
ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಾಣ : ಬಾಳೆಬರೆ ಘಾಟ್ 2 ತಿಂಗಳು ಬಂದ್
Team Udayavani, Feb 3, 2023, 9:57 PM IST

ಶಿವಮೊಗ್ಗ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್‌ನಲ್ಲಿ ಕಾಂಕ್ರೀಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದ್ದು ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು ಅಥವಾ ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು.
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬಹುದು ಎಂದು ತಿಳಿಸಲಾಗಿದೆ.
ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಮಹಾರಾಷ್ಟ್ರ ಮೂಲದ ವ್ಯಕ್ತಿಯಿಂದ 6 ಲಕ್ಷ ರೂ.,480 ಗ್ರಾಂ ಚಿನ್ನ ವಶ

ಬಾಲಾಜಿ ಸಕ್ಕರೆ ಕಾರ್ಖಾನೆ ಮೇಲೆ 2ನೇ ಬಾರಿ ಅಧಿಕಾರಿಗಳ ದಾಳಿ: ಲಕ್ಷಾಂತರ ಮೌಲ್ಯದ ಸೊತ್ತು ವಶ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ