ ಸೇರ್ಪಡೆ
ಉದ್ದೇಶ ಪೂರ್ವಕವಾಗಿಯೇ ರಾಹುಲ್ ಗಾಂಧಿ ಅವರನ್ನು ಅನರ್ಹ ಮಾಡಲಾಗಿದೆ: ಎಚ್.ವಿಶ್ವನಾಥ್
ಸೋಲಾರ್ ಪ್ಲಾಂಟ್ ಹೆಸರಲ್ಲಿ ವಂಚನೆ: ಸೆರೆ
ರೂಪೇಶ್ ಶೆಟ್ಟಿ ನಿರ್ದೇಶನದ ‘ಸರ್ಕಸ್’ ಚಿತ್ರದ ಹಾಡು ಬಿಡುಗಡೆ; ಜೂ. 23 ರಂದು ಸಿನಿಮಾ ತೆರೆಗೆ
ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !
ಭಾರತದ ಅಭಿವೃದ್ಧಿಯಲ್ಲಿ ಸಾಮಾಜಿಕ- ಧಾರ್ಮಿಕ ಸಂಸ್ಥೆಗಳ ಪಾತ್ರ ಮಹತ್ವದ್ದು: ನರೇಂದ್ರ ಮೋದಿ