ಶ್ರೀನಿವಾಸ ಮೂರ್ತಿ ನೇತೃತ್ವದ ಸಮಿತಿ ಅವಧಿ ಮುಂದುವರಿಕೆ: ಸರಕಾರ ಆದೇಶ
Team Udayavani, Dec 9, 2022, 8:39 PM IST
ಬೆಂಗಳೂರು: ರಾಜ್ಯದ ಎಲ್ಲ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಅಧ್ಯಯನ ನಡೆಸಿ ವರದಿ ನೀಡುವ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯ ಅವಧಿಯನ್ನು ವಿಸ್ತರಿಸಿ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.
2023ರ ಮಾರ್ಚ್ ವರೆಗೆ ಈ ಸಮಿತಿ ಅಸ್ತಿತ್ವದಲ್ಲಿ ಇರಲಿದೆ ಎಂದು ಸಾರಿಗೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ರಾಜ್ಯದ ಎಲ್ಲ ರಸ್ತೆ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಡೀಕರಣಗಳ ಅಧ್ಯಯನ ನಡೆಸಿ ವರದಿ ನೀಡುವ ಸಂಬಂಧ ಈ ಹಿಂದೆ ಸರಕಾರ ಈ ಸಮಿತಿಗೆ ಮೂರು ತಿಂಗಳ ಗಡುವು ನೀಡಿತ್ತು.
ಸಮಿತಿಯು ಸರಕಾರಕ್ಕೆ ಸಲ್ಲಿಸಿರುವ ವರದಿಯು ಪರಿಶೀಲನೆಯಲ್ಲಿದೆ. ವರದಿ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವರೆಗೆ ಈ ಸಮಿತಿ ಮುಂದುವರಿಯುವುದು ಸೂಕ್ತವೆಂದು ಅದರ ಅವಧಿಯನ್ನು ಸರಕಾರ ಮುಂದುವರಿಸಿದೆ.