
ವನಿತಾ ಪ್ರೀಮಿಯರ್ ಲೀಗ್ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್ ಪಾಲು
Team Udayavani, Mar 26, 2023, 10:50 PM IST

ಮುಂಬಯಿ: ಭಾರತದ ಮಹಿಳಾ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದ ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿ ಹೊರ ಹೊಮ್ಮಿದೆ.
ಬ್ರೆಬೋರ್ನ್ ಸ್ಟೇಡಿಯಂನಲ್ಲಿ ರವಿವಾರ ರಾತ್ರಿ ನಡೆದ ರೋಚಕ ಹಣಾಹಣಿಯಲ್ಲಿ ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಎದುರು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ 7 ವಿಕೆಟ್ ಅಂತರದ ಗೆಲುವು ಸಾಧಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಡೆಲ್ಲಿ ಕ್ಯಾಪಿಟಲ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 12 ರನ್ ಆಗುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಹೊಡೆದ ಅನುಭವಿಸಿತು. 35 ರನ್ ಆಗುವಷ್ಟರಲ್ಲಿ 3 ನೇ ವಿಕೆಟ್ ಕಳೆದು ಕೊಂಡಿತು. ನಾಯಕಿ ಮೆಗ್ ಲ್ಯಾನಿಂಗ್ 35 ರನ್ ಗಳಿಸಿ ಔಟಾದರು. ಶಫಾಲಿ ವರ್ಮಾ 11 ರನ್ ಗಳಿಸಿ ಔಟಾದರು. ಆಲಿಸ್ ಕ್ಯಾಪ್ಸೆ 0, ರೋಡ್ರಿಗಸ್ 9, ಮಾರಿಜಾನ್ನೆ ಕಪ್ 18, ಜೋನಾಸೆನ್ 2, ಅರುಂಧತಿ ರೆಡ್ಡಿ 0 ರನ್ ಗಳಿಸಿ ನಿರ್ಗಮಿಸಿದರು. ಆ ಬಳಿಕ ಬಂದ ಶಿಖಾ ಪಾಂಡೆ ಔಟಾಗದೆ 17 ಎಸೆತಗಳಲ್ಲಿ 27 ರನ್ ಗಳಿಸಿದರು. 79 ಕ್ಕೆ 9 ವಿಕೆಟ್ ಕಳೆದುಕೊಂಡು ತಂಡ ನೂರು ರನ್ ದಾಟುವುದು ಕಷ್ಟ ಎನ್ನುವ ಸ್ಥಿತಿಯಲ್ಲಿದ್ದ ವೇಳೆ ಶಿಖಾ ಅವರಿಗೆ ಸಾಥ್ ನೀಡಿದ ರಾಧಾ ಯಾದವ್ ಔಟಾಗದೆ 12 ಎಸೆತಗಳಳ್ಳಿ 27 ರನ್ ಕೊಡುಗೆ ಸಲ್ಲಿಸಿ ತಂಡದ ಬಾಲದಲ್ಲೂ ಬಲವಿದೆ ಅನ್ನುವುದನ್ನು ತೋರಿಸಿಕೊಟ್ಟರು 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಕಲೆ ಹಾಕಿತು. ಬಿಗಿ ಬೌಲಿಂಗ್ ದಾಳಿ ನಡೆಸಿದ ಹೇಲಿ ಮ್ಯಾಥ್ಯೂಸ್ ಮತ್ತು 3 ವಿಕೆಟ್ ಕಬಳಿಸಿದರು. ದುಬಾರಿಯಾದರೂ ವಾಂಗ್ 3 ವಿಕೆಟ್ ಪಡೆದರು. ಮೆಲಿ ಕೆರ್ 2 ವಿಕೆಟ್ ಪಡೆದರು.
ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 23 ರನ್ ಆಗುವ ವೇಳೆ 2 ವಿಕೆಟ್ ಗಳನ್ನ ಕಳೆದುಕೊಂಡಿತು. ಹೇಲಿ ಮ್ಯಾಥ್ಯೂಸ್ 13, ಯಾಸ್ತಿಕಾ ಭಾಟಿಯಾ 4 ರನ್ ಗಳಿಸಿ ಔಟಾದರು. ಆ ಬಳಿಕ ನ್ಯಾಟ್ ಸ್ಕಿವರ್-ಬ್ರಂಟ್ ಸಮಯೋಚಿತ ಬ್ಯಾಟಿಂಗ್ ನಡೆಸಿ ಆಕರ್ಷಕ ಅರ್ಧ ಶತಕ ಸಿಡಿಸಿದರು. ಅಜೇಯ 60 ರನ್ ಗಳು ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿತು. ,ಹರ್ಮನ್‌ಪ್ರೀತ್ ಕೌರ್ 37 ರನ್ ಗಳಿಸಿದ್ದ ವೇಳೆ ರನ್ ಔಟಾದರು. ಮೆಲಿ ಕೆರ್ ಔಟಾಗದೆ 14 ರನ್ ಗಳಿಸಿದರು. 19.3 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ ಜಯಭೇರಿ ಬಾರಿಸಿತು.
ಪಂದ್ಯ ಶ್ರೇಷ್ಠ ಆಟಗಾರ್ತಿಯಾಗಿ ನ್ಯಾಟ್ ಸ್ಕಿವರ್-ಬ್ರಂಟ್, ಸರಣಿ ಶ್ರೇಷ್ಠ ಆಟಗಾರ್ತಿಯಾಗಿ ವೆಸ್ಟ್ ಇಂಡೀಸ್ ನ ಹೇಲಿ ಮ್ಯಾಥ್ಯೂಸ್ ( ಮುಂಬೈ ಇಂಡಿಯನ್ಸ್) ಭಾಜನರಾದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್-ಹದಾದ್ ಮಯಾ ಮುಖಾಮುಖಿ

WTC Final;ಹೇಗಿದ್ದೀತು ಓವಲ್ ಟ್ರ್ಯಾಕ್? ಟೆಸ್ಟ್ ಫೈನಲ್ ಗೂ ಮುನ್ನ ಒಂದು ಕುತೂಹಲ

Singapore Open Super 750; ಸಿಂಗಾಪುರದಲ್ಲಿ ಮಿಂಚಬೇಕಿದೆ ಸಿಂಧು

Bangladesh ಟೆಸ್ಟ್ ತಂಡದ ನೂತನ ನಾಯಕರಾಗಿ ಲಿಟನ್ ದಾಸ್ ನೇಮಕ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Dandeli : ದ್ವಿ ಚಕ್ರ ವಾಹನ ಸ್ಕಿಡ್ ಆಗಿ ಓರ್ವ ಗಂಭೀರ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ