ದೆಹಲಿ: ಕಾಳಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ, ಮೂವರು ಪೊಲೀಸರ ಬಲೆಗೆ
ಈ ಸಂದರ್ಭದಲ್ಲಿ ಸಿಲಿಂಡರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ.
Team Udayavani, Apr 27, 2021, 2:42 PM IST
ನವದೆಹಲಿ: ಆಕ್ಸಿಜನ್ ಸಿಲಿಂಡರ್ ಗಳನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ (ಏಪ್ರಿಲ್ 27) ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಪಂಪ್ ವೆಲ್ ಗೋಡೆ ಮೇಲೆ ಆಕ್ಷೇಪಾರ್ಹ ಬರಹ ಪ್ರಕರಣ : ಇಬ್ಬರು ಅಪ್ರಾಪ್ತ ಬಾಲಕರ ಬಂಧನ
ಸೋಮವಾರ(ಏ.26) ದೆಹಲಿಯ ಘಿತ್ರೋನಿ ಮೆಟ್ರೋ ನಿಲ್ದಾಣದ ಬಳಿ ಆಕ್ಸಿಜನ್ ಸಿಲಿಂಡರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿರುವ ವಿಷಯದ ಬಗ್ಗೆ ರಹಸ್ಯ ಮಾಹಿತಿಯೊಂದು ಲಭಿಸಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಖಚಿತವಾಗಿ ದೊರೆತ ಮಾಹಿತಿ ಆಧಾರದ ಮೇಲೆ ಕಾರ್ಯೋನ್ಮುಖರಾದ ಪೊಲೀಸರ ತಂಡ, ಘಿತ್ರೋನಿ ಮೆಟ್ರೋ ನಿಲ್ದಾಣದ ಸಮೀಪ ಮಾರುತಿ ಕಾರೊಂದನ್ನು ತಡೆದು ತಪಾಸಣೆ ನಡೆಸಿದ ವೇಳೆ ಎರಡು ಆಕ್ಸಿಜನ್ ಸಿಲಿಂಡರ್ ಪತ್ತೆಯಾಗಿತ್ತು. ಈ ಸಂದರ್ಭದಲ್ಲಿ ಸಿಲಿಂಡರ್ ಗಳನ್ನು ಅಧಿಕ ಬೆಲೆಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಿಗಳು ತಪ್ಪೊಪ್ಪಿಕೊಂಡಿರುವುದಾಗಿ ವರದಿ ವಿವರಿಸಿದೆ.
ಪೊಲೀಸರ ತಂಡ ಮತ್ತೂ ಇಬ್ಬರನ್ನು ಬಂಧಿಸಿದ್ದು, ಅವರಿಂದ ನಾಲ್ಕು ಆಕ್ಸಿಜನ್ ಸಿಲಿಂಡರ್ ಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದು, ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ