
ಸಾರ್ವಜನಿಕ ಗಣೇಶೋತ್ಸವ ಆಚರಣೆ, ಮೆರವಣಿಗೆಗೆ ಅವಕಾಶ ಇಲ್ಲ: ದೆಹಲಿ ಸರ್ಕಾರ
ಸೆಪ್ಟೆಂಬರ್ 10ರಂದು ಗಣೇಶೋತ್ಸವ ಸಂದರ್ಭದಲ್ಲಿ ಜನರು ಮನೆಯಲ್ಲಿಯೇ ಹಬ್ಬವನ್ನು ಆಚರಿಸಿ
Team Udayavani, Sep 8, 2021, 1:49 PM IST

ನವದೆಹಲಿ: ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ದೆಹಲಿ ಸರ್ಕಾರ ಬುಧವಾರ (ಸೆಪ್ಟೆಂಬರ್ 08) ತಿಳಿಸಿದೆ.
ಇದನ್ನೂ ಓದಿ:ರಚಿತಾ ರಾಮ್ ಥ್ರಿಲ್ ಆಗೋದಕ್ಕೆ ಸೋದರಿ ನಿತ್ಯಾ ರಾಮ್ ಕಾರಣವಂತೆ!
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ 19 ಸೋಂಕು ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ದೆಹಲಿಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ) ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 10ರಂದು ಗಣೇಶೋತ್ಸವ ಸಂದರ್ಭದಲ್ಲಿ ಜನರು ಮನೆಯಲ್ಲಿಯೇ ಹಬ್ಬವನ್ನು ಆಚರಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ. ತಾತ್ಕಾಲಿಕ ಟೆಂಟ್ ಅಥವಾ ಪೆಂಡಾಲ್ ಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸದಂತೆ ಜಿಲ್ಲಾಧಿಕಾರಿಗಳು ಹಾಗೂ ಡೆಪ್ಯುಟಿ ಕಮಿಷನರ್ಸ್ ಗಳು ನಿಗಾ ವಹಿಸಬೇಕೆಂದು ಡಿಡಿಎಂಎ ಬಿಡುಗಡೆಗೊಳಿಸಿರುವ ಆದೇಶದಲ್ಲಿ ತಿಳಿಸಿದೆ.
ಯಾವುದೇ ಧಾರ್ಮಿಕ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡುವಂತಿಲ್ಲ. ಯಾವುದೇ ರೀತಿಯ ಮೆರವಣಿಗೆಗೆ ಅನುಮತಿ ಕೂಡ ನೀಡಲಾಗುವುದಿಲ್ಲ ಎಂದು ಹೇಳಿದೆ. ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಈ ಬಾರಿಯೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವ ನಡೆಸಲು ಅನುಮತಿ ನೀಡದಿರಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಡಿಡಿಎಂಎ ಆದೇಶದಲ್ಲಿ ಉಲ್ಲೇಖಿಸಿದೆ.
ಕರ್ನಾಟಕದಲ್ಲಿ ಷರತ್ತಿನ ಗಣೇಶೋತ್ಸವ ನಡೆಸಲು ಸರ್ಕಾರ ಅನುಮತಿ ನೀಡಿದ್ದು, ಮೆರವಣಿಗೆ, ಮನೋರಂಜನಾ ಕಾರ್ಯಕ್ರಮಕ್ಕೆ ನಿಷೇಧ ಹೇರಿದೆ. ಕೋವಿಡ್ ಹಿನ್ನೆಲೆಯಲ್ಲಿ ನಿಯಮ ಪಾಲಿಸುವಂತೆ ಕರ್ನಾಟಕ ಸರ್ಕಾರ ಸೂಚನೆ ನೀಡಿದೆ. ಗಣೇಶೋತ್ಸವ ಸಂದರ್ಭದಲ್ಲಿ 20 ಮಂದಿಗಿಂತ ಹೆಚ್ಚು ಜನರು ಗುಂಪುಗೂಡದಂತೆ ಹಾಗೂ ಗಣೇಶೋತ್ಸವ ಆಯೋಜಕರು ಕೋವಿಡ್ ನೆಗೆಟಿವ್ ವರದಿ, ಲಸಿಕೆ ಪಡೆದಿರುವ ಪ್ರಮಾಣಪತ್ರ ಪಡೆದಿರಬೇಕು ಎಂಬ ಹಲವು ಷರತ್ತುಗಳೊಂದಿಗೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Sanatana: ಸನಾತನ ಧರ್ಮದ ನಿರ್ಮೂಲನೆ.. ಪರೋಕ್ಷವಾಗಿ ಉದಯನಿಧಿ ಬೆಂಬಲಿಸಿದ ಕಮಲ್ ಹಾಸನ್

Modi Multiplex: ನೂತನ ಸಂಸತ್ತನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎಂದ ಕಾಂಗ್ರೆಸ್ ಹಿರಿಯ ನಾಯಕ

Heavy Rain: ನಾಗ್ಪುರದಲ್ಲಿ ವರುಣನ ಅಬ್ಬರ: ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ಸೆ. 25ರಿಂದ ಕಡಿಮೆಯಾಗಲಿದೆ ಮಳೆ
MUST WATCH
ಹೊಸ ಸೇರ್ಪಡೆ

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Mangaluru: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ; ಕಾರ್ಯಾಲಯ ಉದ್ಘಾಟನೆ

Meramec Caverns:ನಿಸರ್ಗದ ರಚನೆಗೆ ಮನಸೋಲದವರ್ಯಾರು….ವಿಸ್ಮಯ, ಕೌತುಕಗಳ ಆಗರ ಗುಹೆಗಳು

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

News: ಲಾರಿ ಮಾಲೀಕರ ಸಮಸ್ಯೆ ಸಹಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ರಾಮಲಿಂಗ ರೆಡ್ಡಿಗೆ ಮನವಿ