ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ನಾಯಕ
Team Udayavani, Mar 30, 2021, 11:15 PM IST
ಹೊಸದಿಲ್ಲಿ : ಶ್ರೇಯಸ್ ಅಯ್ಯರ್ ಅವರ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪಿಂಗ್ ಬ್ಯಾಟ್ಸ್ಮನ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಇದನ್ನು ಪ್ರಕಟಿಸಿತು.
23 ವರ್ಷದ ಪಂತ್ ಐಪಿಎಲ್ನಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸುತ್ತಿರುವುದು ಇದೇ ಮೊದಲು. ಇದಕ್ಕೂ ಮೊದಲು ಅವರು ರಣಜಿ ಟ್ರೋಫಿ ಮತ್ತು ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ದಿಲ್ಲಿ ತಂಡದ ನೇತೃತ್ವ ವಹಿಸಿದ್ದರು.
“ನಾನು ದಿಲ್ಲಿಯಲ್ಲೇ ಕ್ರಿಕೆಟ್ನಲ್ಲಿ ಮೇಲೇರುತ್ತ ಬಂದವನು. 6 ವರ್ಷಗಳ ಹಿಂದೆ ಐಪಿಎಲ್ ಪಯಣ ಆರಂಭಿಸಿದೆ. ಈಗ ತಂಡದ ನಾಯಕನಾಗಿ ಆಯ್ಕೆಯಾಗಿದ್ದೇನೆ. ನನ್ನ ಕನಸೊಂದು ನನಸಾಗಿದೆ’ ಎಂಬುದಾಗಿ ಪಂತ್ ಪ್ರತಿಕ್ರಿಯಿಸಿದ್ದಾರೆ. ಡೆಲ್ಲಿ ತಂಡದ ನಾಯಕತ್ವಕ್ಕಾಗಿ ಸ್ಮಿತ್, ಆರ್. ಅಶ್ವಿನ್, ರಹಾನೆ ಹೆಸರು ಕೂಡ ಕೇಳಿಬಂದಿತ್ತು.
ಇದನ್ನೂ ಓದಿ :ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಹಡಗಿನ ಸಮಸ್ಯೆ ನಿವಾರಣೆ : ತನಿಖೆ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್