ಹೆದ್ದಾರಿಗಳ ದುರಸ್ತಿ: ಅಧಿಕಾರಿಗಳಿಗೆ ಸಚಿವ ಸಿ.ಸಿ.ಪಾಟೀಲ್ ಗಡುವು

Team Udayavani, Oct 11, 2021, 5:35 PM IST

ccp

ಬೆಂಗಳೂರು: ರಾಜ್ಯದ ಹಲವೆಡೆ ರಾಷ್ಟ್ರೀಯ ಹೆದ್ದಾರಿಗಳು ಹದಗೆಟ್ಟಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಬಗ್ಗೆ ಕಾಲಮಿತಿಯೊಳಗೆ ತುರ್ತಾಗಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರು ರಾಷ್ಟ್ರೀಯ ಹೆದ್ದಾರಿ ನಿರ್ವಹಣಾಧಿಕಾರಿಗಳಿಗೆ ಸೋಮವಾರ ಗಡುವು ವಿಧಿಸಿದ್ದಾರೆ.

ವಿಕಾಸಸೌಧದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಕೈಗೊಂಡಿರುವ ಕೆಲಸ ಕಾರ್ಯಗಳ ಪ್ರಗತಿಯನ್ನು ಪರಿಶೀಲಿಸಿದ ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಈ ಬಾರಿ ಮಳೆಯ ಪರಿಣಾಮದಿಂದಾಗಿ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯೂ ಸೇರಿದಂತೆ ಹಲವು ಹೆದ್ದಾರಿಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಆದ್ದರಿಂದ ಹೆದ್ದಾರಿ ನಿರ್ವಹಿಸುವ ಅಧಿಕಾರಿಗಳು ತಕ್ಷಣ ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಹೆದ್ದಾರಿಯ ಗುಣಮಟ್ಟವನ್ನು ಉತ್ತಮವಾಗಿ ಕಾಯ್ದುಕೊಂಡು ಹೋಗಲು ಸೂಕ್ತ ಕ್ರಮ ಕೈಗೊಳ್ಳಬೇಕು, ಇದಕ್ಕೆ ಅಗತ್ಯ ಸಹಕಾರವನ್ನು ರಾಜ್ಯ ಲೋಕೋಪಯೋಗಿ ಇಲಾಖೆಯಿಂದ ನೀಡಲಾಗುವುದು ಎಂದುರು.

ಅನೇಕ ಕಡೆ ಅವೈಜ್ಞಾನಿಕ ರಸ್ತೆ ಉಬ್ಬುಗಳ (Road humps)ನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮತ್ತು ಇತರ ರಸ್ತೆಗಳಲ್ಲಿ ನಿರ್ಮಿಸಿರುವುದರಿಂದ ಅಪಘಾತಗಳ ಸಂಖ್ಯೆ ಕಡಿಮೆಯಾಗುವ ಬದಲು ಹೆಚ್ಚಾಗುತ್ತಿದೆ ಮತ್ತು ವಾಹನಗಳ ಸರಾಗ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಬಗ್ಗೆ ಜನಪ್ರತಿನಿಧಿಗಳಿಂದ ವ್ಯಾಪಕವಾಗಿ ದೂರುಗಳು ವ್ಯಕ್ತವಾಗಿವೆ. ಇವುಗಳನ್ನು ಪರಿಶೀಲಿಸಿ ಮತ್ತು ಸ್ಥಳೀಯರನ್ನು ಮನವೊಲಿಸಿ ಅವೈಜ್ಞಾನಿಕ ರೋಡ್ ಹಂಪ್ ಗಳನ್ನು ತೆಗೆದು ಹಾಕುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ರಾಜ್ಯದ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿವೆ. ಇಂತಹ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು, ಒಂದು ವೇಳೆ ಗುತ್ತಿಗೆದಾರರಿಂದ ವಿಳಂಬವಾದಲ್ಲಿ ಅವರಿಗೆ ನೋಟೀಸ್ ನೀಡಿ, ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಅವರು ಸಲಹೆ ನೀಡಿದರು.

ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಿಸುವ ಸಂಸ್ಥೆಗಳು ರಸ್ತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ನಿರ್ಲಕ್ಷ್ಯ ತೋರುತ್ತಿವೆ ಮತ್ತು ವಾಹನ ಸವಾರರಿಗೆ ಕಿರುಕುಳ ನೀಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ತಿಳಿಸಿದ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಮುಂದೆ ಕ್ರಮ ಕೈಗೊಳ್ಳಬೇಕೆಂದು ಆದೇಶಿಸಿದರು.
ಹಾಸನ-ಮಂಗಳೂರು, ಬೆಂಗಳೂರು-ಬಿ.ಆರ್.ಹಿಲ್ಸ್, ಬೆಂಗಳೂರು-ಕನಕಪುರ ಹೆದ್ದಾರಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂಬ ಬಗ್ಗೆ ಸಚಿವರು ಅತೃಪ್ತಿ ವ್ಯಕ್ತಪಡಿಸಿ, ಈ ಕಾಮಗಾರಿಗಳಿಗೆ ಇರುವ ಅಡೆತಡೆಗಳನ್ನು ನಿವಾರಿಸಿ ಆದಷ್ಟು ಶೀಘ್ರವಾಗಿ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂದು ಸೂಚಿಸಿದರು.

ಹೆದ್ದಾರಿ ದುರಸ್ತಿ ಕಾರ್ಯವೊಂದೇ ಮುಖ್ಯವಲ್ಲ, ಹೆದ್ದಾರಿ ಅಕ್ಕ-ಪಕ್ಕದ ಹಳ್ಳಿಗಳಿಗೆ ಮತ್ತು ಪೇಟೆ-ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಹೆದ್ದಾರಿ ಪ್ರಾಧಿಕಾರ ಮತ್ತು ಲೋಕೋಪಯೋಗಿ ಇಲಾಖೆಯು ಪರಸ್ಪರ ಸಹಕಾರದಿಂದ ಕೆಲಸ ಮಾಡಬೇಕು. ವರ್ತುಲ ರಸ್ತೆಗಳ ಕಾಮಗಾರಿಗಳನ್ನು ವಿಳಂಬ ಮಾಡಿದರೆ ಆಯಾ ಪ್ರದೇಶಗಳ ನಗರಗಳ ಒಳಭಾಗದಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿ ಅಪಘಾತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಕಾರ್ಯದರ್ಶಿ ಕೃಷ್ಣಾರೆಡ್ಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು ಹಾಗೂ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.