ಡಿ.ಜೆ. – ಕೆ.ಜೆ. ಹಳ್ಳಿ ಪ್ರಕರಣ: 29 ಮಂದಿ ಆರೋಪಿಗಳ ಬಿಡುಗಡೆ
Team Udayavani, Mar 6, 2021, 10:40 PM IST
ಬಳ್ಳಾರಿ: ಬೆಂಗಳೂರಿನ ಡಿ.ಜೆ. ಹಳ್ಳಿ ಹಾಗೂ ಕೆ.ಜೆ. ಹಳ್ಳಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ನಗರದ ಕೇಂದ್ರ ಕಾರಾಗೃಹದಲ್ಲಿದ್ದ 29 ಆರೋಪಿಗಳನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ.
ಈ ಪ್ರಕರಣದ ಒಟ್ಟು 81 ಆರೋಪಿಗಳನ್ನು ನಗರದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಬೆಂಗಳೂರು ಪೊಲೀಸರು 10ಕ್ಕೂ ಹೆಚ್ಚು ಆರೋಪಿಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದರು. ಜಾಮೀನು ದೊರೆತ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಪ್ರತಿದಿನ ಮೂರು, ನಾಲ್ಕು ಆರೋಪಿಗಳು ಬಿಡುಗಡೆಯಾಗುತ್ತಿದ್ದಾರೆ.
ಶುಕ್ರವಾರ ರಾತ್ರಿ ಒಂದೇ ದಿನ 29 ಆರೋಪಿಗಳು ಬಿಡುಗಡೆಯಾಗಿದ್ದಾರೆ. ಇನ್ನೂ 25ಕ್ಕೂ ಹೆಚ್ಚು ಆರೋಪಿಗಳು ಜೈಲಿನಲ್ಲಿದ್ದಾರೆ ಎಂದು ಕಾರಾಗೃಹದ ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ಮನೆಯ ಮಗುವನ್ನೇ ಅಪಹರಿಸಿದ ಪ್ರೇಮಿಗಳು…ಯಾಕೆ ಗೊತ್ತಾ ?