ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಗೆ ಮೊದಲ ಬಲಿ
Team Udayavani, Jun 10, 2020, 7:54 PM IST
ಸಾಂದರ್ಭಿಕ ಚಿತ್ರ.
ಧಾರವಾಡ :ಕೋವಿಡ್-19 ಸೋಂಕಿನ ಕಾರಣದಿಂದ ಧಾರವಾಡ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮೇ.23 ರಂದು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಾಗಿದ್ದ ಹುಬ್ಬಳ್ಳಿ ಗಿರಣಿ ಚಾಳ ನಿವಾಸಿ ಪಿ 1943 ( 58 ವರ್ಷ , ಪುರುಷ ) ಜೂನ್ 9 ರಂದು ರಾತ್ರಿ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಪ್ರವಾಸ ಹಿನ್ನೆಲೆ ಹೊಂದಿದ್ದ ಇವರಲ್ಲಿ ಕೋವಿಡ್ ಪಾಸಿಟಿವ್ ಜೊತೆಗೆ ತೀವ್ರ ಉಸಿರಾಟದ ತೊಂದರೆ , ಮಧುಮೇಹ ,ಬಹು ಅಂಗಾಂಗ ವೈಫಲ್ಯ ಮತ್ತಿತರ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿದ್ದವು.
ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಸರ್ಕಾರದ ಮಾರ್ಗಸೂಚಿಗಳನ್ವಯ ಹುಬ್ಬಳ್ಳಿಯ ಹೆಗ್ಗೇರಿ ರುದ್ರಭೂಮಿಯಲ್ಲಿ ಜರುಗಿತು.