ವಿವಾದ ಮಾಡುತ್ತೀರಾ?:ಮಾಧ್ಯಮದವರ ಮೇಲೆ ಗರಂ ಆದ ಸಿದ್ದರಾಮಯ್ಯ
ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ
Team Udayavani, Mar 26, 2022, 2:06 PM IST
ಮೈಸೂರು: ನೀವೆ ಪ್ರಶ್ನೆ ಕೇಳಿ, ನೀವೆ ವಿವಾದ ಮಾಡುತ್ತೀರಾ ಎಂದು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಶನಿವಾರ ಮಾಧ್ಯಮ ಪ್ರತಿನಿಧಿಗಳ ಮೇಲೆ ಗರಂ ಆಗಿದ್ದಾರೆ.
ನಾನು ಸ್ವಾಮೀಜಿಗಳ ಬಗ್ಗೆ ಶುಕ್ರವಾರ ಅಗೌರವವಾಗಿ ಮಾತನಾಡಿಲ್ಲ, ನಾನು ನಿನ್ನೆ ಹಿಜಾಬ್ ಪದವೇ ಬಳಸಿಲ್ಲ.ಹಿಜಾಬ್ ಗೂ ದುಪ್ಪಟಕ್ಕೂ ವ್ಯತ್ಯಾಸ ಗೊತ್ತಿಲ್ವಾ ನಿಮಗೆ.? ಎಂದು ಪ್ರಶ್ನಿಸಿದರು.
ಹಿಜಾಬೇ ಬೇರೆ, ದುಪ್ಪಟವೇ ಬೇರೆ. ಜನ ಸಾರ್ವಜನಿಕವಾಗಿ ಯಾವ ಯಾವ ವಸ್ತ್ರ ಬಳಸುತ್ತಾರೆಂದು ಹೇಳಿದ್ದೇನೆ.ಇದನ್ನು ಯಾವುದಕ್ಕೋ ನೀವು ಲಿಂಕ್ ಮಾಡಿ ವಿವಾದ ಸ್ಪಷ್ಠಿಸಿದ್ದೀರಿ. ನನಗೆ ಹಿಂದಿನಿಂದಲೂ ಸ್ವಾಮೀಜಿಗಳ ಮೇಲೆ ಅಪಾರ ಗೌರವ ವಿದೆ. ನಾನು ಮಠಗಳ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ದುಪ್ಪಟ ಹಾಕಿಕೊಂಡು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೊಡಿ ಅಂತ ಕೇಳಿದ್ದೇನೆ.ನಾನು ಸಮವಸ್ತ್ರದ ವಿರೋಧಿ ಅಲ್ಲ.ಸಮವಸ್ತ್ರದ ಜೊತೆ ಅದೇ ಬಣ್ಣದ ದುಪ್ಪಟಕ್ಕೆ ಅವಕಾಶ ನೀಡಿ ಅಂತ ಕೇಳಿದ್ದೇನೆ. ಇದರಲ್ಲಿ ತಪ್ಪೇನಿದೆ.ನಾನು ಸಲಹೆ ಕೊಟ್ಟಿದ್ದೇನೆ. ಸ್ವೀಕರಿಸುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟಿದ್ದು ಎಂದು ಮಾಧ್ಯಮಗಳ ಪ್ರಶ್ನೆಗೆ ಗರಂ ಆಗಿಯೇ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು