ತಮಿಳುನಾಡಿನಲ್ಲಿ ನಿಲ್ಲದ ಕೋವಿಡ್ ಕಾಟ
ಬುಧವಾರ ಒಂದೇ ದಿನ 1286 ಪ್ರಕರಣ ಪತ್ತೆ
Team Udayavani, Jun 3, 2020, 8:54 PM IST
ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್-19 ವೈರಸ್ ಹಾವಳಿ ತೀವ್ರವಾಗಿ ಮುಂದುವರಿದಿದ್ದು, ಒಂದೇ ದಿನ 1286 ಪ್ರಕರಣಗಳು ಪತ್ತೆಯಾಗಿವೆ. ಜತೆಗೆ 11 ಮಂದಿ ಮೃತಪಟ್ಟಿದ್ದಾರೆ.
ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 1 ಸಾವಿರಕ್ಕೂ ಮಿಕ್ಕಿ ಪಾಸಿಟಿವ್ ಕೇಸುಗಳು ಪತ್ತೆಯಾಗಿವೆ. ಇವರಲ್ಲಿ 15 ಮಂದಿ ವಿದೇಶದಿಂದ ಬಂದವರು. 27 ಪ್ರಕರಣಗಳು ಚೆನ್ನೈಯಲ್ಲೇ ಪತ್ತೆಯಾಗಿವೆ.
ಇದರೊಂದಿಗೆ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 25,872ಕ್ಕೆ ಏರಿಕೆಯಾಗಿದೆ. ಇದರಲ್ಲಿ ಚೆನ್ನೈ ನಗರದ ಪಾಲು 17,598 ಆಗಿದೆ. ಸದ್ಯ 11,345 ಚಾಲ್ತಿಯಲ್ಲಿರುವ ಪ್ರಕರಣಗಳಾಗಿವೆ.
ಬುಧವಾರ 610 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಮೃತಪಟ್ಟವರಲ್ಲಿ ಹಲವರು ವಯೋಸಹಜ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 208ಕ್ಕೇರಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್