ಒಮಿಕ್ರಾನ್ ಹೆಚ್ಚಳದ ಆತಂಕ; ಭಾರತದಲ್ಲಿ ಫೆಬ್ರುವರಿಯಲ್ಲಿ 3ನೇ ಅಲೆ ಸಾಧ್ಯತೆ: ಐಐಟಿ ವಿಜ್ಞಾನಿ
ಒಮಿಕ್ರಾನ್ ಸೋಂಕು ಪ್ರಕರಣಗಳ ಹೆಚ್ಚಳ ಮೂರನೇ ಅಲೆಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.
Team Udayavani, Dec 7, 2021, 10:52 AM IST
ಮುಂಬಯಿ:ಕೋವಿಡ್ ನ ಹೊಸ ರೂಪಾಂತರ ತಳಿ ಒಮಿಕ್ರಾನ್ ನ ಹಲವು ಪ್ರಕರಣಗಳು ಪತ್ತೆಯಾಗುತ್ತಿದ್ದು, ಏತನ್ಮಧ್ಯೆ ಭಾರತದಲ್ಲಿ ಫೆಬ್ರುವರಿ ಹೊತ್ತಿಗೆ ಮೂರನೇ ಅಲೆಯ ಮೂಲಕ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಐಐಟಿ ವಿಜ್ಞಾನಿಗಳು ಎಚ್ಚರಿಸಿದ್ದಾರೆ.
ಇದನ್ನೂ ಓದಿ:ನೇತ್ರದಾನದ ಮೂಲಕ ಅಂಧರ ಬಾಳಿಗೆ ಕಣ್ಣಾದ ಮಾಜಿ ಶಾಸಕ ಉರಿಮಜಲು ರಾಮ ಭಟ್
ಕೋವಿಡ್ 19 ಸೋಂಕಿನ ಬೆಳವಣಿಗೆ ಕುರಿತು ಅಧ್ಯಯನ ನಡೆಸುತ್ತಿರುವ ಐಐಟಿ ವಿಜ್ಞಾನಿ ಮಣೀಂದ್ರ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದು, ಎರಡನೇ ಅಲೆಯ ತೀವ್ರತೆಗೆ ಹೋಲಿಸಿದರೆ ಮೂರನೇ ಅಲೆ ಹೆಚ್ಚು ಗಂಭೀರ ಸ್ವರೂಪದ್ದಾಗಿರುವುದಿಲ್ಲ. ಒಮಿಕ್ರಾನ್ ಸೋಂಕು ಪ್ರಕರಣಗಳ ಹೆಚ್ಚಳ ಮೂರನೇ ಅಲೆಗೆ ಕಾರಣವಾಗಲಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಸೋಂಕು ಪ್ರಕರಣ ಹೆಚ್ಚಳವಾಗುವ ಮೂಲಕ ಫೆಬ್ರುವರಿಯಲ್ಲಿ ಮೂರನೇ ಅಲೆ ಕಾಣಿಸಿಕೊಳ್ಳಲಿದೆ. ಆದರೆ ಒಮಿಕ್ರಾನ್ ಡೆಲ್ಟಾ ಗಿಂತ ಕಡಿಮೆ ಪ್ರಮಾಣದ ತೀವ್ರತೆ ಹೊಂದಿರಲಿದೆ ಎಂದು ವಿಶ್ಲೇಷಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ದಾಖಲೆಯ ಪ್ರಮಾಣದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸೂಕ್ಷ್ಮವಾಗಿ ಅಧ್ಯಯನ ನಡೆಸಲಾಗುತ್ತಿದೆ. ದಕ್ಷಿಣ ಆಫ್ರಿಕಾದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾದರೂ ಕೂಡಾ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಬಹಳ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಒಮಿಕ್ರಾನ್ ಕುರಿತ ಹೊಸ ಅಂಕಿಅಂಶದ ಮೂಲಕ ಸೋಂಕು ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯ ಆಧಾರದ ಮೇಲೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ ಎಂದು ಅಗರ್ವಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ