ಕೋವಿಡ್ ವ್ಯಾಕ್ಸಿನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ : ಮಮತಾ ಬ್ಯಾನರ್ಜಿ ವ್ಯಂಗ್ಯ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
Team Udayavani, Mar 8, 2021, 7:58 PM IST
ಕೊಲ್ಕತ್ತಾ : ಪಶ್ಚಿಮ ಬಂಗಳ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಭಾರೀ ಹಣಾಹಣಿ ನಡೆದಿದೆ. ನಿನ್ನೆ(ಭಾನುವಾರ) ಎರಡೂ ಪಕ್ಷದ ನಾಯಕರು ರ್ಯಾಲಿ ನಡೆಸಿದ್ದು ಪ್ರಚಾರ ಮಾಡಿದ್ದಾರೆ.
ಇಂದು ಮಹಿಳಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮೋದಿ ಸರ್ಕಾರವನ್ನು ಟೀಕಿಸಿರುವ ಮಮತಾ ಬ್ಯಾನರ್ಜಿ, ಬಂಗಾಳದ 294 ಕ್ಷೇತ್ರದಲ್ಲಿಯೂ ಟಿಎಂಸಿ ಮತ್ತು ಬಿಜೆಪಿ ನಡುವೆ ಪೈಪೋಟಿ ನಡೆಯಲಿದೆ ಎಂದಿದ್ದಾರೆ.
ಇದೇ ರ್ಯಾಲಿಯಲ್ಲಿ ಮೋದಿಯನ್ನ ಕೆಣಕಿರುವ ಮಮತಾ, ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಮೇಲೆ ಮೋದಿ ಫೋಟೋ ಇರುವ ಬಗ್ಗೆ ಮಾತನಾಡಿದ್ದಾರೆ. ದೇಶಕ್ಕೆ ಮೋದಿ ಹೆಸರನ್ನು ಇಡುವ ಕಾಲ ದೂರದಲ್ಲಿ ಇಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ.
ಇತ್ತೀಚೆಗೆ ಗುಜರಾತಿನ ಒಂದು ಸ್ಟೇಡಿಯಂಗೆ ನರೇಂದ್ರ ಮೋದಿ ಸ್ಟೇಡಿಯಂ ಎಂದು ನಾಮಕರಣ ಮಾಡಲಾಗಿದೆ. ಇದೀಗ ಕೋವಿಡ್ ಸರ್ಟಿಫಿಕೇಟ್ ಮೇಲೆ ಮೋದಿಯ ಭಾವಚಿತ್ರವಿದೆ. ಇದನ್ನು ವ್ಯಂಗ್ಯ ಮಾಡಿರುವ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೇಶಕ್ಕೆ ಅವರೆಸರಿಡುವ ಕಾಲ ಬಹಳ ದೂರದಲ್ಲಿ ಇಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದಿಯ ‘ಅನ್ನಿಯನ್’ ಗೆ ರಣವೀರ್ ಸಿಂಗ್ ಹೀರೋ: ಶಂಕರ್ ಆಕ್ಷನ್ ಕಟ್
‘ಎಂಜಾಯ್ ಎಂಜಾಮಿ ಕುಕ್ಕೂ ಕುಕ್ಕೂ..’ : ವೈರಲ್ ಹಾಡಿನ ಹಿಂದಿರುವುದು ದುಡಿದು ದಣಿದವರ ಬದುಕು
ಕಾಂಗ್ರೆಸ್ ನಿಂದ ಹೊಸ ಚಾನೆಲ್ “ಐಎನ್ ಸಿ ಟಿವಿ” ಶುರು
ಸವಣೂರು ಗೇಟ್ ಬಳಿ ರೈಲುಹಳಿಯಲ್ಲಿ ಯುವಕನ ಶವ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆ!
ಡೆಲ್ಲಿ ಕ್ಯಾಪಿಟಲ್ಸ್ ವೇಗಿಗೆ ಕೋವಿಡ್-19 ಸೋಂಕು ದೃಢ!