ಮೇಕೆದಾಟು ಪಾದಯಾತ್ರೆ ಆರಂಭ: ಪಾಂಚಜನ್ಯ ಮೊಳಗಿದೆ ಎಂದ ಡಿ.ಕೆ.ಶಿವಕುಮಾರ್
Team Udayavani, Jan 9, 2022, 12:22 PM IST
ಕನಕಪುರ : ”ಐತಿಹಾಸಿಕ ಹೋರಾಟಕ್ಕೆ ಪಾಂಚಜನ್ಯ ಮೊಳಗಿದೆ ಇದು ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನದ ʼಸಂಗಮ’ʼ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಭಾನುವಾರ ‘ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಗೆ ಚಾಲನೆ ನೀಡಿ ಟ್ವೀಟ್ ಮಾಡಿದ್ದಾರೆ.
ಮೇಕೆದಾಟು ಸಂಗಮದಲ್ಲಿ ಸರ್ವಧರ್ಮಗುರುಗಳು ಸಸಿಗಳಿಗೆ ನೀರೆರೆಯುವ ಮೂಲಕ ನಡಿಗೆ ಆರಂಭಕ್ಕೆ ಚಾಲನೆ ನೀಡಿದರು. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಹೋರಾಟಕ್ಕೆ ಜೋಶ್ ತುಂಬಿದರು.
ಕಾಂಗ್ರೆಸ್ ನ ಹಿರಿಯ ನಾಯಕರು,ಸಂಸದರು, ಶಾಸಕರು, ಮಹಿಳಾ ಪ್ರತಿನಿಧಿಗಳು ಸೇರಿದಂತೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದು, ಕಾರ್ಯಕ್ರಮದಲ್ಲಿ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಲಾಗಿರುವುದು ಕಂಡು ಬಂದಿದೆ. ಹೆಚ್ಚಿನ ನಾಯಕರೇ ಮಾಸ್ಕ್ ಧರಿಸದೇ ಭಾಗಿಯಾಗಿದ್ದರು.
ಪಾದಯಾತ್ರೆಗೆ ಯಾವ್ಯಾವ ಜಿಲ್ಲೆಯವರು, ಯಾವ್ಯಾವ ದಿನದಂದು ಭಾಗವಹಿಸಬೇಕು ಎಂಬ ಸೂಚನೆ ಈಗಾಗಲೆ ಆಯಾ ಜಿಲ್ಲೆಗೆ ನೀಡಲಾಗಿದೆ. ಅಲ್ಲದೆ ಪಾದಯಾತ್ರೆ ವೇಳೆ ನೀರು ಸರಬರಾಜು, ಆಹಾರ, ವೈದ್ಯಕೀಯ, ವಸತಿ ಹೀಗೆ ಪ್ರಮುಖ ಅಂಶಗಳಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದ್ದಾರೆ.
ಐತಿಹಾಸಿಕ ಹೋರಾಟಕ್ಕೆ ಪಾಂಚಜನ್ಯ ಮೊಳಗಿದೆ. ಇದು ಕನ್ನಡಿಗರ ಹಕ್ಕು ಮತ್ತು ಸ್ವಾಭಿಮಾನದ ʼಸಂಗಮʼ. #NammaNeeruNammaHakkau pic.twitter.com/v9Q9G00Q4A
— DK Shivakumar (@DKShivakumar) January 9, 2022
ಪಾದಯಾತ್ರೆ ನಡೆಯುವ ದಿಗಳಲ್ಲಿ ಪ್ರತಿನಿತ್ಯ ತಲಾ ಒಂದು ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿ ದ್ದಾರೆ. ಮೊದಲ ದಿನ ಭಾನುವಾರ ಪಕ್ಷದ ಮುಖಂಡರು ಮತ್ತು ಪ್ರಮುಖ ಕಾರ್ಯಕರ್ತರಿಗೆ ಹಾಗೂ ಚಾಮರಾಜನಗರ ಹಾಗೂ ಕೊಡಗು ವ್ಯಾಪ್ತಿಯ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಕೊಡಲಾಗಿದೆ.
ಎರಡನೇ ದಿನ ಚಾಮರಾಜನಗರ ಜಿಲ್ಲೆ ಹಾಗೂ ಕನಕಪುರ ಕ್ಷೇತ್ರ, ಮೂರನೇ ದಿನದ ಪಾದಯಾತ್ರೆಯಲ್ಲಿ ಚಾಮರಾಜನಗರ ಲೋಕಸಭಾ ಹಾಗೂ ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. 4ನೇ ದಿನದ ಪಾದಯಾತ್ರೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ, 5ನೇ ದಿನ ಮಂಡ್ಯ ಹಾಗೂ ರಾಮನಗರ ಜಿಲ್ಲೆ , 6ನೇ ದಿನ ತುಮಕೂರು ಲೋಕಸಭಾ ಕ್ಷೇತ್ರ ಹಾಗೂ ಮಾಗಡಿ ವಿಧಾನ ಸಭಾ ಕ್ಷೇತ್ರದ ಮುಖಂಡರು,ಕಾರ್ಯಕರ್ತರು ಪಾದಯಾತ್ರೆ ಯಲ್ಲಿ ಭಾಗವಹಿಸಲಿದ್ದಾರೆ.
7ನೇ ದಿನ ಬೆಂಗಳೂರು ನಗರ ವ್ಯಾಪ್ತಿಯ ನೆಲಮಂಗಲ, ವಿಜಯನಗರ ರಾಜರಾಜೇಶ್ವರಿ ನಗರ, ಬಸವನಗುಡಿ, ಯಶವಂತಪುರ, ಗೋವಿಂದರಾಜನಗರ, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರ, 8ನೇ ದಿನ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೆಂಗಳೂರಿನ ಬೊಮ್ಮನಹಳ್ಳಿ,ಬಿಟಿಎಂ ಲೇಔಟ್ , ಜಯನಗರ, ಶಾಂತಿನಗರ,ಬೆಂಗಳೂರು ದಕ್ಷಿಣ ಹಾಗೂ ಸಿ.ವಿ.ರಾಮನ್ ನಗರ ಕ್ಷೇತ್ರದ ಮುಖಂಡರು, ಕಾರ್ಯಕರ್ತರು ಭಾಗವಹಿಸುವರು.
9ನೇ ದಿನದ ಪಾದಯಾತ್ರೆಯಲ್ಲಿ ಹೊಸಕೋಟೆ, ಯಲಹಂಕ, ಹೆಬ್ಟಾಳ, ಗಾಂಧಿನಗರ, ರಾಜಾಜಿನಗರ, ಶಿವಾಜಿನಗರ, ಮಹಾಲಕ್ಷ್ಮೀ ಲೇಔಟ್, ದೇವನಹಳ್ಳಿ ಸೇರಿದಂತೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 11ನೇ ದಿನ ಚಿಕ್ಕಪೇಟೆ, ಶಿವಾಜಿ ನಗರ, ದಾಸರಹಳ್ಳಿ, ಗಾಂಧಿನಗರ ವಿಧಾನಸಭಾ ಕ್ಷೇತ್ರ ಸೇರಿದಂತೆ ಬೀದರ್, ಶಿವಮೊಗ್ಗ, ಕಲಬುರ್ಗಿ, ಬಳ್ಳಾರಿ ರಾಯಚೂರು ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಗಳಿಂದ ಮುಖಂಡರು ಕಾರ್ಯಕರ್ತರ ಸಮ್ಮಿಲನದಲ್ಲಿ ಪಾದಯಾತ್ರೆ ಸಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾವೇಶಗೊಳ್ಳಲಿದೆ ಎಂಬ ಮಾಹಿತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲ್ಯವಿವಾಹ ತಡೆಗೆ ರಾಜ್ಯಾದ್ಯಂತ ಸ್ಫೂರ್ತಿ: ಹೆಚ್ಚುತ್ತಿರುವ ಪಿಡುಗು ನಿಯಂತ್ರಣಕ್ಕೆ ಈ ಕ್ರಮ
ರಸಪ್ರಶ್ನೆ ಸ್ಪರ್ಧೆ: 10 ಲ.ರೂ. ಬಂಪರ್ ಬಹುಮಾನ!
ಪದವಿ ಕಾಲೇಜು ಶುಲ್ಕ ನಿಗದಿ ಮಾಡಿದ ಕಾಲೇಜು ಶಿಕ್ಷಣ ಇಲಾಖೆ
ಅಗ್ನಿಪಥ ಯೋಜನೆ ಜಾರಿ ವಿರೋಧಿಸಿ ರಾಜಭವನ ಮುತ್ತಿಗೆಗೆ ಯುವ ಕಾಂಗ್ರೆಸ್ ಯತ್ನ
ಪೊಲೀಸ್ ಕಾನ್ಸ್ಟೇಬಲ್ : ಕನಿಷ್ಠ ಸೇವೆ 6ರಿಂದ 5 ವರ್ಷಕ್ಕೆ ಇಳಿಕೆ: ಡಿಸಿಪಿ ನಿಶಾ ಜೇಮ್ಸ್
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್
ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್ ಅಭಿಷೇಕ ಮಾಡಿ ಯುವಕರು!
ಪಾಕ್ನ ಎಲ್ಲೆಲ್ಲೂ ಪೇಪರ್ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ
ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ