ದಾವಣಗೆರೆ: ಭೀಕರ ಸರಣಿ ಅಪಘಾತ; 3 ಮಹಿಳೆಯರು, ಚಾಲಕ ಬಲಿ
Team Udayavani, Dec 17, 2021, 3:01 PM IST
ದಾವಣಗೆರೆ: ನ್ಯಾಮತಿ ತಾಲೂಕಿನ ಸವಳಂಗ ಸಮೀಪದಲ್ಲಿ ಹೆದ್ದಾರಿಯಲ್ಲಿ ಕಾರು, ಬಸ್ ಹಾಗೂ ಕ್ಯಾಂಟರ್ ನಡುವೆ ಶುಕ್ರವಾರ ಸರಣಿ ಅಪಘಾತ ಸಂಭವಿಸಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿಯಾಗಿದ್ದು, ಸ್ವಿಫ್ಟ್ ಕಾರ್ ನಲ್ಲಿದ್ದ 3 ಜನ ಮಹಿಳೆಯರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು ಒಬ್ಬರಿಗೆ ಗಂಭೀರ ಗಾಯವಾಗಿದೆ. ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಕಲ್ಲಾಪುರ- ಹೊಸಜೋಗ ಗ್ರಾಮದ ಶಿವಮೊಗ್ಗ- ಶಿಕಾರಿಪುರ- ಹಾನಗಲ್ ಹೆದ್ದಾರಿ ನಡುವೆ ಈ ಅಪಘಾತ ಸಂಭವಿಸಿದೆ.
ಕಾರು ಚಾಲಕ ಸುನೀಲ್ (30), ದಾಕ್ಷಾಯಿಣಮ್ಮ (40) ಸುಮಾ (45) ಶಾರದಮ್ಮ (65) ಮೃತ ದುರ್ದೈವಿಗಳು.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಯಡೇಹಳ್ಳಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಆಶಾ ಎಂಬ ಮಹಿಳೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.
ಬಸ್ ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಗುದ್ದಿದ ಕಾರಣ ಅವಘಡ ಸಂಭವಿಸಿದ್ದು,ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬಸ್ ನಲ್ಲಿದ್ದ 5ಕ್ಕೂ ಹೆಚ್ಚು ಗಾಯಾಳುಗಳು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ಮೃತ ಮಹಿಳೆಯರು ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದರು ಎಂದು ತಿಳಿದು ಬಂದಿದೆ. ಅಪಘಾತ ಸ್ಥಳಕ್ಕೆ ನ್ಯಾಮತಿ ಸಿಪಿಐ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅಂಬ್ಯೂಲೆನ್ಸ್ ಮೂಲಕ ರವಾನಿಸಲಾಗಿದೆ. ನ್ಯಾಮತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ