ಕಲಬುರಗಿಯಲ್ಲಿ‌ ಕೋವಿಡ್-19 ಗೆ ಮತ್ತಿಬ್ಬರು ಬಲಿ: ಮೃತರ ಸಂಖ್ಯೆ 10ಕ್ಕೆ ಏರಿಕೆ


Team Udayavani, Jun 12, 2020, 7:41 PM IST

ಕಲಬುರಗಿಯಲ್ಲಿ‌ ಕೋವಿಡ್-19 ಗೆ ಮತ್ತಿಬ್ಬರು ಬಲಿ: ಮೃತರ ಸಂಖ್ಯೆ 10ಕ್ಕೆ ಏರಿಕೆ

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್‌ ಮಹಾಮಾರಿ‌ಯಿಂದ ಮತ್ತಿಬ್ಬರು ಸಾವನ್ನಪ್ಪಿದ್ದಾರೆ.‌ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಇಬ್ಬರು ಪುರುಷರು ಕೋವಿಡ್ ಗೆ ಬಲಿಯಾಗಿದ್ದು, ಇದರೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ಇಬ್ಬರು ಮೃತರು ಸೇರಿ ಶುಕ್ರವಾರ ಒಟ್ಟು 20 ಜನರಿಗೆ ಕೋವಿಡ್ ದೃಢಪಟ್ಟಿದೆ. ‌ನಗರದ ಎಂಎಸ್ ಕೆ ಮಿಲ್ ಪ್ರದೇಶದ 53 ವರ್ಷದ ವ್ಯಕ್ತಿ (ಪಿ 6323) ಮತ್ತು ಚಿಂಚೋಳಿ ತಾಲೂಕಿನ ಕೆರಳ್ಳಿ ಗ್ರಾಮದ 48 ವರ್ಷದ ವ್ಯಕ್ತಿ ಜೂ.10ರಂದೇ ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದೀಗ ಈ ಇಬ್ಬರಿಗೂ ಕೋವಿಡ್ ದೃಢಪಟ್ಟಿದೆ. ಉಸಿರಾಟ ತೊಂದರೆ ಹಿನ್ನೆಲೆಯಲ್ಲಿ ಜೂ.9ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಜಿಲ್ಲೆಯಲ್ಲಿ ಮೊದಲಿಗೆ ಮಾ.10ರಂದು ಕಲಬುರಗಿ ನಗರದ 76 ವರ್ಷದ ವೃದ್ಧ ಕೋವಿಡ್ ಗೆ ಬಲಿಯಾಗಿದ್ದ.‌ ಇದು ದೇಶದಲ್ಲೇ ಕೋವಿಡ್ ಸೋಂಕಿಗೆ ದಾಖಲಾದ ಮೊದಲ ಸಾವಾಗಿತ್ತು. ಜೂ.4ರಂದು ಆಳಂದದ 17 ವರ್ಷದ ವಿದ್ಯಾರ್ಥಿನಿ ಕೋವಿಡ್ ಗೆ ತುತ್ತಾಗಿದ್ದಳು. ಈ ಮೂಲಕ ರಾಜ್ಯದಲ್ಲೇ ಅತಿ ಕಿರಿಯ ಸೋಂಕಿತೆ ಬಲಿಯಾದ ಕುಖ್ಯಾತಿ ಸಹ ಜಿಲ್ಲೆಗಿದೆ.

800ರ ಗಡಿ ದಾಟಿದ ಸೋಂಕಿತರು: ಶುಕ್ರವಾರ ಪತ್ತೆಯಾದ 20 ಹೊಸ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 816ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಿಂದ ವಾಪಸ್ ಆಗಿರುವ 16 ಜನರು ಹಾಗೂ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಇಬ್ಬರಿಗೂ ಸೋಂಕು ಕಾಣಿಸಿಕೊಂಡಿದೆ.

ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಮತ್ತು ಫರತಾಹಬಾದ್ ಗ್ರಾಮದಲ್ಲಿ ತಲಾ ಮೂವರು, ಕಮಲಾಪುರ ತಾಲೂಕಿನ ಗೊಬ್ಬುರವಾಡಿ ಗ್ರಾಮದಲ್ಲಿ ಐವರು, ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಹಾಗೂ ಕರಜಗಿ ಗ್ರಾಮದಲ್ಲಿ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಇನ್ನು, ಶುಕ್ರವಾರ ಒಂದೇ ದಿನ 60 ಜನ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಇಲ್ಲಿಯವರೆಗೂ 345 ಜನರು ಬಿಡುಗಡೆಗೊಂಡಂತೆ ಆಗಿದೆ. ಉಳಿದ 461 ಜನ ಸೋಂಕಿತರು ಐಸೋಲೇಷನ್ ವಾರ್ಡ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.