ನಿವಾರ್ ಚಂಡಮಾರುತ ಭೀತಿ: ತಮಿಳುನಾಡಿನಲ್ಲಿ ಹೈಅಲರ್ಟ್, ಕರ್ನಾಟಕದಲ್ಲೂ ಮಳೆ ಸಾಧ್ಯತೆ
ತೀವ್ರ ವಾಯುಭಾರ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗುವ ಸಾಧ್ಯತೆ
Team Udayavani, Nov 24, 2020, 4:30 PM IST
ಚೆನ್ನೈ: ಪ್ರಬಲ ನಿವಾರ್ ಚಂಡಮಾರುತ ಬುಧವಾರ(ನವೆಂಬರ್ 25, 2020) ತಮಿಳುನಾಡಿನ ಕಾರೈಕಲ್ ಮತ್ತು ಮಹಾಬಲಿಪುರಂ ಕರಾವಳಿ ಪ್ರದೇಶದಿಂದ ಹಾದು ಹೋಗುವ ನಿರೀಕ್ಷೆ ಇದ್ದಿರುವುದಾಗಿ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ ನಿಟ್ಟಿನಲ್ಲಿ ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಹೈಅಲರ್ಟ್ ಘೋಷಿಸಲಾಗಿದೆ ಎಂದು ವರದಿ ಹೇಳಿದೆ.
ಬಂಗಾಳಕೊಲ್ಲಿ ಪ್ರದೇಶದಲ್ಲಿ ಸೋಮವಾರ ತೀವ್ರ ವಾಯುಭಾರ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗುವ ಸಾಧ್ಯತೆ ಇದ್ದು, ಮುಂದಿನ 12 ಗಂಟೆಯೊಳಗೆ ಚಂಡಮಾರುತ ಬಡಿದಪ್ಪಳಿಸಲಿದೆ ಎಂದು ತಿಳಿಸಿದೆ.
ಮುಂಜಾಗ್ರತಾ ಕ್ರಮವಾಗಿ ಒಟ್ಟು 30 ಎನ್ ಡಿಆರ್ ಎಫ್ ತಂಡವನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಐಎಂಡಿಯ ಹೊಸ ಪ್ರಕಟಣೆಯ ಪ್ರಕಾರ, ಬಂಗಾಳಕೊಲ್ಲಿಯಲ್ಲಿ ತೀವ್ರವಾದ ವಾಯುಭಾರ ಕುಸಿತ ಸಂಭವಿಸಿದ ನಿಟ್ಟಿನಲ್ಲಿ ಪಾಂಡಿಚೇರಿಯ ಪೂರ್ವ, ಆಗ್ನೇಯ ಪಾಂಡಿಚೇರಿಯಿಂದ 450 ಕಿಲೋ ಮೀಟರ್ ಹಾಗೂ ಚೆನ್ನೈನಿಂದ 480 ಕಿಲೋ ಮೀಟರ್ ದೂರದಲ್ಲಿರುವ ಬಂಗಾಳ ಕೊಲ್ಲಿಯ ಮಧ್ಯೆ ಚಂಡಮಾರುತದ ಕೇಂದ್ರವಾಗಿದೆ ಎಂದು ವರದಿ ಹೇಳಿದೆ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕಾಂಗ್ರೇಸ್ ನೇತೃತ್ವದ 16 ಪ್ರತಿಪಕ್ಷಗಳ ಘೋಷಣೆ
ಹರಿಯಾಣದ 3 ಜಿಲ್ಲೆಗಳಲ್ಲಿ ಇಂಟರ್ನೆಟ್ ಬಂದ್; ರೈತರ ತೆರವಿಗೆ ಉಭಯ ಸರಕಾರಗಳ ಹರಸಾಹಸ
ಪ್ರತಿಭಟನೆ ಅಂತ್ಯಗೊಳಿಸಿ, ಕೂಡಲೇ ಸ್ಥಳ ಬಿಟ್ಟು ಹೊರಡಿ: ರೈತರಿಗೆ ಉತ್ತರ ಪ್ರದೇಶ ಸರ್ಕಾರ
ದೆಹಲಿ ಹಿಂಸಾಚಾರ: ರೈತ ಮುಖಂಡರ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ದೀಪ್ ಸಿಧು ನಾಪತ್ತೆ?
ಅಪ್ರಾಪ್ತೆಯ ಕೈ ಹಿಡಿದು, ಜಿಪ್ ತೆಗೆಯುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
ಕೋಣದ ಜತೆ 9 ವರ್ಷದ ಬಾಲಕನ ಕಂಬಳ ಓಟ ಪ್ರಾಕ್ಟಿಸ್! ಕಂಬಳದಲ್ಲೇ ಸಾಧನೆ ಮಾಡಬೇಕೆಂಬ ಹಂಬಲವಂತೆ
ಫೆ. 1ರಿಂದ 9 ಮತ್ತು 11ನೇ ತರಗತಿಗಳೂ ಆರಂಭ : ಸಚಿವ ಸುರೇಶ್ ಕುಮಾರ್
ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು ಕಾಂಗ್ರೇಸ್ ನೇತೃತ್ವದ 16 ಪ್ರತಿಪಕ್ಷಗಳ ಘೋಷಣೆ
ಈ ವಿದ್ಯಾರ್ಥಿನಿ ಏಕ್ ದಿನ ಕಾ ಸಿಇಓ !
ಹರಿಯಾಣದ 3 ಜಿಲ್ಲೆಗಳಲ್ಲಿ ಇಂಟರ್ನೆಟ್ ಬಂದ್; ರೈತರ ತೆರವಿಗೆ ಉಭಯ ಸರಕಾರಗಳ ಹರಸಾಹಸ