ರಾಜ್ಯದಲ್ಲಿ 25 ಸಾವಿರಕ್ಕಿಂತ ಕಡಿಮೆ ಕೋವಿಡ್ ಕೇಸ್: ಇಂದು 56 ಸಾವು
Team Udayavani, Jan 31, 2022, 7:32 PM IST
ಬೆಂಗಳೂರು : ರಾಜ್ಯ ದಲ್ಲಿ ದಿನನಿತ್ಯದ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಲೇ ಇದ್ದು, ಸೋಮವಾರ 24,172 ಹೊಸ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲಿ ಅತೀ ಹೆಚ್ಚಿನ 10,692 ಹೊಸ ಪ್ರಕರಣಗಳು ದೃಢ ಪಟ್ಟಿವೆ. ಭಾನುವಾರ 28,264 ಹೊಸ ಪ್ರಕರಣಗಳು ದಾಖಲಾಗಿದ್ದವು.
ರಾಜ್ಯದಲ್ಲಿ ಧನಾತ್ಮಕ ದರ 17.11% ಇದ್ದು, 30,869 ಡಿಸ್ಚಾರ್ಜ್ಗಳು ಇಂದು ದಾಖಲಾಗಿವೆ. 2,44,331 ಸಕ್ರಿಯ ಪ್ರಕರಣಗಳಿದ್ದು, ಬೆಂಗಳೂರಿನಲ್ಲಿ 1ಲಕ್ಷದ 34 ಸಾವಿರ ಪ್ರಕರಣಗಳಿವೆ.
ಇಂದು ರಾಜ್ಯದಲ್ಲಿ 56 ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.
ಇಂದು 1,41,240 ಮಂದಿಯ ಪರೀಕ್ಷೆ ಮಾಡಲಾಗಿದೆ.
ಜನವರಿ 23 ರಂದು ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 50 ಸಾವಿರ ದಾಟಿ ಆತಂಕ ನಿರ್ಮಾಣವಾಗಿತ್ತು, ಆ ಬಳಿಕ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ