ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ನಾವು ಬದ್ಧ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್


Team Udayavani, Jun 7, 2021, 7:55 PM IST

ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ನಾವು ಬದ್ಧ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ‘ಎಷ್ಟೇ ಕಷ್ಟ ಎದುರಾದರೂ ರಾಜ್ಯದ ಜನರಿಗೆ ಉಚಿತ ಲಸಿಕೆ ನೀಡಲು ಕಾಂಗ್ರೆಸ್ ಪಕ್ಷ ಮತ್ತು ಅದರ ಘಟಕಗಳು ಶ್ರಮಿಸಲಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಿಸಾನ್ ಕಾಂಗ್ರೆಸ್, ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್, ಇಂಡಿಯನ್ ಯೂತ್ ಕಾಂಗ್ರೆಸ್, ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಮತ್ತು ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾದ ಪ್ರಮುಖ ನಾಯಕರೊಂದಿಗೆ ಸೋಮವಾರ ಸರಣಿ ಸಭೆಗಳನ್ನು ನಡೆಸಿದ ಶಿವಕುಮಾರ್ ಅವರು ಹೇಳಿದ್ದಿಷ್ಟು;

‘ಪಕ್ಷದ ವಿವಿಧ ಘಟಕಗಳಾದ ಕಿಸಾನ್ ಕಾಂಗ್ರೆಸ್, ಐಎನ್‌ಟಿಯುಸಿ, ಯೂತ್ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಮತ್ತು ವಿಧ್ಯಾರ್ಥಿ ಘಟಕ ಎನ್‌ಎಸ್‌ಯುಐ ಸೇರಿದಂತೆ ವಿವಿಧ ಘಟಕಗಳನ್ನು ಪಕ್ಷದ ಉಚಿತ ಲಸಿಕೆ ಅಭಿಯಾನದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವಂತೆ ಸಜ್ಜುಗೊಳಿಸಲಾಗಿದೆ.

ಇದನ್ನೂ ಓದಿ :ಮೂಗಿನ ಮೂಲಕ ಹಾಕುವ ಕೋವಿಡ್ ಹನಿ ಲಸಿಕೆ ಸಂಶೋಧನೆ ಪ್ರಗತಿಯಲ್ಲಿದೆ: ಪ್ರಧಾನಿ ಮೋದಿ

ನಾನು ಪಕ್ಷದ ವಿವಿಧ ಘಟಕಗಳ ಮುಂಚೂಣಿ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ವಿನಾಶಕಾರಿ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲು ನಮ್ಮ ಕಾರ್ಯಕರ್ತರನ್ನು ಸಜ್ಜುಗೊಳಿಸುವಂತೆ ಅವರಿಗೆ ತಿಳಿಸಿದ್ದೇನೆ.

ಬಿಜೆಪಿ ಸರ್ಕಾರವು ತಮ್ಮನ್ನು ತಾವು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಬಡ ಜನರ ಬಗ್ಗೆ ತೀವ್ರ ನಿರ್ಲಕ್ಷ್ಯ ತೋರುತ್ತಾ ಅವರಿಗೆ ಸ್ಪಂದಿಸುವುದನ್ನೇ ಮರೆತಿದೆ.

ಕರ್ನಾಟಕ ಕಾಂಗ್ರೆಸ್ ಈಗಾಗಲೇ ರಾಜ್ಯಾದ್ಯಂತ 172ಕ್ಕೂ ಹೆಚ್ಚು ಆಂಬುಲೆನ್ಸ್ ಗಳನ್ನೂ ಕೋವಿಡ್ ಕೇರ್ಸ್ ಅಭಿಯಾನದಡಿಯಲ್ಲಿ ಸೇವೆ ಸಲ್ಲಿಸಲಾಗುತ್ತಿದೆ. ಅಲ್ಲದೆ ಈಗಾಗಲೇ 3 ಲಕ್ಷ ಜನರಿಗೆ ಲಸಿಕೆ ಹಾಕುವ ಯೋಜನೆಗೆ ಚಾಲನೆ ನೀಡಿದ್ದೇವೆ. ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಜನರಿಗೆ ಲಸಿಕೆ ನೀಡಲು ತಮ್ಮ ಸ್ವಂತ ಹಣ ಖರ್ಚು ಮಾಡಿ ಲಸಿಕೆಗಳನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೆ ಸಮಾಜದ ಎಲ್ಲಾ ವರ್ಗಗಳನ್ನು ತಲುಪಲು ಹಳ್ಳಿಗಳಲ್ಲಿ ಮತ್ತು ತಾಲ್ಲೂಕುಗಳಲ್ಲಿ ಉಚಿತ ಶಿಬಿರಗಳನ್ನು ಆಯೋಜಿಸುತ್ತಿದ್ದೇವೆ.

ಅತ್ತ ಬಿಜೆಪಿ ಸಂಸದರು ಮತ್ತು ಶಾಸಕರು ಪ್ರತಿ ಲಸಿಕೆಗೆ  700 ರೂ. ಪಡೆಯುವ ಮೂಲಕ ಜನರನ್ನು ಲೂಟಿ ಮಾಡುತ್ತಿದ್ದಾರೆ, ಆದರೆ ನಮ್ಮ ಕಾಂಗ್ರೆಸ್ ಪಕ್ಷವು ಜನರ ಬಗ್ಗೆ ನೈಜ ಕಾಳಜಿ ವಹಿಸಿದೆ. ಹಾಗಾಗಿ ಕಾಂಗ್ರೆಸ್ ಪಕ್ಷವು ₹100 ಕೋಟಿ ಕಾರ್ಯಕ್ರಮ ಮೂಲಕ ಲಸಿಕೆಗಳನ್ನು ಖರೀದಿಸಲು ಮುಂದಾಗಿದ್ದು ಪಕ್ಷದ ವತಿಯಿಂದ 10 ಕೋಟಿ ರೂ. ಮತ್ತು ಶಾಸಕರ ಮತ್ತು ಸಂಸದರ ನಿಧಿಯಿಂದ 90 ಕೋಟಿ ರೂ. ನೀಡಲು ತಯಾರಿದೆ ಆದರೆ ಸರ್ಕಾರ ಇದಕ್ಕೆ ಅನುಮತಿ ನೀಡುತ್ತಿಲ್ಲ.’

ಇದೇ ವೇಳೆ ‘ಸಂಜೀವನಿ’ ಯೋಜನೆ ಅಡಿಯಲ್ಲಿ ಆಮ್ಲಜನಕ ಸೌಲಭ್ಯವುಳ್ಳ ಮೂರು ಆಂಬುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಿದರು. ಜತೆಗೆ ಸುಮಾರು ಐದು ನೂರಕ್ಕೂ ಹೆಚ್ಚು ಕೋವಿಡ್ ಪೀಡಿತ ಕುಟುಂಬಗಳಿಗೆ ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.