ಕೋವಿಡ್ ಸೋಂಕು; ರಾಜ್ಯವ್ಯಾಪಿ ಶಾಲೆ ಬಂದ್ ಇಲ್ಲ: ಶಿಕ್ಷಣ ಸಚಿವ ನಾಗೇಶ್
ಭೌತಿಕ ತರಗತಿ ನಿಲ್ಲಿಸುವ ಸ್ಥಿತಿ ಸದ್ಯಕ್ಕೆ ಇಲ್ಲ
Team Udayavani, Jan 11, 2022, 11:44 AM IST
ಬೆಂಗಳೂರು: ಶಾಲೆಗಳಿಂದ ಕೋವಿಡ್ ಸೋಂಕು ಹರಡುತ್ತದೆ ಎಂದು ಎಲ್ಲೂ ಸಾಬೀತಾಗಿಲ್ಲ. ಹೀಗಾಗಿ ರಾಜ್ಯವ್ಯಾಪಿ ಶಾಲೆಗಳನ್ನು ಮುಚ್ಚುವ ಪ್ರಸ್ತಾಪ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ಪುತ್ರ ಮತ್ತು ಸೊಸೆಗೂ ಕೋವಿಡ್ ಪಾಸಿಟಿವ್
ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಮಾತ್ರ ಕೋವಿಡ್ ಸೋಂಕು ಹೆಚ್ಚಿದೆ. ಹೀಗಾಗಿ ಇಲ್ಲಿ ಮಾತ್ರ ಶಾಲೆ ಬಂದ್ ಮಾಡಿದ್ದೇವೆ. ಆದರೆ ರಾಜ್ಯದ ಇತರ ಭಾಗಗಳಲ್ಲಿ ಇದೇ ಪರಿಸ್ಥಿತಿ ಇಲ್ಲ.ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳಲ್ಲಿ ಭೌತಿಕ ತರಗತಿ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿ ನಡೆಸುತ್ತೇವೆ ಎಂದು ಹೇಳಿದ್ದಾರೆ.
ತಾಲೂಕು ಮಟ್ಟದಲ್ಲಿ ಪಾಸಿಟಿವಿಟಿ ದರ ಹೆಚ್ಚಾದರೆ ಶಾಲೆಯನ್ನು ಮುಚ್ಚುವ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ. ಶಾಲೆಗಳಿಂದ ಕೋವಿಡ್ ಹಬ್ಬುತ್ತದೆ ಎಂಬ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲ ಎಂದು ಹೇಳಿದರು.
ಯಾವುದಾದರೂ ಶಾಲೆಯಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡರೆ ಆ ಶಾಲೆಯನ್ನು ತಾತ್ಕಾಲಿಕವಾಗಿ ನಾಲ್ಕು ದಿನ ಮುಚ್ಚಬಹುದು. ಆದರೆ ಇಡಿ ರಾಜ್ಯದಲ್ಲಿ ಶಾಲಾ ತರಗತಿ ಬಂದ್ ಮಾಡುವ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಉತ್ಸುಕರಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂದಾರ್ತಿ ಸಮೀಪ ಕಾರಿನಲ್ಲಿ ಭಸ್ಮವಾಗಿದ್ದು ಬೆಂಗಳೂರಿನ ನವ ಜೋಡಿ!
ಪರಿಷತ್ : ಹಿಂದುಳಿದ ವರ್ಗ,ಮುಸ್ಲಿಂ ಅಥವಾ ಕ್ರೈಸ್ತರಿಗೆ ಅವಕಾಶಕ್ಕೆ ಸಿದ್ದರಾಮಯ್ಯ ಮನವಿ
ಅಲ್ಲಿ ಲವ್- ಇಲ್ಲಿ ಮದುವೆ: ತಾಳಿ ಕಟ್ಟುವ ವೇಳೆ ಮದುವೆಗೆ ‘ನೋ ‘ಎಂದು ವಧುವಿನ ಹೈಡ್ರಾಮಾ
ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
ಮಳೆ ಅನಾಹುತ : 8 ವಲಯಗಳ ಕಾರ್ಯಪಡೆಗೆ ಸಚಿವರುಗಳ ನೇತೃತ್ವ