ಕಂಟೈನ್ಮೆಂಟ್‌ ವಲಯ, ಸೀಲ್‌ಡೌನ್‌ ಪ್ರದೇಶದ ಹೊಣೆಗಾರಿಕೆ ಡಿಸಿಪಿಗಳಿಗೆ: ಬಸವರಾಜ ಬೊಮ್ಮಾಯಿ

ರಾತ್ರಿ ಕರ್ಫ್ಯೂ ಕಟ್ಟುನಿಟ್ಟಿನಲ್ಲಿ ಜಾರಿ

Team Udayavani, Jul 1, 2020, 7:44 PM IST

ಕಂಟೈನ್ಮೆಂಟ್‌ ವಲಯ, ಸೀಲ್‌ಡೌನ್‌ ಪ್ರದೇಶದ ಹೊಣೆಗಾರಿಕೆ ಡಿಸಿಪಿಗಳಿಗೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ಜನ -ವಾಹನ ಸಂಚಾರ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಂಟೈನ್ಮೆಂಟ್‌ ವಲಯ, ಸೀಲ್‌ಡೌನ್‌ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ ಹೊಣೆಗಾರಿಕೆ ಆಯಾ ಡಿಸಿಪಿಗಳಿಗೆ ನೀಡಲಾಗುವುದು. ವಿದೇಶದಿಂದ ಬಂದವರ ಕ್ವಾರಂಟೈನ ಮಾಡುವ ಮಾದರಿಯಲ್ಲೇ ಆ ಪ್ರದೇಶಗಳಲ್ಲಿ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ವಿಧಾನಸೌದದಲ್ಲಿ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸಭೆಯ ನಂತರ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ, ಗೃಹರಕ್ಷಕದಳ, ಸ್ವಯಂ ಸೇವಕರು ಸಮನ್ವಯತೆಯಿಂದ ಕೆಲಸ ಮಾಡುವ ಸಂಬಂಧ ರೂಪು-ರೇಷೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಪರಿಸ್ಥಿತಿಯಲ್ಲಿ ಕಂಟೈನ್‌ಮೆಂಟ್‌ ವಲಯಗಳು, ಸೀಲ್‌ಡೌನ್‌ ಪ್ರದೇಶಗಳಲ್ಲಿ ಬಿಬಿಎಂಪಿ, ಪೊಲೀಸ್‌ ಇಲಾಖೆ ಸಿಬ್ಬಂದಿ ಜತೆಗೆ ಗೃಹ ರಕ್ಷಕರನ್ನೂ ತೆಗೆದುಕೊಳ್ಳುತ್ತೇವೆ.

ವಿದೇಶದಿಂದ ಬಂದಾಗ ಹೋಂ ಕ್ವಾರಂಟೈನ್‌ ಮಾಡಿದ್ದೆವೋ ಅದೇ ರೀತಿ ಮಾಡಬೇಕು. ಕಂಟೈನ್ಮೆಂಟ್‌ ವಲಯಗಳಲ್ಲಿ ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಹೋಂ ಕ್ವಾರಂಟೈನ್‌ ಮಹತ್ವ ಪಡೆದುಕೊಳ್ಳುವುದರಿಂದ ಹೋಂ ಕ್ವಾರಂಟೈನ್‌ ವ್ಯವಸ್ಥೆಯಲ್ಲಿ ಸಮುದಾಯವನ್ನು ಭಾಗಿಯಾಗಿಸಬೇಕು. ವಾರ್ಡ್‌ವೈಸ್‌ ಬಿಬಿಎಂಪಿ ಪೊಲೀಸ್‌, ಗೃಹರಕ್ಷಕ ದಳ, ಸ್ವಯಂ ಸೇವಕರು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆಸ್ಪತ್ರೆ, ವೈದ್ಯರ ಜೋಡಣೆ, ಅವರ ಚಲನವಲನ, ಅಕ್ಕ ಪಕ್ಕದವರನ್ನು ಜಾಗೃತಿಗೊಳಿಸುವುದು. ಹೋಂ ಕ್ವಾರಂಟೈನ್‌ ಆಗಿರುವವರಿಗೆ ಆ್ಯಪ್‌ ಜೋಡಣೆಯಾಗಿರುತ್ತದೆ. ಅದರ ಮಾಹಿತಿಯೂ ಪೊಲೀಸರಿಗೆ ಇರಬೇಕು ಎಂದು ಹೇಳಿದರು.

ರಾತ್ರಿ ಕರ್ಫ್ಯೂ 8 ರಿಂದ 5 ಗಂಟೆವರೆಗೂ ಜನ ವಾಹನ ಸಂಚಾರ ನಿಲ್ಲಿಸಬೇಕು. ಈ ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸಲಾಗುವುದು. 600 ಆಟೋ ರಿಕ್ಷಾದಲ್ಲಿ ರಾತ್ರಿ ಕರ್ಫ್ಯೂ ಜಾರಿ, ಮಾಸ್ಕ್ ಧರಿಸದಿದ್ದರೆ ದಂಡ, ಸೀಲ್‌ಡೌನ್‌ ಪ್ರದೇಶಗಳಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ತಿಳಿಸಲಾಗುವುದು ಎಂದರು.

ರಾತ್ರಿ ಕರ್ಫ್ಯೂ ಕಟ್ಟು ನಿಟ್ಟಿನ ಪಾಲನೆಯಾಗಲಿದ್ದು ಜನ-ವಾಹನ ಓಡಾಟದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೋವಿಡ್-19 ದೊಡ್ಡ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಪೊಲೀಸ್‌ ಇಲಾಖೆ ಮೇಲೆಯೂ ಹೆಚ್ಚಿನ ಹೊಣೆಗಾರಿಕೆ ಇದೆ ಎಂದು ಹೇಳಿದರು.

ಕೋವಿಡ್-19 ಸೇವೆಗೆ ಸಂಘ-ಸಂಸ್ಥೆಗಳು ಕೋವಿಡ್-19 ಸ್ವಯಂ ಸೇವಕರು 60 ಸಾವಿರ ನೋಂದಣಿಯಾಗಿದ್ದಾರೆ. ಅವರಿಗೆ ಸಂಪೂರ್ಣವಾಗಿ ಜವಾಬ್ದಾರಿ ಕೊಟ್ಟು ವಾರ್ಡ್‌ನಲ್ಲಿ ಬಳಕೆ ಮಾಡಬೇಕು ಎಂಬ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕಂಟೈನ್ಮೆಂಟ್‌ ವಲಯ, ಸೀಲ್‌ಡೌನ್‌ ಪ್ರದೇಶಗಳು ಹೆಚ್ಚಾಗುತ್ತಿರುವುದು ಲಾಕ್‌ಡೌನ್‌ ಅಗತ್ಯವೇ ಎಂಬ ಪ್ರಶ್ನೆಗೆ ಸೀಲ್‌ಡೌನ್‌ ಎಂದರೆ ಲಾಕ್‌ಡೌನ್‌ ಅಲ್ಲ ಎಂದು ಉತ್ತರಿಸಿದರು.

ಟಾಪ್ ನ್ಯೂಸ್

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌; ಎಂಟು ಸೋಲಿನ ನಂಟು

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಉತ್ತರ ಕೊರಿಯಾದ ಮತ್ತೊಂದು ಕ್ಷಿಪಣಿ ಪರೀಕ್ಷೆ

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಬ್ಯಾಂಕಿಂಗ್‌ ಬಡ್ಡಿ ದರಕ್ಕೆ ಡ್ರ್ಯಾಗನ್‌ ಕತ್ತರಿ;ಮಂದಗತಿಗೆ ಹೊರಳಿದ ಚೀನ ಆರ್ಥಿಕತೆಯ ಪರಿಣಾಮ

ಬ್ಯಾಂಕಿಂಗ್‌ ಬಡ್ಡಿ ದರಕ್ಕೆ ಡ್ರ್ಯಾಗನ್‌ ಕತ್ತರಿ;ಮಂದಗತಿಗೆ ಹೊರಳಿದ ಚೀನ ಆರ್ಥಿಕತೆಯ ಪರಿಣಾಮ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಕಾಂಗ್ರೆಸ್‌ ಪಾದಯಾತ್ರೆ  ಮೇಕೆದಾಟು ಯೋಜನೆಗೆ ಮಾರಕ : ಅಶೋಕ್‌

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಹೈಕೋರ್ಟ್‌ ಕಲಾಪ ಯೂಟ್ಯೂಬ್‌ನಲ್ಲಿ ನೇರ ಪ್ರಸಾರ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಚಾಲನೆ : ಅರ್ಜಿ ಹಾಕಲು ಜ. 21 ಕೊನೆ ದಿನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಯಲ್ಲಾಪುರ : 108 ಅಂಬ್ಯುಲೆನ್ಸ್ ನಲ್ಲಿ ಅವಳಿ ಮಕ್ಕಳ ಜನನ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

ಶಾಲೆ ವಿದ್ಯಾರ್ಥಿನಿ ಸೇರಿ ಕುರುಗೋಡು ತಾಲೂಕಿನಲ್ಲಿ 17 ಕೋವಿಡ್ ಪ್ರಕರಣಗಳು ಪತ್ತೆ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಸ್ತಬ್ಧಚಿತ್ರದ ಹಿಂದಿನ ಆಯ್ಕೆ ಚಿತ್ರಣ

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

ಕೇಂದ್ರ ಸರ್ಕಾರ ಬಜೆಟ್‌: ರಸಗೊಬ್ಬರ ಸಬ್ಸಿಡಿ 1.4 ಲಕ್ಷ ಕೋಟಿಗೆ ಏರಿಕೆ?

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

2021ರಲ್ಲಿ ಚೀನದ ಜನಸಂಖ್ಯೆಯಲ್ಲಿ ಬರೀ 5 ಲಕ್ಷ ಏರಿಕೆ

್ತಯುಕಮನಬವಚಷ

ಚುನಾವಣೆಯಲ್ಲಿ ನಿರೀಕ್ಷೆ ಗಿಂತ ಹೆಚ್ಚು ಮತ

ರತಯುಇಕಜಹಗಷ

ಮಲಕಂಬ-ರೋಪ್‌ ಮಲ್ಲಕಂಬ ಸರ್ಧೆಗೆ  ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.