ಸ್ಮಾರ್ಟ್‌ಸಿಟಿ ಕಾಮಗಾರಿ ನಿಯಮ ಪಾಲನೆಗೆ ಗುತ್ತಿಗೆದಾರರ ಮೇಲೆ ನಿಗಾ

Team Udayavani, Mar 24, 2021, 3:50 AM IST

ಸ್ಮಾರ್ಟ್‌ಸಿಟಿ ಕಾಮಗಾರಿ ನಿಯಮ ಪಾಲನೆಗೆ ಗುತ್ತಿಗೆದಾರರ ಮೇಲೆ ನಿಗಾ

ಮಹಾನಗರ: ಹೈಕೋರ್ಟ್‌ ಕೆಂಗಣ್ಣಿಗೆ ಗುರಿಯಾಗಿದ್ದ ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯ ಮುಂದಿನ ಕಾಮಗಾರಿಯನ್ನು ಅತ್ಯಂತ ಎಚ್ಚರಿಕೆಯಿಂದ ನಡೆಸಲು ತೀರ್ಮಾನಿ ಸಲಾಗಿದ್ದು, ಕಾಮಗಾರಿಯ ನಿಯಮಗಳು ಸಮರ್ಪಕವಾಗಿ ಪಾಲನೆಯಾಗುವಂತೆ ಎಚ್ಚರ ವಹಿಸಲು ಗುತ್ತಿಗೆದಾರರ ಮೇಲೆ ನಿರಂತರ ನಿಗಾ ವಹಿಸಲು ಸ್ಮಾರ್ಟ್‌ಸಿಟಿ ನಿಗಮ ತೀರ್ಮಾನಿಸಿದೆ.

ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿ ಆರಂಭಕ್ಕೆ ವಾರದ ಹಿಂದೆಯಷ್ಟೇ ಹೈಕೋರ್ಟ್‌ ಹಸುರು ನಿಶಾನೆ ನೀಡಿದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣ ಪ್ರಮಾಣದಲ್ಲಿ ಎಲ್ಲಿಯೂ ಆರಂಭವಾಗಿಲ್ಲ. ಜಲ್ಲಿ ಕೊರತೆ ಸಹಿತ ನಾನಾ ರೀತಿಯ ಕಾರಣಗಳಿಗೆ ಕಾಮಗಾರಿ ಪುನರಾರಂಭ ವಿಳಂಬವಾಗುತ್ತಿದೆ.

ಸ್ಮಾರ್ಟ್‌ಸಿಟಿ ಕಾಮಗಾರಿ ವೇಳೆ ಕಟ್ಟಡ ನೆಲಸಮದ ತ್ಯಾಜ್ಯ ನಿರ್ವಹಣೆಯಲ್ಲಿ ನಿಯಮ ಪಾಲನೆ ಮಾಡಲಾಗುತ್ತಿಲ್ಲ ಎಂಬ ಕಾರಣಕ್ಕೆ ಸುಮಾರು ಎರಡು ತಿಂಗಳ ಕಾಲ ನಗರದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಸ್ಥಗಿತಗೊಂಡಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ “ನೀರಿ’ ತಂಡದ ಸದಸ್ಯರು ಮಂಗಳೂರಿಗೆ ಆಗಮಿಸಿ, ಸ್ಮಾರ್ಟ್‌ಸಿಟಿ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿ ವೇಳೆ ಯಾವೆಲ್ಲಾ ನಿಯಮ ಪಾಲನೆ ಮಾಡಬೇಕು ಎಂಬ ವರದಿಯನ್ನು ನ್ಯಾಯಾಲಯಕ್ಕೆ ನೀಡಿದ್ದರು. ಅದರಂತೆ ನಿಯಮ ಪಾಲನೆಗೆ ಒತ್ತು ನೀಡಿ ಸ್ಮಾರ್ಟ್‌ ಸಿಟಿ ಲಿ.ನಿಂದ ದೃಢೀಕರಣ ಪತ್ರದೊಂದಿಗೆ ಕಾಮಗಾರಿ ಆರಂಭಕ್ಕೆ ನ್ಯಾಯಾಲಯ ಸೂಚನೆ ನೀಡಿತ್ತು.

ಸದ್ಯ ಸ್ಮಾರ್ಟ್‌ಸಿಟಿಯ ಸಣ್ಣ ಮಟ್ಟದ ಕಾಮಗಾರಿಗಳು ಮಾತ್ರ ಆರಂಭವಾಗಿದೆ. ಅಂದರೆ, ಕಟ್ಟಡಗಳ ಪ್ಲಾಸ್ಟರಿಂಗ್‌, ಬ್ಲಾಕ್‌ ಕಾಮಗಾರಿಗಳು ನಡೆಯುತ್ತಿದೆ. ನಗರದ ಇನ್ನಿತರ ಕಡೆಗಳಲ್ಲಿ ಸಿಮೆಂಟ್‌-ಮರಳು ಉಪಯೋಗಿತ ಕಾಮಗಾರಿಗಳಷ್ಟೇ ನಡೆಯುತ್ತಿದೆ. ಕೆಲವೆಡೆ ಯುಜಿಡಿ ಕಾಮಗಾರಿಯೂ ಪುನರಾರಂಭವಾಗಿದೆ. ಆದರೆ, ಕಾಂಕ್ರೀಟ್‌ ಕಾಮಗಾರಿ ಸಹಿತ ನಗರದಲ್ಲಿನ ಯಾವುದೇ ರಸ್ತೆ ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ.
ಹೈಕೋರ್ಟ್‌ ಸೂಚನೆ ಹಿನ್ನೆಲೆಯಲ್ಲಿ ಇನ್ನು ಮುಂದೆ ನಗರದಲ್ಲಿ ನಡೆಯುವ ಯಾವುದೇ ಸ್ಮಾರ್ಟ್‌ಸಿಟಿ ಕಾಮಗಾರಿಯಲ್ಲಿ ನಿಯಮ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಲು ನಿಗಮ ತೀರ್ಮಾನಿಸಿದೆ. ಒಂದು ವೇಳೆ, ಕಾಮಗಾರಿ ಸ್ಥಳದಲ್ಲಿ ತ್ಯಾಜ್ಯಗಳ ನಿರ್ವಹಣೆ ಸಹಿತ ಸೂಕ್ತ ನಿರ್ದೇಶನ- ಮಾರ್ಗಸೂಚಿಗಳು ಪಾಲನೆಯಾಗದಿದ್ದರೆ ಅದಕ್ಕೆ ಗುತ್ತಿಗೆದಾರರೇ ಜವಾಬ್ದಾರರು. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ವೇಳೆ “ನಿಯಮ ಪಾಲನೆ ಮಾಡುತ್ತೇವೆ’ ಎನ್ನುವ ದೃಢೀಕರಣ ಪತ್ರವನ್ನು ಗುತ್ತಿಗೆದಾರರು ಪ್ರತೀ ವಾರ ಸ್ಮಾರ್ಟ್‌ಸಿಟಿಗೆ ನೀಡಬೇಕು. ಇನ್ನೊಂದೆಡೆ, ನಿಯಮ ಸರಿಯಾಗಿ ಪಾಲನೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಕೂಡ ಪ್ರತೀ ದಿನ ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇನ್ನೇನು ಕೆಲ ದಿನಗಳಲ್ಲಿಯೇ ಪೂರ್ವ ಮುಂಗಾರು ಮಳೆ ಆರಂಭವಾಗಲಿದ್ದು, ಅದಕ್ಕೂ ಮುನ್ನ ಕಾಮಗಾರಿಗೆ ಮತ್ತಷ್ಟು ವೇಗ ನೀಡಬೇಕಾದ ಅನಿವಾರ್ಯವಿದೆ. ಆದರೆ, ಜಿಲ್ಲೆಯಲ್ಲಿ ಕಪ್ಪು ಕಲ್ಲು ಕೋರೆ ಸ್ಥಗಿತಗೊಂಡಿರುವ ಕಾರಣ ಸ್ಮಾರ್ಟ್‌ಸಿಟಿ ಕಾಮಗಾರಿ ನಡೆಸಲು ಇದೀಗ ಜಲ್ಲಿಯ ಕೊರತೆ ಎದುರಾಗಿದೆ. ಸದ್ಯ ನಗರದಲ್ಲಿ ನಡೆಯಲಿರುವ ಬಹುತೇಕ ಎಲ್ಲ ಕಾಮಗಾರಿಗಳಿಗೂ ಜಲ್ಲಿಯ ಅವಶ್ಯವಿರುವ ಹಿನ್ನೆಲೆಯಲ್ಲಿ ಕಾಮಗಾರಿ ನಡೆಸಲು ಹೊಸ ತಲೆನೋವು ಶುರುವಾದಂತಾಗಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿ ವೇಳೆ ಉತ್ಪತ್ತಿಯಾಗುವ ಕಟ್ಟಡ ನಿರ್ಮಾಣ ತ್ಯಾಜ್ಯಗಳ ವಿಲೇವಾರಿ ಮಾಡಲು ಮಂಗಳೂರು ಮಹಾನಗರ ಪಾಲಿಕೆ ಈಗಾಗಲೇ ಕುಂಜತ್ತಬೈಲ್‌ ಮತ್ತು ಪಚ್ಚನಾಡಿಯಲ್ಲಿ ಜಾಗ ಗುರುತಿಸಿದೆ. ಇದರಲ್ಲಿ ಈಗಾಗಲೇ ಪಚ್ಚನಾಡಿ ಪ್ರದೇಶ ಅಂತಿಮಗೊಂಡಿದೆ.

ನಿಯಮ ಪಾಲನೆ
ಮಂಗಳೂರಿನಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳು ಆರಂಭವಾಗಿವೆ. ಆದರೆ, ನಗರದಲ್ಲಿ ಕಾಮಗಾರಿಗೆ ಜಲ್ಲಿಯ ಸಮಸ್ಯೆ ಇದ್ದು, ಈಗಾಗಲೇ ಸಂಗ್ರಹ ಮಾಡಿದ ಜಲ್ಲಿ ಬಳಸಲಾಗುತ್ತಿದೆ. ಕಾಮಗಾರಿ ವೇಳೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತೇವೆ.
-ಪ್ರಶಾಂತ್‌ ಕುಮಾರ್‌ ಮಿಶ್ರಾ, ಸ್ಮಾರ್ಟ್‌ ಸಿಟಿ ಲಿ. ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.