ಪ್ರಕರಣ ಇತ್ಯರ್ಥಕ್ಕೆ ವಿಕೇಂದ್ರೀಕರಣ ವ್ಯವಸ್ಥೆ: ಸಚಿವ ಆರ್‌. ಅಶೋಕ್

ಅನ್ಯ ಅಧಿಕಾರಿಗಳಿಗೆ ಡಿಸಿ, ಎಸಿ ಕೋರ್ಟ್‌ಗಳ ಕೇಸು ಇತ್ಯರ್ಥ ಅಧಿಕಾರ

Team Udayavani, Nov 1, 2022, 7:10 AM IST

ಪ್ರಕರಣ ಇತ್ಯರ್ಥಕ್ಕೆ ವಿಕೇಂದ್ರೀಕರಣ ವ್ಯವಸ್ಥೆ: ಸಚಿವ ಆರ್‌. ಅಶೋಕ್

ಬೆಂಗಳೂರು: ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳ ಶೀಘ್ರ ಹಾಗೂ ಕಾಲಮಿತಿಯ ಇತ್ಯರ್ಥಕ್ಕೆ ವಿಕೇಂದ್ರೀಕರಣ ವ್ಯವಸ್ಥೆ ರೂಪಿಸಿ, ಅನ್ಯ ಅಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟು 93,834 ಪ್ರಕರಣಗಳು ಬಾಕಿ ಇದ್ದು, ಕಾಲಮಿತಿಯ ಇತ್ಯರ್ಥಕ್ಕಾಗಿ ಅಧಿಕಾರಿಗಳಿಗೆ ಮ್ಯಾಜಿಸ್ಟೀರಿಯಲ್‌ ಅಧಿಕಾರ ನೀಡಲಾಗುವುದು ಎಂದು ತಿಳಿಸಿದರು.

ಕೊರೊನಾ ಸಂದರ್ಭದಲ್ಲಿ ಈ ನ್ಯಾಯಾಲಯಗಳಲ್ಲಿ ಪ್ರಕರಣಗಳ ವಿಚಾರಣೆ ಸ್ಥಗಿತಗೊಂಡಿದ್ದರಿಂದ ಇತ್ಯರ್ಥಕ್ಕೆ ಬಾಕಿಯಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳ ಪೈಕಿ ಆಯ್ದ ತಾಲ್ಲೂಕುಗಳ ಪ್ರಕರಣಗಳನ್ನು ಹೆಚ್ಚುವರಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿನ ಪ್ರಕರಣಗಳಲ್ಲಿ ಆಯ್ದ ತಾಲ್ಲೂಕುಗಳ ಪ್ರಕರಣಗಳನ್ನು ಉಪವಿಭಾಗಾಧಿಕಾರಿ ಶ್ರೇಣಿಯ ವಿಶೇಷ ಭೂಸ್ವಾಧೀನಾಧಿಕಾರಿ, ತಹಸೀಲ್ದಾರ್‌ ನ್ಯಾಯಾಲಯದ ಪ್ರಕರಣಗಳ ಪೈಕಿ ಆಯ್ದ ಹೋಬಳಿಗಳ ಪ್ರಕರಣಗಳನ್ನು ಉಪ ತಹಸೀಲ್ದಾರ್‌ಗಳು ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

ಈ ಕುರಿತು 20 ದಿನಗಳಲ್ಲಿ ಆದೇಶ ಹೊರಡಿಸಲಾಗುವುದು. ಪ್ರಕರಣಗಳ ಇತ್ಯರ್ಥಕ್ಕಾಗಿ ಮಾಸಿಕವಾರು ವಿಚಾರಣೆ, ಇತ್ಯರ್ಥಕ್ಕೆ ಗುರಿ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

93,834 ಪ್ರಕರಣ:
ಜಿಲ್ಲಾಧಿಕಾರಿಗಳ ನ್ಯಾಯಾಲಯಗಳಲ್ಲಿ 15,881, ಉಪವಿಭಾಗಾಧಿಕಾರಿಗಳ ನ್ಯಾಯಾಲಯಗಳಲ್ಲಿ 62,100 ಹಾಗೂ ತಹಸೀಲ್ದಾರ್‌ ನ್ಯಾಯಾಲಯಗಳಲ್ಲಿ 15,853 ಪ್ರಕರಣಗಳು ಬಾಕಿ ಇವೆ ಎಂದು ಹೇಳಿದರು.

ಹಕ್ಕುಪತ್ರ ವಿತರಣೆ:
ಇದೇ ವೇಳೆ, ರಾಜ್ಯಾದ್ಯಂತ ಹಾಡಿ, ಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ ಎಲ್ಲ ನಾಗರಿಕ ಸೌಲಭ್ಯ ಒದಗಿಸುವ ಕಾರ್ಯಕ್ರಮಗಳನ್ನು ಯಾದಗಿರಿಯಲ್ಲಿ ಮಾಡಲು ತೀರ್ಮಾನಿಸಲಾಗಿದೆ. ಐದು ಜಿಲ್ಲೆಗಳ ಒಟ್ಟು 60,000 ಕುಟುಂಬಗಳಿಗೆ ಅಂದು ಏಕಕಾಲಕ್ಕೆ ಹಕ್ಕುಪತ್ರ ವಿತರಿಸಲಾಗುವುದು. ಕುಟುಂಬಗಳು ನೆಲೆಸಿರುವ ವಿಸ್ತೀರ್ಣದ ಮನೆಗಳನ್ನು ಸಂಬಂಧಪಟ್ಟವರ ಹೆಸರಿಗೆ ನೋಂದಣಿ ಮಾಡಿಕೊಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.