ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,323ಕ್ಕೆ ತಲುಪಿದೆ
Team Udayavani, May 20, 2022, 12:19 PM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,259 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,31,822ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಮೇ 20) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ
ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,044ಕ್ಕೆ ಇಳಿಕೆಯಾಗಿದೆ. ಗುರುವಾರಕ್ಕಿಂತ ಇಂದು ಕೋವಿಡ್ ಪ್ರಕರಣದಲ್ಲಿ ಸ್ವಲ್ಪ ಇಳಿಕೆಯಾಗಿದೆ. 24ಗಂಟೆಯಲ್ಲಿ 350ಕ್ಕೂ ಅಧಿಕ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.
ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿಗೆ 20 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,323ಕ್ಕೆ ತಲುಪಿದೆ ಎಂದು ಅಂಕಿಅಂಶ ವಿವರಿಸಿದೆ.
24ಗಂಟೆಯಲ್ಲಿ 20 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರಲ್ಲಿ ಕೇರಳದಲ್ಲಿ 17 ಮಂದಿ ಹಾಗೂ ಉತ್ತರಪ್ರದೇಶದಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.0.50ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.53ರಷ್ಟಿದೆ. ಕೋವಿಡ್ 19 ಸೋಂಕಿನಿಂದ ಈವರೆಗೆ ದೇಶಾದ್ಯಂತ 4,25,92,455 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ಏಕಬಳಕೆ ಪ್ಲಾಸ್ಟಿಕ್ ನಿಷೇಧ: ದಿಲ್ಲಿಯಲ್ಲಿ ಲಕ್ಷ ರೂ. ದಂಡ: ಸಚಿವ ಗೋಪಾಲ್ ರೈ
ಗೋವಾ ಕಾರವಾರ ಗಡಿಯಲ್ಲಿ ಹಿಮ್ಮುಖವಾಗಿ ಚಲಿಸಿ ಕಂದಕಕ್ಕೆ ಬಿದ್ದ ಟ್ರಕ್
ಆದಾಯ ತೆರಿಗೆ ಇಲಾಖೆಯಿಂದ “ಲವ್ ಲೆಟರ್” ಬಂದಿದೆ…ಎನ್ ಸಿಪಿ ವರಿಷ್ಠ ಶರದ್ ಪವಾರ್ ವ್ಯಂಗ್ಯ
ಮುಂಬೈ ಜನತೆಗೆ ದ್ರೋಹ ಎಸಗಬೇಡಿ: ಮೆಟ್ರೋ ಕಾರ್ ಶೆಡ್ ಸ್ಥಳಾಂತರಕ್ಕೆ ಠಾಕ್ರೆ ತಿರುಗೇಟು
MUST WATCH
ಹೊಸ ಸೇರ್ಪಡೆ
ಗುತ್ತಿಗೆ ಪೌರಕಾರ್ಮಿಕರ ಖಾಯಂಗೆ ಒಪ್ಪಿಗೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
ಪಾಕಿಸ್ತಾನದಲ್ಲಿ ವಿದ್ಯುತ್ ಬಿಕ್ಕಟ್ಟು: ಮೊಬೈಲ್, ಇಂಟರ್ನೆಟ್ ಸೇವೆ ಸ್ಥಗಿತ?
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಶಿರೋಮಣಿ ಅಕಾಲಿದಳ ಬೆಂಬಲ: ರಾಗ ಬದಲಿಸಿದ ದೀದಿ
ರಾಜ್ಯ ಸಾರಿಗೆ ವ್ಯವಸ್ಥೆಗೆ ಸರ್ಕಾರ ವಿಷ ಕೊಟ್ಟು ಕೊಲ್ಲುತ್ತಿದೆ: ಸಿದ್ದರಾಮಯ್ಯ
ಒನ್ಪ್ಲಸ್ ನೋರ್ಡ್ 2ಟಿ 5ಜಿ ಬಿಡುಗಡೆ: 80 ವ್ಯಾಟ್ ಫಾಸ್ಟ್ ಚಾರ್ಜಿಂಗ್