ಭಾರತದಲ್ಲಿ 24ಗಂಟೆಯಲ್ಲಿ 2,685 ಕೋವಿಡ್ ಪ್ರಕರಣ ದೃಢ, 33 ಮಂದಿ ಸಾವು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,308ಕ್ಕೆ ಏರಿಕೆಯಾಗಿದೆ.
Team Udayavani, May 28, 2022, 11:11 AM IST
ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,685 ಕೋವಿಡ್ 19 ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,31,50,215ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಮೇ 28) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಆಂಧ್ರಪ್ರದೇಶ: ಸಿಲಿಂಡರ್ ಸ್ಫೋಟ- ಮನೆ ಕುಸಿದು ಬಿದ್ದು 3 ವರ್ಷದ ಮಗು ಸೇರಿ ನಾಲ್ವರು ಸಾವು
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,308ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 33 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,572ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 494 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.75ರಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ತಿಳಿಸಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.0.60ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.54ರಷ್ಟಿದೆ. ಮತ್ತೊಂದೆಡೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,09,335ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಶ್ವಾಸಮತ…ಮಹಾರಾಷ್ಟ್ರ ಗವರ್ನರ್ ಆದೇಶದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಶಿವಸೇನೆ
ಗೋವಾದತ್ತ ಬಂಡಾಯ ಶಿವಸೇನೆ ಶಾಸಕರು; ನಾಳೆ ನೇರವಾಗಿ ಸದನಕ್ಕೆ
Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ
ಶೀಘ್ರ ಸರಕಾರಿ ಬ್ಯಾಂಕ್ ಪೂರ್ಣ ಖಾಸಗೀಕರಣ? ಪಿಎಸ್ಬಿಗಳಿಂದ ನಿರ್ಗಮಿಸಲು ಸರಕಾರ ಸಿದ್ಧತೆ
ವಿನಾಯಿತಿಗೆ ಎಳ್ಳುನೀರು: ಹೊಟೇಲ್ ವಾಸ್ತವ್ಯ,ಆಸ್ಪತ್ರೆ ಕೊಠಡಿ,ಅಂಚೆ ಸೇವೆ ಇನ್ನು ದುಬಾರಿ